ಮಹಿಳಾ ಪೊಲೀಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಡಿಜಿಪಿ ರಾಜೇಶ್ ದಾಸ್ ದೋಷಿ ಎಂದು ಸಾಬೀತಾಗಿದ್ದು, ನ್ಯಾಯಾಲಯ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಚೆನ್ನೈ: ಮಹಿಳಾ ಪೊಲೀಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಡಿಜಿಪಿ ರಾಜೇಶ್ ದಾಸ್ ದೋಷಿ ಎಂದು ಸಾಬೀತಾಗಿದ್ದು, ನ್ಯಾಯಾಲಯ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತಾಗಿದ್ದ ಅಧಿಕಾರಿಗೆ ತಮಿಳುನಾಡಿನ ವಿಲ್ಲುಪುರಂ ನ್ಯಾಯಾಲಯ ಈಗ ವಿಚಾರಣೆ ನಡೆಸಿ ಜೈಲು ಶಿಕ್ಷೆ ವಿಧಿಸಿದೆ.
2021ರ ಫೆಬ್ರವರಿಯಲ್ಲಿ ಮಹಿಳಾ ಐಪಿಎಸ್ (woman IPS Officer) ಅಧಿಕಾರಿಯೊಬ್ಬರು ಹಿರಿಯ ಅಧಿಕಾರಿಯ ವಿರುದ್ಧ ದೂರು ದಾಖಲಿಸಿದ್ದರು. ಅಂದಿನ ಮುಖ್ಯಮಂತ್ರಿ ಆಗಿದ್ದ ಎಡಪ್ಪಾಡಿ ಕೆ ಪಳನಿಸಾಮಿ (Edapadi Palani swamy) ಅವರ ಭದ್ರತೆಗಾಗಿ ಕರ್ತವ್ಯದ ಮೇಲೆ ಪ್ರಯಾಣಿಸುತ್ತಿದ್ದಾಗ ಅಧಿಕಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳಾ ಅಧಿಕಾರಿ ಆರೋಪಿಸಿದ್ದರು. ಇದಾದ ಬಳಿಕ ಅಂದಿನ ಎಐಎಡಿಎಂಕೆ ಸರ್ಕಾರ (AIADMK government), ಹಿರಿಯ ಪೊಲೀಸ್ ಅಧಿಕಾರಿ ರಾಜೇಶ್ ದಾಸ್‌ನನ್ನು (Rajesh Das) ಸೇವೆಯಿಂದ ಅಮಾನತುಗೊಳಿಸಿತ್ತು. ಅಲ್ಲದೇ ಪ್ರಕರಣದ ವಿಚಾರಣೆಗೆ ಆರು ಜನರ ತನಿಖಾ ತಂಡವನ್ನು ರಚನೆ ಮಾಡಿತ್ತು.
ಬ್ರಿಜ್ ವಿರುದ್ಧ ಜಾರ್ಜ್ಶೀಟ್: 6 ಮಂದಿ ಮೇಲೆ ಲೈಂಗಿಕ ಕಿರುಕುಳ ತನಿಖೆಯಿಂದ ಸಾಬೀತು..!
ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ 68 ಮಂದಿಯ ಹೇಳಿಕೆಯನ್ನು ಪ್ರಾಸಿಕ್ಯೂಷನ್ (prosecution) ದಾಖಲಿಸಿಕೊಂಡಿತ್ತು. ಈಗ ಕೋರ್ಟ್ ಜೈಲು ಶಿಕ್ಷೆ ನೀಡಿರುವುದರಿಂದ ರಾಜೇಶ್ ದಾಸ್ ಮುಂದೆ ಈಗ ಮೇಲಿನ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಹಾಗೂ ತಕ್ಷಣದ ಜಾಮೀನು (immediate bail) ಪಡೆಯುವ ಅವಕಾಶವಿದೆ ಎಂದು ಪ್ರಾಸಿಕ್ಯೂಷನ್ ತಂಡದ ಸದಸ್ಯರೊಬ್ಬರು ಹೇಳಿದರು. ಈ ವಿಷಯವು 2021 ರಲ್ಲಿ ರಾಜಕೀಯ ಪಕ್ಷಗಳ ನಡುವೆ ಚುನಾವಣಾ ವಿಷಯವಾಗಿ ಹೊರಹೊಮ್ಮಿತ್ತು. ಆಗ ವಿರೋಧ ಪಕ್ಷದದಲ್ಲಿದ್ದ ಪ್ರಸ್ತುತ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ (M.K Stalin) ತಮ್ಮ ಡಿಎಂಕೆ ಪಕ್ಷವನ್ನು ಅಧಿಕಾರಕ್ಕೆ ತಂದರೆ ರಾಜ್ಯದಲ್ಲಿ ಸರಿಯಾದ ಕಾನೂನು ಪ್ರಕ್ರಿಯೆ ಮತ್ತು ಅಪರಾಧಿಗೆ ಶಿಕ್ಷೆಯನ್ನು ನೀಡುವ ಭರವಸೆ ನೀಡಿದ್ದರು.
Shivamogga: ಶಿಕ್ಷಣ ಸಂಸ್ಥೆ ಮುಖ್ಯಸ್ಥನಿಂದ ಲೈಂಗಿಕ ಕಿರುಕುಳ, ಆಸ್ಪತ್ರೆಗೆ ಸಾಗಿಸುವಾಗ ದಲಿತ ವಿದ್ಯಾರ್ಥಿನಿ ಸಾವು