IAS ಹೆಂಡ್ತಿ ವಿದೇಶ ಪ್ರವಾಸದಲ್ಲಿದ್ದಾಗಲೇ ಗಂಡ ಐಪಿಎಸ್ ಅಧಿಕಾರಿ ಸಾವಿಗೆ ಶರಣು

Published : Oct 08, 2025, 09:44 PM IST
IPS officer kills self

ಸಾರಾಂಶ

IPS Officer Puran Kumar Singh: ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಮನೆಯಲ್ಲೇ ಸ್ವತಃ ಗುಂಡಿಕ್ಕಿಕೊಂಡು ಸಾವಿಗೆ ಶರಣಾಗಿದ್ದಾರೆ. ವೈ ಪುರಾನ್‌ ಕುಮಾರ್ ಸಿಂಗ್ ಸಾವಿನ ಹಾದಿ ಹಿಡಿದ ಪೊಲೀಸ್ ಅಧಿಕಾರಿ. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ,

ಐಪಿಎಸ್ ಅಧಿಕಾರಿ ಸಾವಿಗೆ ಶರಣು

ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಮನೆಯಲ್ಲೇ ಸ್ವತಃ ಗುಂಡಿಕ್ಕಿಕೊಂಡು ಸಾವಿಗೆ ಶರಣಾಗಿದ್ದಾರೆ. ವೈ ಪುರಾನ್‌ ಕುಮಾರ್ ಸಿಂಗ್ ಸಾವಿನ ಹಾದಿ ಹಿಡಿದ ಪೊಲೀಸ್ ಅಧಿಕಾರಿ. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಚಂಡೀಗಢದ ತಮ್ಮ ಮನೆಯಲ್ಲೇ ಅವರು ಗುಂಡಿಕ್ಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಪುರಾನ್‌ ಕುಮಾರ್ ಸಿಂಗ್ ಅವರು ಭಾರತೀಯ ಪೊಲೀಸ್ ಸೇವೆಯಲ್ಲಿ ಉನ್ನತ ಹುದ್ದೆಯಾಗಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದರು ಪ್ರಸ್ತುತ ಅವರು ರೋಹ್ಟಕ್‌ನ ಸುನಾರಿಯಾದಲ್ಲಿರುವ ಪೊಲೀಸ್ ಟ್ರೈನಿಂಗ್ ಸೆಂಟರ್‌ನಲ್ಲಿ ಕೆಲಸದಲ್ಲಿದ್ದರು. ಚಂಡಿಗಢದಲ್ಲಿರುವ ಸೆಕ್ಟರ್ 11ರಲ್ಲಿರುವ ಮನೆಯಲ್ಲಿ ಅವರು ಸಾವಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು,ಸಾವಿಗೆ ನಿಖರ ಕಾರಣ ತಿಳಿದು ಬಂದಿದೆ.

ಮನೆಯಲ್ಲೇ ಸ್ವತಃ ಗುಂಡಿಕ್ಕಿಕೊಂಡು ಸಾವಿಗೆ ಶರಣಾದ ಐಪಿಎಸ್ ಅಧಿಕಾರಿ

ಐಪಿಎಸ್ ಅಧಿಕಾರಿ ಸಾವಿಗೆ ಶರಣಾಗಿರುವ ಬಗ್ಗೆ ಮಧ್ಯಾಹ್ನ 1.30 ರ ಸುಮಾರಿಗೆ, ನಮಗೆ ಸೆಕ್ಟರ್ 11 ರ ಪೊಲೀಸ್ ಠಾಣೆಯಲ್ಲಿ ಮಾಹಿತಿ ಸಿಕ್ಕಿತು. ಸೆಕ್ಟರ್ 11 ರ ಎಸ್‌ಎಚ್‌ಒ ಮತ್ತು ಅವರ ತಂಡವು ಘಟನಾ ಸ್ಥಳವನ್ನು ಪರಿಶೀಲಿಸಿತು. ಮೃತದೇಹವನ್ನು ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಅವರದು ಎಂದು ಗುರುತಿಸಲಾಗಿದೆ ಎಂದು ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್‌ದೀಪ್ ಕೌರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಆತ್ಮಹತ್ಯೆ ಪತ್ರವೇನಾದರೂ ಸಿಕ್ಕಿದೆಯಾ ಎಂದು ಕೇಳಿದಾಗ ಪ್ರತಿಕ್ರಿಯಿಸಿದ ಅವರು ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯದ ತಂಡವು ಸ್ಥಳವನ್ನು ಪರಿಶೀಲಿಸುತ್ತಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಹೆಂಡ್ತಿ ಅಮನ್‌ ಪಿ ಕುಮಾರ್ ಐಎಎಸ್ ಅಧಿಕಾರಿ: ವಿದೇಶ ಪ್ರವಾಸದಲ್ಲಿದ್ದ ಪತ್ನಿ

2001ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಪುರಾನ್‌ ಕುಮಾರ್ ಅವರು, ಭಾರತೀಯ ಪೊಲೀಸ್ ಸೇವೆಯಲ್ಲಿ ಉನ್ನತ ಹುದ್ದೆಯಾಗಿದ್ದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದರು ಮತ್ತು ಸೆಪ್ಟೆಂಬರ್ 29 ರಂದು ರೋಹ್ಟಕ್‌ನ ಸುನಾರಿಯಾದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದಲ್ಲಿ (ಪಿಟಿಸಿ) ನೇಮಕಗೊಂಡಿದ್ದರು. ಈ ಅಧಿಕಾರಿಯ ಪತ್ನಿ ಅಮನ್ ಪಿ ಕುಮಾರ್ ಅವರು ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಜಪಾನ್‌ಗೆ ಅಧಿಕೃತ ಪ್ರವಾಸದಲ್ಲಿದ್ದಾರೆ. ಅವರು ನಾಳೆ ಸಂಜೆ ಭಾರತಕ್ಕೆ ಹಿಂತಿರುಗಲಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಿಶೇಷ ಮನವಿ:

ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:

Sahai Helpline - 080 2549 7777

 

ಇದನ್ನೂ ಓದಿ: ನಿದ್ದೆಯಲ್ಲಿದ್ದ ಗಂಡನ ಮೇಲೆ ಬಿಸಿ ಎಣ್ಣೆ ಸುರಿದು ಖಾರದ ಪುಡಿ ಎರಚಿದ ಪತ್ನಿ
ಇದನ್ನೂ ಓದಿ: ಮೊದಲು 60 ಕೋಟಿ ಪಾವತಿಸಿ: ಶಿಲ್ಪಾ ಶೆಟ್ಟಿಗೆ ವಿದೇಶ ಪ್ರವಾಸಕ್ಕೆ ಅನುಮತಿ ನಿರಾಕರಿಸಿದ ಕೋರ್ಟ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ