ನಮಗೆ 25 ವರ್ಷಗಳವರೆಗೆ ಕುರ್ಚಿ: ರಾವುತ್ ಹೇಳಿಕೆ ಖಾರದ ಮಿರ್ಚಿ!

Published : Nov 15, 2019, 01:58 PM IST
ನಮಗೆ 25 ವರ್ಷಗಳವರೆಗೆ ಕುರ್ಚಿ: ರಾವುತ್ ಹೇಳಿಕೆ ಖಾರದ ಮಿರ್ಚಿ!

ಸಾರಾಂಶ

ಮಹಾರಾಷ್ಟ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ವೇದಿಕೆ ಸಜ್ಜು| ಅಂತಿಮ ಘಟ್ಟಕ್ಕೆ ಶಿವಸೇನೆ, ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟ ರಚನೆ|  ಸಾಮಾನ್ಯ ಕನಿಷ್ಠ ಕಾರ್ಯಕ್ರಮ(ಸಿಎಂಪಿ) ಕರಡು ಸಿದ್ಧಪಡಿಸುವತ್ತ ಕಾರ್ಯೋನ್ಮುಖವಾದ ಮೈತ್ರಿಕೂಟ| 25 ವರ್ಷ ಶಿವಸೇನೆಯ ಅಭ್ಯರ್ಥಿಯೇ ಮುಖ್ಯಮಂತ್ರಿ ಎಂದ ಸಂಜಯ್  ರಾವುತ್| ಭಾನುವಾರ ಸೋನಿಯಾ ಗಾಂಧಿ,  ಶರದ್ ಪವಾರ್ ಹಾಗೂ ಉದ್ಧವ್ ಠಾಕ್ರೆ ಮಾತುಕತೆ ಸಾಧ್ಯತೆ|

ಮುಂಬೈ(ನ.15): ರಾಷ್ಟ್ರಪತಿ ಯಾವುದೇ ಪಕ್ಷ ಸರ್ಕಾರ ರಚಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಿದೆ. ಆದರೆ ಶಿವಸೇನೆ, ಕಾಂಗ್ರೆಸ್-ಎನ್‌ಸಿಪಿ ಮೈತ್ರಿಗೆ ಇನ್ನಿಲ್ಲದ ಕಸರತ್ತು ಮುಂದುವರೆದಿದೆ. 

ದಿನವಿಡೀ ಕಾಂಗ್ರೆಸ್, ಎನ್ ಸಿಪಿ ಮತ್ತು ಶಿವಸೇನೆ ನಾಯಕರು ಬಿರುಸಿನ ರಾಜಕೀಯ ಚಟುವಟಿಕೆ ನಡೆಸಿದ್ದು ಬಿಜೆಪಿಯೇತರ ಸರ್ಕಾರ ರಚನೆ ಮಾಡುವ ಕುರಿತು ಮಾತುಕತೆ ನಡೆಸಿದ್ದಾರೆ. 

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕ್ಷಣಗಣನೆ?: ಕಾನೂನು ಹೋರಾಟಕ್ಕೆ ಸೈ ಎಂದ ಶಿವಸೇನೆ!

ಸರ್ಕಾರ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು(ಸಿಎಂಪಿ) ಆಧಾರದಲ್ಲಿ ರಚನೆಯಾಗಲಿದ್ದು, ಈ ಸಂಬಂಧ ಮೂರು ಪಕ್ಷಗಳ ನಾಯಕರು ಕಾರ್ಯೋನ್ಮುಖರಾಗಿದ್ದಾರೆ ಎನ್ನಲಾಗಿದೆ. 

ಮಹಾರಾಷ್ಟ್ರದಲ್ಲಿ ಬಿಜೆಪಿಯೇತರ ಸರ್ಕಾರ ಜಾರಿಗೆ ಬರುವ ಸಾಧ್ಯತೆ ಖಂಡಿತಾ ಇದೆ ಎಂದಿರುವ ಸಂಜಯ್ ರಾವುತ್, ಮುಂದಿನ 25 ವರ್ಷಗಳ ಕಾಲ ಶಿವಸೇನೆಯ ಅಭ್ಯರ್ಥಿಯೇ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ನಿನ್ನೆ(ನ.14)ಬಾಂದ್ರಾದಲ್ಲಿರುವ ಛಗನ್ ಬುಜಬಲ್ ಕಚೇರಿಯಲ್ಲಿ ಸಭೆ ಸೇರಿದ್ದ ಮೂರೂ ಪಕ್ಷಗಳ ನಾಯಕರು, ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸುವಲ್ಲಿ ನಿರತರಾಗಿದ್ದರು.

'ಮಹಾ' ಸರ್ಕಾರ ರಚಿಸಲು ಫಾರ್ಮುಲಾ ರೆಡಿ, ಶಿವಸೇನೆಗೆ ಸಿಗಲಿಗೆ ಸಿಎಂ ಪಟ್ಟ!

ಶಿವಸೇನೆ ನಾಯಕ ಏಕಾಂತ ಶಿಂಧೆ ಮತ್ತು ಸುಧೀರ್ ದೇಸಾಯಿ, ಎನ್‌ಸಿಪಿ ನಾಯಕರಾದ ಜಯಂತ್ ಪಾಟೀಲ್, ನವಾಬ್ ಮಲಿಕ್ ಮತ್ತು ಛಗನ್ ಬುಜಬಲ್ ಮತ್ತು ಕಾಂಗ್ರೆಸ್ ನಾಯಕರಾದ ಮಾಣಿಕ್ ರಾವ್ ಠಾಕ್ರೆ, ಪೃಥ್ವಿರಾಜ್ ಚೌವಾಣ್ ಮತ್ತು ವಿಜಯ್ ವಡೆಟ್ಟಿವಾರ್ ನೇತೃತ್ವದಲ್ಲಿ ಸಭೆ ನಡೆದಿದೆ.

ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಒಪ್ಪಿಗೆಯಾದ ನಂತರ ಭಾನುವಾರ (ನ.17) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎನ್‌ಸಿಪಿ ನಾಯಕ ಶರದ್ ಪವಾರ್ ದೆಹಲಿಯಲ್ಲಿ ಭೇಟಿಯಾಗುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!