
ತಮಿಳುನಾಡು(ಫೆ.12): ಮತ್ತೊಂದು ಪಟಾಕಿ ದುರಂತ ತಮಿಳುನಾಡಿನ ವಿರುಧುನಗರದಲ್ಲಿ ನಡೆದಿದೆ. ಪಟಾಕಿ ಘಟಕದಲ್ಲಿ ದಿಢೀರ್ ಸ್ಫೋಟ ಸಂಭವಿಸಿದೆ. ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 36 ಮಂದಿಗೆ ತೀವ್ರ ಸುಟ್ಟಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರದಾನಿ ನರೇಂದ್ರ ಮೋದಿ ದುರಂತದಲ್ಲ ಮಡಿದವರಿಗೆ ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗ : ಬಾಂಬ್ ಸ್ಫೋಟ-9 ಮಂದಿಗೆ ಗಾಯ
ತಮಿಳುನಾಡಿನ ವಿರುಧುನಗರದಲ್ಲಿ ಸಂಭವಿಸಿದ ಪಟಾಕಿ ದುರಂತ ನನಗೆ ದುಃಖ ತಂದಿದೆ. ಈ ಸಂದರ್ಭದಲ್ಲಿ ದುಃಖಿತ ಕುಟಂಬದ ಜೊತೆ ನಿಲ್ಲುತ್ತೇನೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ದುರಂತದಲ್ಲಿ ಸಿಲುಕಿದರಿಗೆ ಸಹಾಯ ಮಾಡಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಕಾರ್ಯಾಲಯ ಟ್ವೀಟ್ ಮಾಡಿದೆ.
ಚೆನ್ನೈ ನಗರದಿಂದ 500 ಕಿ.ಮೀ ದೂರದಲ್ಲಿರುವ ವಿರುಧುಗನರದಲ್ಲಿನ ಪಟಾಕಿ ಘಟಕ ದಿಢೀರ್ ಸ್ಫೋಟಗೊಂಡಿದೆ. ಇಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಸುಟ್ಟು ಭಸ್ಮವಾಗಿದ್ದಾರೆ. ಸ್ಫೋಟದ ಸ್ಥಳದಿಂದ 9 ಮೃತದೇಹಳನ್ನು ಹೊರತೆಗೆಯಲಾಗಿದೆ. ಒಬ್ಬರ ಗುರುತು ಸಿಗದಂತೆ ಸುಟ್ಟು ಕರಕಲಾಗಿದ್ದಾರೆ. ಇನ್ನಿಬ್ಬರು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರಿನ KPCL ಪವರ್ ಪ್ಲಾಂಟ್‌ನಲ್ಲಿ ಭಾರೀ ಸ್ಫೋಟ
ಪಟಾಕಿ ಘಟಕದಲ್ಲಿ 50 ಮಂದಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಸದ್ಯ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಇದರ ಜೊತೆ ರಕ್ಷಣ ಕಾರ್ಯಗಳು ಭರದಿಂದ ಸಾಗಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ