
ಮುಂಬೈ (ಸೆ.6): ಸಿಂಧುದುರ್ಗ ಜಿಲ್ಲೆಯಲ್ಲಿ ಮರಾಠಾ ರಾಜ ಛತ್ರಪತಿ ಶಿವಾಜಿ ಪ್ರತಿಮೆ ಕುಸಿತದ ನಂತರ ತಲೆ ಮರೆಸಿಕೊಂಡಿದ್ದ ಶಿಲ್ಪಿ ಜಯದೀಪ್ ಆಪ್ಟೆನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇದು ಎರಡನೇ ಬಂಧನವಾಗಿದೆ.
ಪ್ರತಿಮೆ ಕುಸಿತ ನಂತರ ಎರಡು ವಾರಗಳಿಂದ ಪೊಲೀಸರಿಂದ ತಪ್ಪಿಸಿಕೊಂಡು ತಿರುಗುತ್ತಿದ್ದ ಜಯದೀಪ್‌ನನ್ನು ಕಲ್ಯಾಣ್‌ನಲ್ಲಿರುವ ಅವರ ನಿವಾಸದಲ್ಲಿ ಬಂಧಿಸಲಾಗಿದೆ. ಈತನನ್ನು ಪತ್ತೆ ಹಚ್ಚಲು ಪೊಲೀಸರು 7 ತಂಡಗಳನ್ನು ರಚಿಸಿದ್ದರು. ಡಿಸಿಪಿ ಸಚಿನ್ ಗುಂಜಾಲ್ ನೇತೃತ್ವದ ತಂಡ ಜಯದೀಪ್‌ನನ್ನು ಬಂಧಿಸಿದೆ. ನಂತರ ಆತನನ್ನು ಸಿಂಧುದುರ್ಗ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೋಟೆಯೊಂದರಲ್ಲಿ ಉದ್ಘಾಟಿಸಿದ್ದ 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಕುಸಿತ
ಈ ಹಿಂದೆ ಪ್ರತಿಮೆಯ ವಿನ್ಯಾಸ ಸಲಹೆಗಾರ ಚೇತನ್ ಪಾಟೀಲ್‌ನನ್ನು ಪೊಲೀಸರು ಬಂಧಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ