Shivaji statue Vandalism ಕನ್ನಡಿಗರ ಮೇಲೆ ಗೂಬೆ ಕೂರಿಸಿದ ಶಿವಸೇನೆ,ದೇಶದ್ರೋಹ ಕೇಸ್ ಹಾಕಲು ಶಾಗೆ ದೂರು!

By Kannadaprabha NewsFirst Published Dec 20, 2021, 2:30 AM IST
Highlights
  • ಕನ್ನಡಿಗರ ವಿರುದ್ಧ ಶಿವಸೇನೆ ದೂರು, ಅಮಿಶ್ ಶಾಗೆ ದೂರು
  • ಕರ್ನಾಟಕದ ಘಟನೆ ವಿರುದ್ಧ ಥಾಣೆ ಹಾಗೂ ನಾಸಿಕ್‌ನ ಪ್ರತಿಭಟನೆ
  • ರಾಯಣ್ಣ ಪ್ರತಿಮೆ ದ್ವಂಸ ದೇಶದ್ರೋಹ ಎಂದು ಕುಮಾರಸ್ವಾಮಿ

ಪುಣೆ(ಡಿ.20): ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆ ಪುತ್ಥಳಿ ವಿರೂಪಗೊಳಿಸಿದ(Shivaji statue Vandalism ) ವ್ಯಕ್ತಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ(Amit Shah) ಅವರಿಗೆ ಶಿವಸೇನೆ(Shiv sena) ನಾಯಕರು ಮನವಿ ಸಲ್ಲಿಸಿದ್ದಾರೆ.

ಭಾನುವಾರ ಪುಣೆಗೆ(Pune) ಆಗಮಿಸಿದ್ದ ಶಾ ಅವರನ್ನು ಭೇಟಿಯಾದ ಪುಣೆ ಶಿವಸೇನೆ ಅಧ್ಯಕ್ಷ ಸಂಜಯ ಮೋರೆ(sanjay more) ಹಾಗೂ ಇತರರು ಮನವಿ ಸಮರ್ಪಿಸಿದರು. ಬಳಿಕ ಮಾತನಾಡಿದ ಮೋರೆ, ‘ದೇಶದ್ರೋಹ ಪ್ರಕರಣ ದಾಖಲಿಸುವಂತೆ ಶಾ ಅವರಿಗೆ ದೂರು ನೀಡಿದ್ದೇವೆ. ಅಲ್ಲದೆ, ಪ್ರತಿಮೆ ವಿರೂಪ ಪ್ರಕರಣ ಕ್ಷುಲ್ಲಕ ಎಂದಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Karnataka CM Basavaraj Bommai) ಅವರಿಗೆ ಬುದ್ಧಿಮಾತು ಹೇಳಬೇಕು ಎಂದೂ ಕೋರಿದ್ದೇವೆ’ ಎಂದರು.

Belagavi Violence ಮರಾಠಿ ಗೂಂಡಾಗಿರಿ ವಿರೋಧಿಸಿ ವ್ಯಾಪಕ ಪ್ರತಿಭಟನೆ, MES ನಿಷೇಧಕ್ಕೆ ಆಗ್ರಹ!

‘ಇಂಥ ಘಟನೆಗಳು ಮತ್ತೆ ಮರುಕಳಿಸದಂತೆ ಆಗಲು ಕಠಿಣ ಕ್ರಮ ಜರುಗಿಸಬೇಕು’ ಎಂದೂ ಹೇಳಿದ ಅವರು, ‘ಇಂದು ಶಿವಾಜಿ ಪ್ರತಿಮೆ ಸ್ಥಾಪನಾ ಗುದ್ದಲಿಪೂಜೆ ಸಮಾರಂಭಕ್ಕೆ ಶಾ ಪುಣೆಗೆ ಆಗಮಿಸಿದ್ದಾರೆ. ಇದೇ ವೇಳೆ, ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆಗೆ ಅವಮಾನ ಆಗಿದ್ದು ವಿಪರ್ಯಾಸ’ ಎಂದರು.

ಎನ್‌ಸಿಪಿ ಪ್ರತಿಭಟನೆ:
ಕರ್ನಾಟಕದ ಘಟನೆ ವಿರುದ್ಧ ಥಾಣೆ ಹಾಗೂ ನಾಸಿಕ್‌ನಲ್ಲಿ ಎನ್‌ಸಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿ, ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಿವಾಜಿ ಪ್ರತಿಮೆಗೆ ಹಾಲಿನ ಅಭಿಷೇಕ ಮಾಡಿದರು.

ರಾಯಣ್ಣ ಪ್ರತಿಮೆ ಭಗ್ನ ದೇಶದ್ರೋಹ: ಎಚ್‌ಡಿಕೆ
ಕಿತ್ತೂರು ರಾಣಿ ಚನ್ನಮ್ಮ ಅವರ ಜತೆಗೂಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಕನ್ನಡನಾಡಿನ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ(Sangolli Rayanna Statue) ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಅತ್ಯಂತ ಖಂಡನೀಯ. ಇದು ಕನ್ನಡಿಗರಿಷ್ಟೇ ಮಾಡಿದ ದ್ರೋಹವಲ್ಲ, ಇಡೀ ದೇಶಕ್ಕೆ ಎಸಗಿದ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ.

ನವದೆಹಲಿಯಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿ, ಪ್ರತಿಮೆಯನ್ನು ಹಾಳು ಮಾಡಿರುವುದು ಹಾಗೂ ಬೆಳಗಾವಿಯಲ್ಲಿ ವಾಹನಗಳನ್ನು ಸುಟ್ಟು ಹೋಟೆಲ…ಗಳಿಗೆ ಕಲ್ಲು ಹೊಡೆದಿರುವ ಘಟನೆ ಅತ್ಯಂತ ಹೇಯ ಹಾಗೂ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂಥದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.

Belagavi Row: ಬೆಳಗಾವಿಯಲ್ಲಿ ಪುಂಡಾಟ, ಪುಂಡರಿಗೆ ನ್ಯಾಯಾಂಗ ಬಂಧನ

ಬೆಳಗಿನ ಜಾವ ಬೆಳಗಾವಿಯಲ್ಲಿ ನಡೆದಿರುವ ಘಟನೆ ಖಂಡನೀಯ. ಬ್ರಿಟಿಷರ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮ ಅವರ ಜೊತೆಗೂಡಿ ಹೋರಾಟ ನಡೆಸಿದ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಧಕ್ಕೆ ಉಂಟು ಮಾಡಿರುವುದು ದೇಶ ದ್ರೋಹದ ಕೆಲಸ. ನಮ್ಮವರೇ ನಮ್ಮ ಸ್ವಾತಂತ್ರ್ಯ ಹೋರಾಟಗಾರ ಪ್ರತಿಮೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಮಹಾರಾಷ್ಟ್ರದ ಮರಾಠಿಗರ ಅಭಿಮಾನವನ್ನು ದುರುಪಯೋಗ ಮಾಡಿಕೊಂಡು ಇಂಥ ಕೆಲಸ ಮಾಡಿರುವುದು ಖಂಡನೀಯ. ಇದು ಕೇವಲ ಕನ್ನಡಿಗರಿಗೆ ಮಾತ್ರವಲ್ಲ, ದೇಶಕ್ಕೆ ಮಾಡಿರುವ ದ್ರೋಹ ಎಂದು ಬೇಸರ ವ್ಯಕ್ತಪಡಿಸಿದರು.

ವಾಹನಗಳ ಮೇಲೆ ಕಲ್ಲು ತೂರುವುದು, ಬಂದ್‌ ಮಾಡುವುದು, ಅಂಗಡಿ ಮುಚ್ಚಿಸುವುದು ನೋಡಿದರೆ ಸರ್ಕಾರ ನಿಷ್ಕಿ್ರಯವಾಗಿದೆಯೇ? ಅಥವಾ ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆಯೇ ಎಂಬ ಪ್ರಶ್ನೆ ಮೂಡುತ್ತದೆ. ಅಧಿವೇಶನ ನಡೆಯುವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಮೂರ್ನಾಲ್ಕೂ ಸಾವಿರ ಪೊಲೀಸರು ಇದ್ದರೂ ಇಂಥ ಘಟನೆ ನಡೆದಿರುವುದು ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಚಾಟಿ ಬೀಸಿದರು.

ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ ಸಹೋದರರಂತೆ ಇರಬೇಕು. ಇಂತಹ ಘಟನೆಗಳು ಅಕ್ಕಪಕ್ಕದ ರಾಜ್ಯಗಳ ನಡುವಿನ ಸೌಹಾರ್ದತೆಯನ್ನು ಹಾಳು ಮಾಡುತ್ತವೆ. ಇಂತಹ ಘಟನೆಗಳಿಂದ ಎಂಇಎಸ್‌ನವರು ಏನೂ ಸಾಧಿಸಲು ಸಾಧ್ಯವಿಲ್ಲ. ಈಗಾಗಲೇ ಬೆಳಗಾವಿ ಕರ್ನಾಟಕದ ಭಾಗವಾಗಿದೆ. ನೀವು ಕನ್ನಡದ ಮಣ್ಣಿನಲ್ಲಿ ಜೀವನ ಕಟ್ಟಿಕೊಂಡಿದ್ದೀರಿ. ನಾಡಿನ ಅನ್ನ ತಿಂದು, ಈ ಮಣ್ಣಿನಲ್ಲಿ ಬದುಕಿ ಇಂಥ ಹೇಯ ಕೃತ್ಯ ಮಾಡುವುದು ದೇಶ ದ್ರೋಹದ ಕೆಲಸ ಎಂದು ಕುಮಾರಸ್ವಾಮಿ ಕಿಡಿಕಾರಿದರು.

click me!