
ತ್ರಿಶೂರ್/ತಿರುವನಂತಪುರಂ(ಜು.01): : ಕೊರೋನಾ ಹಾವಳಿಯ ನಡುವೆಯೇ ಕೇರಳದಲ್ಲಿ ಅಂಥ್ರಾಕ್ಸ್ ಬ್ಯಾಕ್ಟೀರಿಯಾ ಹರಡುತ್ತಿರುವುದು ಪತ್ತೆಯಾಗಿದ್ದು, ತೀವ್ರ ಆತಂಕ ಸೃಷ್ಟಿಸಿದೆ. ತ್ರಿಶೂರ್ ಜಿಲ್ಲೆಯ ಅತಿರಾಪಳ್ಳಿ ಕಾಡಿನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಲ್ಲಿ 5-6 ಕಾಡು ಹಂದಿಗಳು ಅಂಥ್ರಾಕ್ಸ್ ಸೋಂಕಿನಿಂದ ಸಾವನ್ನಪ್ಪಿವೆ. ಹೀಗಾಗಿ ಇತರ ಕಾಡು ಪ್ರಾಣಿಗಳು ಹಾಗೂ ಸಾಕು ಪ್ರಾಣಿಗಳಿಗೂ ಈ ಸೋಂಕು ಹರಡುವ ಭೀತಿ ವ್ಯಕ್ತವಾಗಿದೆ.
ಮಣ್ಣಿನಲ್ಲಿ ನೈಸರ್ಗಿಕವಾಗಿಯೇ ಅಂಥ್ರಾಕ್ಸ್ ಬ್ಯಾಕ್ಟೀರಿಯಾ ಇರುತ್ತದೆ. ಅದರ ಸೋಂಕು ಪ್ರಾಣಿಗಳಿಗೆ ತಗಲಿದರೆ ಸಾವು ಸಂಭವಿಸಬಹುದು. ಪ್ರಾಣಿಗಳಿಂದ ಅದು ಮನುಷ್ಯರಿಗೆ ಹರಡುವ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೂ ಕಾಡು ಹಂದಿಗಳು ಸಾಮೂಹಿಕವಾಗಿ ಸಾವನ್ನಪ್ಪಿರುವುದು ಕೇರಳದಲ್ಲಿ ಹಾಗೂ ನೆರೆಯ ಪ್ರದೇಶಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕರ್ನಾಟಕದಲ್ಲಿ 1249 ಕೊರೋನಾ ಪ್ರಕರಣ ಪತ್ತೆ
‘ಅಂಥ್ರಾಕ್ಸ್ ಹರಡುತ್ತಿರುವುದರ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಅತಿರಾಪಳ್ಳಿ ಕಾಡಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಲಸಿಕೆ ಹಾಕಲು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಆತಂಕಪಡುವ ಅಗತ್ಯವಿಲ್ಲ’ ಎಂದು ಕೇರಳದ ಆರೋಗ್ಯ ಇಲಾಖೆ ಅಭಯ ನೀಡಿದೆ. ಅಂಥ್ರಾಕ್ಸ್ ಪತ್ತೆಯಾಗಿರುವ ಅತಿರಾಪಳ್ಳಿ ಗ್ರಾಮ ಪಂಚಾಯ್ತಿ ತ್ರಿಶೂರ್ ಜಿಲ್ಲೆಯಲ್ಲಿ ಬರುತ್ತದೆ. ಸೋಂಕು ಹರಡುವುದನ್ನು ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ