ಸೋಶಿಯಲ್ ಮೀಡಿಯಾ ಬಳಕೆಗೆ ಕನಿಷ್ಠ ಪ್ರಾಯ ನಿಗದಿ ಮಾಡಿ: ಹೈಕೋರ್ಟ್ ಸಲಹೆ

Published : Sep 20, 2023, 03:19 PM IST
ಸೋಶಿಯಲ್ ಮೀಡಿಯಾ ಬಳಕೆಗೆ ಕನಿಷ್ಠ ಪ್ರಾಯ ನಿಗದಿ ಮಾಡಿ: ಹೈಕೋರ್ಟ್ ಸಲಹೆ

ಸಾರಾಂಶ

ಸೋಶಿಯಲ್ ಮೀಡಿಯಾ ಬಳಕೆಗೆ ಕನಿಷ್ಠ ವಯೋಮಿತಿ ಜಾರಿ ಮಾಡುವ ಮೂಲಕ ಯುವಜನರಿಂದ ಅದರಲ್ಲೂ ಮುಖ್ಯವಾಗಿ ಶಾಲೆಗೆ ಹೋಗುವ ಮಕ್ಕಳನ್ನು ಅವುಗಳಿಂದ ದೂರ ಮಾಡುವುದು ಉತ್ತಮ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಬೆಂಗಳೂರು : ಸೋಶಿಯಲ್ ಮೀಡಿಯಾ ಬಳಕೆಗೆ ಕನಿಷ್ಠ ವಯೋಮಿತಿ ಜಾರಿ ಮಾಡುವ ಮೂಲಕ ಯುವಜನರಿಂದ ಅದರಲ್ಲೂ ಮುಖ್ಯವಾಗಿ ಶಾಲೆಗೆ ಹೋಗುವ ಮಕ್ಕಳನ್ನು ಅವುಗಳಿಂದ ದೂರ ಮಾಡುವುದು ಉತ್ತಮ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಸ್ತುತ ಎಕ್ಸ್ ಎಂದು ಕರೆಯಲ್ಪಡುವ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ಪ್ರಕರಣವೊಂದರಲ್ಲಿ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಜಡ್ಜ್‌  ವಿಧಿಸಿದ 50 ಲಕ್ಷ ರೂ ದಂಡದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ವೇಳೆ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.  ಶಾಲೆಗೆ ಹೋಗುವ ಮಕ್ಕಳು ಮೊಬೈಲ್‌ ಹಾಗೂ ಸಾಮಾಜಿಕ ಜಾಲತಾಣಕ್ಕೆ ದಾಸರಾಗಿದ್ದಾರೆ ಎಂಬ ವಿಚಾರವನ್ನು ಗಮನಿಸಿದ ಪೀಠ, ಶಾಲೆಗೆ ಹೋಗುವ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು ನಿಷೇಧ ಮಾಡಿದರೆ ಅದು ದೇಶಕ್ಕೆ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿತು. 

ಕರ್ನಾಟಕ ಹೈಕೋರ್ಟ್‌ನ (Karnataka High court) ನ್ಯಾಯಮೂರ್ತಿ ಜಿ ನರೇಂದರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ ಪಾಟೀಲ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಇದೇ ವೇಳೆ ಮತದಾನದ ಹಕ್ಕನ್ನು ಪಡೆಯುವಾಗ ವಯಸ್ಸು ಕನಿಷ್ಠ 18 ವರ್ಷವಾಗಿರಬೇಕು ಎಂಬ ನಿಯಮವಿದೆ ಎಂಬುದನ್ನು ಕೂಡ ನ್ಯಾಯಾಲಯ ಇಲ್ಲಿ ಉಲ್ಲೇಖಿಸಿತು. 

ಟ್ವೀಟರ್‌ ಬಳಸುವ ಎಲ್ಲರಿಗೂ ಶುಲ್ಕ: ಎಲಾನ್‌ ಮಸ್ಕ್‌ ಸುಳಿವು

ಶಾಲೆಗೆ ಹೋಗುವ ಮಕ್ಕಳೂ ಸಹ ಸಾಮಾಜಿಕ ಮಾಧ್ಯಮಗಳಿಗೆ (Social Media Addiction) ದಾಸರಾಗಿರುವ ಕಾರಣ ಮತದಾನಕ್ಕೆ 18 ವರ್ಷ ನಿಗದಿ ಮಾಡಿರುವ ಮಾದರಿಯಲ್ಲೇ ಸಾಮಾಜಿಕ ಜಾಲತಾಣ ಬಳಕೆ ಮಾಡಲು ವಯೋಮಿತಿ ನಿಗದಿ ಮಾಡಲು ಚಿಂತನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಮೌಖಿಕವಾಗಿ ಸಲಹೆ ನೀಡಿದೆ.

ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ 2021ರ ಫೆ.ಮತ್ತು 2022ರ ಅವಧಿಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಆಕ್ಷೇಪಿಸಿ ಟ್ವಿಟ್ಟರ್‌ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಕ್ಸ್ ಕಾರ್ಪ್ (ಹಿಂದಿನ ಟ್ವೀಟರ್) ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ ಪಾಟೀಲ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಸಲಹೆ ನೀಡಿದೆ.

ಶಾಲೆಗೆ ಹೋಗುವ ಮಕ್ಕಳು ಸಾಮಾಜಿಕ ಮಾಧ್ಯಮಗಳಿಗೆ ದಾಸರಾಗಿದ್ದಾರೆ. ಸಾಮಾಜಿಕ ಮಾಧ್ಯಮ ನಿಷೇಧಿಸುವುದು ಉತ್ತಮ. ಇದರಿಂದ ಸಾಕಷ್ಟು ಒಳ್ಳೆಯದಾಗುತ್ತದೆ. ಕನಿಷ್ಠ ಪಕ್ಷ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮ ಬಳಕೆಗೆ ವಯೋಮಿತಿ ನಿಗದಿಪಡಿಸಬೇಕು ಎಂದು ಹೇಳಿತು. ಅದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರದ ಪರ ವಕೀಲ ಎಂ.ಎನ್‌. ಕುಮಾರ್, ಕೆಲವು ಆನ್‌ಲೈನ್‌ ಗೇಮ್‌ (Online Game) ಆಡಲು ಕಾನೂನಿನ ಪ್ರಕಾರ ಈಗ ಆಧಾರ್‌ ಮತ್ತು ಇತರೆ ದಾಖಲೆಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.

ಎಲ್ಲಪ್ಪ ನಿಮ್ ಹೆಂಡ್ರು... ಎಲಾನ್ ಮಸ್ಕ್ ಕೇಳಿದ ಟರ್ಕಿ ಅಧ್ಯಕ್ಷ: ವೀಡಿಯೋ ವೈರಲ್

ನ್ಯಾಯಪೀಠ, ಹಾಗಾದರೆ ಆ ಕ್ರಮಗಳನ್ನು ಸಾಮಾಜಿಕ ಮಾಧ್ಯಮ ಬಳಕೆ ಮಾಡುವವರಿಗೆ ಏಕೆ ವಿಸ್ತರಿಸಿಲ್ಲ? ಈಗ ಎಲ್ಲದಕ್ಕೂ ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. 17 ಅಥವಾ 18 ವಯೋಮಿತಿಯ ಮಕ್ಕಳಿಗೆ ದೇಶದ ಹಿತಾಸಕ್ತಿಗೆ ಪೂರಕ ಯಾವುದು ಮಾರಕ ಯಾವುದು ಎಂಬುದನ್ನು ನಿರ್ಧರಿಸುವ ಪ್ರೌಢಿಮೆ ಇದೆಯೇ? ಮತದಾನಕ್ಕೆ ಕನಿಷ್ಠ 21 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಅದೇ ಮಾದರಿಯಲ್ಲಿ ಸಾಮಾಜಿಕ ಮಾಧ್ಯಮ ಬಳಕೆ ಮಾಡಲು ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಎಂದು ವಯೋಮಿತಿ ನಿಗದಿಪಡಿಸುವುದು ಒಳಿತು. ಈ ಕುರಿತು ಚಿಂತನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠ ಮೌಖಿಕವಾಗಿ ಸಲಹೆ ನೀಡಿತು.

ಅಂತಿಮವಾಗಿ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂಬ ಎಕ್ಸ್‌ಕಾರ್ಪ್‌ ಸಂಸ್ಥೆಯ ಮಧ್ಯಂತರ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಬುಧವಾರ ಪ್ರಕಟಿಸುವುದಾಗಿ ಹೇಳಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana