ಬಿಜೆಪಿ ಸೇರಿದ ಒಂದೇ ವರ್ಷದಲ್ಲೇ ಮತ್ತೆ ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಹಿರಿಯ ನಾಯಕ!

Published : Aug 29, 2020, 02:55 PM ISTUpdated : Aug 29, 2020, 03:00 PM IST
ಬಿಜೆಪಿ ಸೇರಿದ ಒಂದೇ ವರ್ಷದಲ್ಲೇ ಮತ್ತೆ ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಹಿರಿಯ ನಾಯಕ!

ಸಾರಾಂಶ

ಕಳೆದ ಲೋಕ ಸಭಾ ಚುನಾವಣೆಯಲ್ಲಿ 10 ಸ್ಥಾನ ಗೆದ್ದ ಪಶ್ಚಿಮ ಬಂಗಾಳ ಬಿಜೆಪಿ ಇತಿಹಾಸ ರಚಿಸಿತ್ತು. ಇದರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷದ ನಾಯಕರು ಬಿಜೆಪಿಯತ್ತ ಮುಖ ಮಾಡಿದ್ದರು. ಇದೀಗ  ಒಂದು ವರ್ಷದ ಬಳಿಕ ಹಿರಿಯ ನಾಯಕ ಬಿಜೆಪಿ‌ಗೆ ಗುಡ್‌ಬೈ ಹೇಳಿ ಮತ್ತೆ ತೃಣಮೂಲ ಕಾಂಗ್ರೆಸ್‌ಗೆ ಮರಳಿದ್ದಾರೆ.

ಕೊಲ್ಕತಾ(ಆ.29):  ಪಶ್ಚಿಮ ಬಂಗಾಳ ಬಿಜೆಪಿಗೆ ಮತ್ತೆ ಇರಿಸು ಮುರಿಸು ಉಂಟಾಗಿದೆ. 2019ರಲ್ಲಿ ತೃಣಮೂಲ ಕಾಂಗ್ರೆಸ್ ಹಿರಿಯ ನಾಯಕ ತುಷಾರ್ ಕಾಂತಿ ಬಟ್ಟಾಚಾರ್ಯರನ್ನು ಬಿಜೆಪಿ ಆತ್ಮೀಯವಾಗಿ ಪಕ್ಷಕ್ಕೆ  ಸ್ವಾಗತಿಸಿತ್ತು. ಆದರೆ ಒಂದೇ ವರ್ಷದಲ್ಲಿ ತುಷಾರ್ ಕಾಂತಿ ಬಿಜೆಪಿಗೆ ಗುಡ್ ಬೈ ಹೇಳಿ ಮತ್ತೆ ತೃಣಮೂಲ ಕಾಂಗ್ರೆಸ್‌ಗೆ ಮರಳಿದ್ದಾರೆ.

ಮಮತಾ ರಾಜಕೀಯ ನಿರಾಶ್ರಿತ ಆಗುವುದು ನಿಶ್ಚಿತ: ಶಾ.

20116ರ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಶ್ನಪುರ್ ಕ್ಷೇತ್ರದಿಂದ ಕಾಂಗ್ರೆಸ್ ಅಬ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದರು. ಬಳಿಕ ನೇರವಾಗಿ ತೃಣಮೂಲ ಕಾಂಗ್ರೆಸ್‌ಗೆ ಸೇರಿಕೊಂಡಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಸಾಧನೆ ಮಾಡಿತ್ತು. 42 ಲೋಕಸಭಾ ಸ್ಥಾನಗಳ ಪೈಕಿ 18 ಸ್ಥಾನ ಗೆದ್ದಿತ್ತು. ಇದರ ಬೆನ್ನಲ್ಲೇ ತುಷಾರ್ ಕಾಂತಿ ಬಿಜೆಪಿ ಸೇರಿಕೊಂಡಿದ್ದರು.

ಬಿಜೆಪಿ ಸಂಸದ‌ ಘೋಷ್‌ ಮೇಲೆ ಹಲ್ಲೆ!

ಕೆಲ ಕಾರಣಗಳಿಂದ ತೃಣಮೂಲ ಕಾಂಗ್ರೆಸ್ ಪಕ್ಷದ ಜೊತೆ ಅಸಮಾಧಾನವಿತ್ತು. ಆದರೆ ತೃಣಮೂಲಕ ಕಾಂಗ್ರೆಸ್ ವಿರುದ್ಧ ದ್ವೇಷ ಇರಲಿಲ್ಲ. ಇದೀಗ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮತ್ತೆ ಪಕ್ಷಕ್ಕೆ ಮರಲಿದ್ದೇನೆ ಎಂದು ತುಷಾರ್ ಕಾಂತಿ ಹೇಳಿದ್ದಾರೆ.

ಬಿಜೆಪಿಗೆ ಗುಡೈ ಬೈ ಹೇಳಿದ ತುಷಾರ್ ಕಾಂತಿ ಘಟನೆಗೆ ಹೆಚ್ಚಿನ ಮಹತ್ವ ಕೊಡಬೇಕಾದ ಅವಶ್ಯಕತೆ ಇಲ್ಲ ಎಂದು ಪಶ್ಚಿಮ ಬಂಗಾಳ ಬಿಜೆಪಿ ಹೇಳಿದೆ. 2019ರಲ್ಲಿ ಬಿಜೆಪಿ ಸೇರಿದ ತುಷಾರ್ ಕೇವಲ ಕಾಗದ ಪತ್ರದಲ್ಲಿ ಮಾತ್ರ ಬಿಜೆಪಿಯಲ್ಲಿದ್ದರು. ಪಕ್ಷದ ಯಾವುದೇ ಚಟುವಟಿಕೆಯಲ್ಲಿ ಪಾಲ್ಗೊಂಡಿಲ್ಲ. ಹೀಗಾಗಿ ತುಷಾರ್ ನಿರ್ಗಮನದಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಸಾಧನೆ ಮಾಡಿತ್ತು. ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಗರಿಷ್ಠ ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್‌ನ 7 ನಾಯಕರು, ಸಿಪಿಎಂ ಹಾಗೂ ಕಾಂಗ್ರೆಸ್‌ನ ತಲಾ ಓರ್ವ ನಾಯಕರು ಬಿಜೆಪಿ ಸೇರಿಕೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!