ಅತ್ಯಾಚಾರಿಗಳಿಗೆ ಸರ್ಕಾರಿ ಉದ್ಯೋಗವಿಲ್ಲ: ಕಾಂಗ್ರೆಸ್‌ ಸರ್ಕಾರದಿಂದ ‘ಜಾಬ್‌ ಬುಲ್ಡೋಜರ್’ ಅಸ್ತ್ರ’!

By BK Ashwin  |  First Published Aug 8, 2023, 7:30 PM IST

ಅತ್ಯಾಚಾರ ಹಾಗೂ ಮಹಿಳಾ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಸರ್ಕಾರಿ ಉದ್ಯೋಗದಿಂದ ಬ್ಯಾನ್‌ ಮಾಡಲಾಗುವುದು ಎಂದು ರಾಜಸ್ಥಾನ ಸಿಎಂ ಹೇಳಿದ್ದಾರೆ.


ಜೈಪುರ (ಆಗಸ್ಟ್‌ 8, 2023): ದೇಶದಲ್ಲಿ ಇತ್ತೀಚೆಗೆ ಅತ್ಯಾಚಾರ, ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಇತ್ತೀಚಿಗೆ ವರದಿಯಾಗುತ್ತಿದೆ. ಇನ್ನು, ಒಂದೆಡೆ ಯುಪಿ, ಹರ್ಯಾಣದ ಬಿಜೆಪಿ ಸರ್ಕಾರಗಳು ಆರೋಪಿಗಳ ಕುಟುಂಬದ ಜಾಗದ ಮೇಲೆ ಬುಲ್ಡೋಜರ್‌ ಪ್ರಯೋಗ ಮಾಡ್ತಿದೆ. ಇನ್ನು, ರಾಜಸ್ಥಾನದಲ್ಲಿ ಹೆಚ್ಚು ಅತ್ಯಾಚಾರ ಪ್ರಕರಣಗಳು ಇತ್ತೀಚೆಗೆ ವರದಿಯಾಗುತ್ತಿರುವ ಹಿನ್ನೆಲೆ ರಾಜಸ್ಥಾನ ಸಿಎಂ ಕೊನೆಗೂ ಎಚ್ಚೆತ್ತುಕೊಂಡಿರೋ ಹಾಗಿದೆ. ಇವ್ರು ಜಾಬ್‌ ಬುಲ್ಡೋಜರ್ ಅಸ್ತ್ರ ಪ್ರಯೋಗಿಸಿದ್ದಾರೆ.

ಅಂದರೆ, ಅತ್ಯಾಚಾರ ಹಾಗೂ ಮಹಿಳಾ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಸರ್ಕಾರಿ ಉದ್ಯೋಗದಿಂದ ಬ್ಯಾನ್‌ ಮಾಡಲಾಗುವುದು ಎಂದು ರಾಜಸ್ಥಾನ ಸಿಎಂ ಹೇಳಿದ್ದಾರೆ. ಲೈಂಗಿಕ ಕಿರುಕುಳ, ಅತ್ಯಾಚಾರ, ಅತ್ಯಾಚಾರ ಯತ್ನ ಮತ್ತು ದುಷ್ಕರ್ಮಿಗಳ ಕೃತ್ಯಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಸರ್ಕಾರಿ ಉದ್ಯೋಗದಿಂದ ನಿಷೇಧಿಸಲಾಗುವುದು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್‌ ಮಾಡಿದ್ದಾರೆ.

Rajasthan CM Ashok Gehlot says persons found involved in acts of molestation, rape, attempted rape and miscreants will be banned from government jobs pic.twitter.com/qXU2kqHjO6

— ANI (@ANI)

Tap to resize

Latest Videos

undefined

ಇದನ್ನು ಓದಿ: ಬಾಲಕಿ ಮೇಲೆ ಗ್ಯಾಂಗ್‌ರೇಪ್‌ ಮಾಡಿ ಸುಟ್ಟು ಕೊಂದ ಪಾಪಿಗಳು: ಮನನೊಂದ ತಂದೆ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನ

ಅಷ್ಟೇ ಅಲ್ಲದೆ, ಇದಕ್ಕೂ ಮುನ್ನ ಲೈಂಗಿಕ ದೌರ್ಜನ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಮತ್ತು ಅಂತಹ ಅಪರಾಧಗಳಲ್ಲಿ ಪದೇ ಪದೇ ಭಾಗಿಯಾದವರನ್ನು ಸರ್ಕಾರಿ ಉದ್ಯೋಗದಿಂದ ಅನರ್ಹಗೊಳಿಸಬೇಕು ಎಂದೂ ಹೇಳಿದ್ದಾರೆ. 

ಸೋಮವಾರ ತಡರಾತ್ರಿ ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆಯ ಪರಿಶೀಲನಾ ಸಭೆಯಲ್ಲಿ, ಲೈಂಗಿಕ ಅಪರಾಧಿಗಳ ದಾಖಲೆಯನ್ನು ನಿರ್ವಹಿಸಲು ಮತ್ತು ಅವರ ಅಪರಾಧದ ಬಗ್ಗೆ ಅವರ ನಡತೆ ಪ್ರಮಾಣಪತ್ರದಲ್ಲಿ ನಮೂದಿಸುವಂತೆಯೂ ಅಶೋಕ್‌ ಗೆಹ್ಲೋಟ್ ಪೊಲೀಸರಿಗೆ ಸೂಚಿಸಿದರು. ವಿಶೇಷ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು ಮತ್ತು ಮಹಿಳೆಯರು ಹಾಗೂ ದುರ್ಬಲ ವರ್ಗಗಳ ಮೇಲಿನ ಅಪರಾಧಗಳನ್ನು ತಡೆಗಟ್ಟುವುದು ತಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅಧಿಕೃತ ಹೇಳಿಕೆ ನೀಡಲಾಗಿದೆ. 

ಇದನ್ನೂ ಓದಿ: ಬಾಲಕಿ ರೇಪ್‌ ಮಾಡಿ ಸಾಕ್ಷ್ಯ ನಾಶ ಮಾಡಲು ಕಲ್ಲಿದ್ದಲು ಕುಲುಮೆಯಲ್ಲಿ ಸುಟ್ಟು ಕೊಂದ ಪಾಪಿಗಳು!

“ಅಂತಹ ದುಷ್ಕರ್ಮಿಗಳ ದಾಖಲೆಯನ್ನು ನಿರ್ವಹಿಸಬೇಕು ಮತ್ತು ನಡತೆ ಪ್ರಮಾಣಪತ್ರದಲ್ಲಿ ಕಿರುಕುಳದಲ್ಲಿ ಅವರು ಭಾಗಿಯಾಗಿರುವುದನ್ನು ಉಲ್ಲೇಖಿಸಬೇಕು. ಹೆಚ್ಚು ಪ್ರಕರಣಗಳು ಕಂಡುಬಂದರೆ ಅಂತಹವರನ್ನು ಸರ್ಕಾರಿ ನೌಕರಿಯಿಂದ ಅನರ್ಹಗೊಳಿಸುವವರೆಗೆ ಕ್ರಮ ಕೈಗೊಳ್ಳಬೇಕು ಎಂದು ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಹೇಳಿದರು.

ಇದಕ್ಕೂ ಮುನ್ನ ಗ್ರಾಮೀಣ ಮತ್ತು ನಗರ ಒಲಿಂಪಿಕ್ಸ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಮಾತನಾಡಿದ್ದ ರಾಜಸ್ಥಾನ ಸಿಎಂ, ಕಿಡಿಗೇಡಿಗಳಿಗೆ ಶಾಶ್ವತ ಚಿಕಿತ್ಸೆ ನೀಡುತ್ತೇವೆ ಎಂದು ಹೇಳಿದ್ದರು. ಮಹಿಳೆಯರು ಮತ್ತು ಹುಡುಗಿಯರಿಗೆ ಕಿರುಕುಳ ನೀಡುವ ದುಷ್ಕರ್ಮಿಗಳ ಹೆಸರನ್ನು ರಾಜಸ್ಥಾನ ಲೋಕಸೇವಾ ಆಯೋಗ ಮತ್ತು ಸಿಬ್ಬಂದಿ ಆಯ್ಕೆ ಮಂಡಳಿಗೆ ಕಳುಹಿಸಲಾಗುವುದು’’ ಎಂದೂ ಹೇಳಿದ್ದಾರೆ. 

ಇದನ್ನೂ ಓದಿ: ತಂದೆಯ ಸಹೋದ್ಯೋಗಿಗಳಿಂದ ಅಪ್ರಾಪ್ತ ಸೋದರಿಯರ ಗ್ಯಾಂಗ್‌ ರೇಪ್: ಗರ್ಭಿಣಿಯಾದ ಬಾಲಕಿಯರು

ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ರಾಜ್ಯದಲ್ಲಿ ಅತ್ಯಾಚಾರ, ಕಿರುಕುಳದಂತಹ ಪ್ರಕರಣಗಳ ಸಂಖ್ಯೆ ಹೆಚ್ಚಳದ ಬಗ್ಗೆ ವಿರೋಧ ಪಕ್ಷವಾದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಿರಂತರ ಆರೋಪಗಳ ನಡುವೆ ಸಿಎಂ ಈ ಘೋಷಣೆ ಮಾಡಿದ್ದಾರೆ. ಆದರೂ, ಇತರ ರಾಜ್ಯಗಳ ಪೊಲೀಸರಿಗಿಂತ ರಾಜಸ್ಥಾನ ಪೊಲೀಸರು ಯಾವುದೇ ಅಪರಾಧದ ಬಗ್ಗೆ ತ್ವರಿತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಗೆಹ್ಲೋಟ್ ಸಮರ್ಥಿಸಿಕೊಂಡಿದ್ದಾರೆ. 

ಹಾಗೆ, ನಿಗದಿತ ಸಮಯಕ್ಕಿಂತ ಹೆಚ್ಚು ಕಾಲ ತೆರೆದಿರುವ ಬಾರ್, ನೈಟ್‌ಕ್ಲಬ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಸಿಎಂ ಹೇಳಿದರು. ಈ ಕ್ಲಬ್‌ಗಳ ಮ್ಯಾನೇಜರ್‌ಗಳ ಜೊತೆಗೆ ಮಾಲೀಕರ ಜವಾಬ್ದಾರಿಯನ್ನು ಸಹ ನಿಗದಿಪಡಿಸಲಾಗುತ್ತದೆ ಮತ್ತು ನಿಯಮಗಳನ್ನು ಉಲ್ಲಂಘಿಸಿದ ಕ್ಲಬ್‌ಗಳ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ ಎಂದೂ ಎಚ್ಚರಿಸಿದ್ದಾರೆ. 

ಇದನ್ನೂ ಓದಿ: Love Jihad: ಹಿಂದೂ ಮಹಿಳೆಯೊಂದಿಗೆ ಫೇಸ್‌ಬುಕ್‌ ಲವ್‌: ರೇಪ್‌ ಮಾಡಿ ಗರ್ಭಪಾತ ಮಾಡಿಸಿ ಇಸ್ಲಾಂಗೆ ಮತಾಂತರ!

ಭಿಲ್ವಾರದಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ದುರಂತ ಎಂದು ಬಣ್ಣಿಸಿದ ಮುಖ್ಯಮಂತ್ರಿ, ಈ ವಿಷಯದಲ್ಲಿ ಪೊಲೀಸರು ಕ್ಷಿಪ್ರ ಕ್ರಮ ಕೈಗೊಂಡಿದ್ದು, ಅಪರಾಧಿಗಳಿಗೆ ಶೀಘ್ರ ಶಿಕ್ಷೆ ವಿಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು. ಅದರೆ, ಘಟನೆಗೆ ರಾಜಕೀಯ ಬಣ್ಣ ನೀಡಲು ಯತ್ನಿಸಲಾಗುತ್ತಿದ್ದು, ಇದು ನ್ಯಾಯಸಮ್ಮತವಲ್ಲ ಎಂದೂ ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಹೇಳಿದರು. 

ಇದನ್ನೂ ಓದಿ: Manipur: ಒಂದಲ್ಲ.. ಎರಡಲ್ಲ.. 7 ಅತ್ಯಾಚಾರ ನಡೆದಿದೆ: ಬಗೆದಷ್ಟೂ ಬಯಲಿಗೆ ಬರ್ತಿದೆ ರೇಪ್‌ ಕೇಸ್‌!

click me!