ಭಾರತವೇ ಸತ್ತರೆ ಯಾರು ಬದುಕಿರುತ್ತಾರೆ ? : ಪಕ್ಷನಿಷ್ಠೆ ಪ್ರಶ್ನಿಸಿದವರಿಗೆ ಶಶಿ ಟಾಂಗ್‌

Kannadaprabha News   | Kannada Prabha
Published : Jul 21, 2025, 05:24 AM IST
Shashi Tharoor Photo

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ನಡೆಗಳನ್ನು ಬೆಂಬಲಿಸುತ್ತಿದ್ದ ಕಾರಣಕ್ಕೆ ತಮಗೆ ಪಕ್ಷನಿಷ್ಠೆಯ ಪಾಠ ಹೇಳಿದ ಸ್ವಪಕ್ಷದ ನಾಯಕರಿಗೆ ಕಾಂಗ್ರೆಸ್‌ ಸಂಸದ ಶಶಿ ತರೂರ್‌, ‘ರಾಜಕೀಯ ಪಕ್ಷಕ್ಕಿಂತ ರಾಷ್ಟ್ರೀಯ ಭದ್ರತೆಗೆ ಆದ್ಯತೆ ನೀಡಬೇಕು’ ಎಂದು ತಿರುಗೇಟು ನೀಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ನಡೆಗಳನ್ನು ಬೆಂಬಲಿಸುತ್ತಿದ್ದ ಕಾರಣಕ್ಕೆ ತಮಗೆ ಪಕ್ಷನಿಷ್ಠೆಯ ಪಾಠ ಹೇಳಿದ ಸ್ವಪಕ್ಷದ ನಾಯಕರಿಗೆ ಕಾಂಗ್ರೆಸ್‌ ಸಂಸದ ಶಶಿ ತರೂರ್‌, ‘ರಾಜಕೀಯ ಪಕ್ಷಕ್ಕಿಂತ ರಾಷ್ಟ್ರೀಯ ಭದ್ರತೆಗೆ ಆದ್ಯತೆ ನೀಡಬೇಕು’ ಎಂದು ತಿರುಗೇಟು ನೀಡಿದ್ದಾರೆ.

ಕೇರಳದ ಕೊಚ್ಚಿಯಲ್ಲಿ ಏರ್ಪಡಿಸಲಾಗಿದ್ದ ಸಂವಾದದಲ್ಲಿ ತರೂರ್‌ ಮತ್ತು ಕಾಂಗ್ರೆಸ್‌ ನಡುವಿನ ಸಂಬಂಧದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ‘ಒಂದು ಪಕ್ಷದಲ್ಲಿ ಗುರುತಿಸಕೊಂಡಾಗಲೂ ನಮಗೆ ನಮ್ಮದೇ ಆದ ಕೆಲ ಮೌಲ್ಯಗಳು ಮತ್ತು ನಂಬಿಕೆಗಳು ಇರುತ್ತವೆ. ಆದರೆ ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ನಾವು ಇತರ ಪಕ್ಷಗಳೊಂದಿಗೆ ಸಹಕರಿಸಬೇಕು’ ಎಂದರು.

ಇದೇ ವೇಳೆ ಕಾಂಗ್ರೆಸ್‌ಗೂ ಪರೋಕ್ಷವಾಗಿ ಬಿಸಿ ಮುಟ್ಟಿಸಿ, ‘ಕೆಲವೊಮ್ಮೆ ನಮ್ಮ ಪಕ್ಷನಿಷ್ಠಯನ್ನು ಪ್ರಶ್ನಿಸಲಾಗುತ್ತದೆ. ಆದರೆ ನನ್ನ ಪ್ರಕಾರ ದೇಶ ಮೊದಲು. ಪಕ್ಷಗಳಿರುವುದು ದೇಶವನ್ನು ಉತ್ತಮಗೊಳಿಸಲು. ನಾವು ಯಾವ ಪಕ್ಷದಲ್ಲಿದ್ದರೂ, ಗುರಿ ಮಾತ್ರ ಭಾರತದ ಉದ್ಧಾರವಾಗಿರಬೇಕು’ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ