ಕರ್ನಾಟಕ ಪರ ಕಾವೇರಿ ವಾದ ಮಂಡಿಸಿದ ಸುಪ್ರೀಂಕೋರ್ಟ್ ಹಿರಿಯ ವಕೀಲ ಪಾಲಿ ನಾರಿಮನ್ ಇನ್ನಿಲ್ಲ

By Anusha KbFirst Published Feb 21, 2024, 9:12 AM IST
Highlights

ಸುಪ್ರೀಂಕೋರ್ಟ್‌ನ ಖ್ಯಾತ ವಕೀಲ, ಪ್ರಸಿದ್ಧ ನ್ಯಾಯಶಾಸ್ತ್ರಜ್ಞ ಫಾಲಿ ಎಸ್ ನಾರಿಮನ್ ವಯೋಸಹಜ ಖಾಯಿಲೆಗಳಿಂದ ಇಂದು ನವದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಇವರು ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಪರ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಿದ್ದರು. 

ನವದೆಹಲಿ: ಸುಪ್ರೀಂಕೋರ್ಟ್‌ನ ಖ್ಯಾತ ವಕೀಲ, ಪ್ರಸಿದ್ಧ ನ್ಯಾಯಶಾಸ್ತ್ರಜ್ಞ ಫಾಲಿ ಎಸ್ ನಾರಿಮನ್ ವಯೋಸಹಜ ಖಾಯಿಲೆಗಳಿಂದ ಇಂದು ನವದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಇವರು ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಪರ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಿದ್ದರು. 

ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದ ನಾರಿಮನ್, 1961 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಸುಮಾರು 70 ವರ್ಷಗಳಿಗೂ ಹೆಚ್ಚು ಕಾಲ ಕಾನೂನು ಅಭ್ಯಾಸ ಮಾಡಿರುವ ನಾರಿಮನ್, ಆರಂಭದಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ವೃತ್ತಿ ಆರಂಭಿಸಿದ ಅವರು ನಂತರ  1972 ರಿಂದ ನವದೆಹಲಿಯಲ್ಲಿ ಭಾರತದ ಸುಪ್ರೀಂಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲು ಆರಂಭಿಸಿದರು.. ಮೇ 1972 ರಲ್ಲಿ ಬಾಂಬೆಯಿಂದ ದೆಹಲಿಗೆ ಸ್ಥಳಾಂತರಗೊಂಡಾಗಲೇ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದರು.

1991ರಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಲ್ಲಿಸಿದ ಸೇವೆಗಾಗಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿತ್ತು. ಹಾಗೆಯೇ 2007 ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.  ನಾರಿಮನ್ ಅವರು 1991 ರಿಂದ 2010 ರವರೆಗೆ ಬಾರ್ ಅಸೋಸಿಯೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿದ್ದರು. 1989 ರಿಂದ 2005 ರವರೆಗೆ ICC ಪ್ಯಾರಿಸ್‌ ಇಂಟರ್‌ ನ್ಯಾಷಷನಲ್ ಕೋರ್ಟ್ ಆಫ್ ಆರ್ಬಿಟ್ರೇಶನ್‌ನ ((ಇಂಟರ್ನ್ಯಾಷನಲ್ ಚೇಂಬರ್ ಆಫ್ ಕಾಮರ್ಸ್) ಉಪಾಧ್ಯಕ್ಷರಾಗಿದ್ದರು. ಮತ್ತು ಇಂಟರ್‌ನ್ಯಾಷನಲ್ ಕೌನ್ಸಿಲ್ ಫಾರ್ ಕಮರ್ಷಿಯಲ್ ಆರ್ಬಿಟ್ರೇಶನ್‌ನ ಅಧ್ಯಕ್ಷರಾಗಿದ್ದರು. ಈ ಹುದ್ದೆಗಳ ಜೊತೆಗೆ ಅವರು  1995 ರಿಂದ 1997 ರವರೆಗೆ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ ಜಿನೀವಾದ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿದ್ದರು.

click me!