
ನವದೆಹಲಿ(ಮಾ.16): ಕಾಂಗ್ರೆಸ್ ನಾಯಕತ್ವ ಬದಲಾವಣೆ ಆಗ್ರಹಿಸಿ ಬಂಡಾಯವೆದ್ದಿರುವ ಜಿ23 ಹಿರಿಯ ನಾಯಕರು ಇಂದು ಮತ್ತೆ ದೆಹಲಿಯಲ್ಲಿ ಸಭೆ ಸೇರಿದ್ದಾರೆ. ಪಕ್ಷದ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಜಿ23 ನಾಯಕರು ಪಾಲ್ಗೊಂಡಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಕೂಡ ಕಾಣಿಸಿಕೊಂಡಿರುವುದು ಕೇಂದ್ರ ಕಾಂಗ್ರೆಸ್‌ನಲ್ಲಿ ತಳಮಳ ಸೃಷ್ಟಿಸಿದೆ.
ಕಪಿಲ್ ಸಿಬಲ್, ಆನಂದ್ ಶರ್ಮಾ, ಮನೀಶ್ ತಿವಾರಿ, ಭೂಪಿಂದರ್ ಹೂಡ, ಅಖಿಲೇಶ್ ಪ್ರಸಾದ್ ಸಿಂಗ್, ಪೃಥ್ವಿರಾಜ್ ಚವ್ಹಾಣ್, ರಾಜ್ ಬಬ್ಬರ್, ಪಿಜೆ ಕುರಿಯನ್, ಮಣಿ ಶಂಕರ್ ಅಯ್ಯರ್ ಸೇರಿದಂತೆ ಹಲವು ನಾಯಕರು ಬಂಡಾಯ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇಷ್ಟು ದಿನ ಕಾಂಗ್ರೆಸ್ ಪಕ್ಷದ ನಿಕಟವರ್ತಿಯಾಗಿ ಗುರುತಿಸಿಕೊಂಡಿದ್ದ ಶಶಿ ತರೂರ್ ಇದೀಗ ಬಹಿರಂಗವಾಗಿ ಬೆಂಬಲ ನೀಡಿದ್ದಾರೆ. ಸಭೆಯಲ್ಲಿ ಪಾಲ್ಗಗೊಂಡಿದ್ದಾರೆ.
congress Meeting ಸೋನಿಯಾ ಗಾಂಧಿ ನಾಯಕತ್ವದಲ್ಲಿ ನಂಬಿಕೆ, ರಾಜೀನಾಮೆ ಬೇಡವೇ ಬೇಡ ಎಂದ ಕಾಂಗ್ರೆಸ್ CWC!
ಗಾಂಧಿ ಕುಟುಂಬಕ್ಕೆ ನಿಷ್ಠೆಯಿಂದ ಇದ್ದ ಶಶಿ ತರೂರ್ ಬಂಡಾಯ ನಾಯಕರ ಸಭೆಯಲ್ಲಿ ಕಾಣಿಸಿಕೊಂಡಿರುವುದು ಕಾಂಗ್ರೆಸ್ ನಾಯಕರಿಗೆ ತೀವ್ರ ತಲೆನೋವಾಗಿದೆ. ಕಾಂಗ್ರೆಸ್‌ನ ಒಂದೊಂದೆ ನಾಯಕರು ಜಿ23 ಬಂಡಾಯ ನಾಯಕರ ಗುಂಪು ಸೇರುತ್ತಿದ್ದಾರೆ. ನಾಯಕತ್ವ ಬದಲಾವಣೆಗೆ ಒತ್ತಡ ಹೆಚ್ಚಾಗುತ್ತಿದೆ. ಆದರೆ ಇತ್ತೀಚಗೆ ನಡೆದ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ.
ಗಾಂಧಿ ಕುಟುಂಬಕ್ಕೆ ನಿಷ್ಠೆಯಿಂದ ಇದ್ದ ತರೂರ್ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬದ ಹೊರತಾಗಿ ಸೂಕ್ತ ನಾಯಕರ ಅಗತ್ಯವಿದೆ ಎಂದು ಸಭೆಯಲ್ಲಿ ಹೇಳಿದ್ದಾರೆ. ಪಂಚ ರಾಜ್ಯಗಳ ಚುನಾವಣೆ ಸೋಲಿನ ಬಳಿಕವೂ ಕಾಂಗ್ರೆಸ್ ಎಚ್ಚೆತ್ತುಕೊಂಡಿಲ್ಲ ಎಂದು ಬಂಡಾಯ ನಾಯಕರು ಸಭೆಯಲ್ಲಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Congress Meeting ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಅಂತ್ಯ, ಮನ್‌ಮೋಹನ್ ಸಿಂಗ್ ಸೇರಿ ಪ್ರಮುಖ ನಾಲ್ವರು ಗೈರು!
ಈ ಸಭೆಗೂ ಮುನ್ನ ಅಂದರೆ ಪಂಚ ರಾಜ್ಯಗಳ ಸೋಲಿನ ಬೆನ್ನಲ್ಲೇ ಗುಲಾಂ ನಬೀ ಆಜಾದ್ ನಿವಾಸದಲ್ಲಿ ಪಕ್ಷದ ಹಿರಿಯ ಭಿನ್ನಮತೀಯ ನಾಯಕರು ಶುಕ್ರವಾರ ಸಭೆ ಸೇರಿದ್ದಾರೆ. ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್, ಮನೀಶ್ ತಿವಾರಿ ಆಜಾದ್ ನಿವಾಸಕ್ಕೆ ಆಗಮಿಸಿದ್ದರು. ಜೊತೆಗೆ ಆನಂದ ಶರ್ಮಾ ಕೂಡಾ ಚರ್ಚೆಯಲ್ಲಿ ಭಾಗವಹಿಸಿದ್ದರು. 2 ವರ್ಷಗಳ ಹಿಂದೆಯೇ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಯವರಿಗೆ ಕಾಂಗ್ರೆಸ್ ಪಕ್ಷ ಬಲಪಡಿಸಲು ಪೂರ್ಣಪ್ರಮಾಣದ ನಾಯಕತ್ವ ಹಾಗೂ ವ್ಯಾಪಕ ಸಾಂಸ್ಥಿಕ ಬದಲಾವಣೆ ತರುವಂತೆ ಇವರು ಪತ್ರ ಬರೆದಿದ್ದರು.
ಕಪಿಲ್ ಸಿಬಲ್ ಆಕ್ರೋಶ
ಪಂಚರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ವಿರುದ್ಧ ಅಸಮಾಧಾನ ಹೊರಹಾಕಿರುವ ಹಿರಿಯ ನಾಯಕ ಕಪಿಲ್ ಸಿಬಲ್, ‘ರಾಹುಲ್ ಗಾಂಧಿ ಕಾಂಗ್ರೆಸ್ಸಿನ ಅಘೋಷಿತ ಅಧ್ಯಕ್ಷ. ಅಧಿಕಾರ ಇಲ್ಲದಿದ್ದರೂ ಪಕ್ಷದಲ್ಲಿ ಅಧಿಕಾರ ಚಲಾಯಿಸುತ್ತಾರೆ. ಗಾಂಧಿ ಕುಟುಂಬ ಸ್ವಯಂಪ್ರೇರಿತವಾಗಿ ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದು ಹೊಸ ನಾಯಕರಿಗೆ ಅವಕಾಶ ಮಾಡಿಕೊಡಬೇಕು’ ಎಂದು ಹೇಳಿದ್ದಾರೆ. ಮಾಧ್ಯಮ ಸಂದರ್ಶನವೊಂದರಲ್ಲಿ ಸಿಬಲ್ ಈ ಹೇಳಿಕೆ ನೀಡಿದ್ದು, ಇತ್ತೀಚಿನ ಪಂಚರಾಜ್ಯ ಸೋಲಿನಿಂದ ಕಾಂಗ್ರೆಸ್ಸಲ್ಲಿ ಸೃಷ್ಟಿಯಾಗಿರುವ ಬೇಗುದಿಗೆ ತುಪ್ಪ ಸುರಿದಿದೆ.
‘ರಾಹುಲ್ ಗಾಂಧಿ ಅಧ್ಯಕ್ಷರಲ್ಲದಿದ್ದರೂ ಪಕ್ಷದ ಅಧ್ಯಕ್ಷರಂತೆ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪಂಜಾಬ್‌ಗೆ ಭೇಟಿ ನೀಡಿದ ವೇಳೆ ರಾಹುಲ್ ಚರಣಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದರು. ಹೀಗೆ ಮಾಡಲು ಅವರಿಗೆ ಯಾವ ಅರ್ಹತೆಯಿತ್ತು? ಅವರು ಈಗಾಗಲೇ ಅಧ್ಯಕ್ಷರಂತೆ ವರ್ತಿಸುತ್ತಿದ್ದಾರೆ. ಮತ್ತೆ ಅವರನ್ನು ಅಧ್ಯಕ್ಷರನ್ನಾಗಿಸಬೇಕು ಎಂದು ಹೇಳುತ್ತಿರುವುದು ಏಕೆ? ಎಂದು ಅಸಮಾಧಾನ ಹೊರಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ