ಪುಣೆ ಮೂಲದ ಲಸಿಕೆ ಉತ್ಪಾದಕ ಕಂಪನಿ ಸೀರಂ ಇನ್‌ಸ್ಟಿಟ್ಯೂಟ್ ಮುಖ್ಯಸ್ಥ ಅದಾರ್ ಪೂನಾವಾಲಾ| ಪೂನಾವಾಲಾಗೆ ‘ವೈ’ ಭದ್ರತೆ
ನವದೆಹಲಿ(ಏ.29): ಪುಣೆ ಮೂಲದ ಲಸಿಕೆ ಉತ್ಪಾದಕ ಕಂಪನಿ ಸೀರಂ ಇನ್‌ಸ್ಟಿಟ್ಯೂಟ್ ಮುಖ್ಯಸ್ಥ ಅದಾರ್ ಪೂನಾವಾಲಾ ಅವರಿಗೆ ಶೀಘ್ರ ‘ವೈ’ ಭದ್ರತೆ ಕಲ್ಪಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಹೀಗಾಗಿ ಇನ್ನು ಮುಂದಿನ ದಿನಗಳಲ್ಲಿ ಪೂನಾವಾಲಾ ಅವರಿಗೆ ಸಿಆರ್‌ಪಿಎಫ್ ಯೋಧರು ಭದ್ರತೆ ಒದಗಿಸಲಿದ್ದಾರೆ.
ಪೂನಾವಾಲಾ ಅವರಿಗೆ ಕೇಂದ್ರ ಸರ್ಕಾರ ಭದ್ರತೆ ಕಲ್ಪಿಸಬೇಕು ಎಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೀರಂ ಸಂಸ್ಥೆಯ ನಿರ್ದೇಶಕರಾದ ಪ್ರಕಾಶ್ ಕುಮಾರ್ ಸಿಂಗ್ ಅವರು ಏ.16ರಂದು ಪತ್ರ ಬರೆದಿದ್ದರು.
undefined
ಈ ಪತ್ರದಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರದ ಜೊತೆ ನಾವು ಹೆಗಲಿಗೆ ಹೆಗಲು ಕೊಟ್ಟು ಬೆಂಬಲವಾಗಿ ನಿಂತಿದ್ದೇವೆ. ಆದರೆ ಕೋವಿಶೀಲ್ಡ್ ಲಸಿಕೆ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಪೂನಾವಾಲಾ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಪೂನಾವಾಲಾ ಅವರಿಗೆ ಭದ್ರತೆ ಕಲ್ಪಿಸುವಂತೆ ಕೋರಿದ್ದರು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona