ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಿಎಂ ಆಗಿಯೇ ಆಗುತ್ತಾರೆ : ಡಿ.ಕೆ.ಸುರೇಶ್‌

Published : Jul 04, 2025, 06:03 AM IST
DK Suresh

ಸಾರಾಂಶ

‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಬೆಂಗಳೂರು : ‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಅಲ್ಲದೆ, ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗಬೇಕೆಂಬ ಆಸೆ, ಆಗುತ್ತಾರೆಂಬ ಭರವಸೆ ಎರಡೂ ನನಗೆ ಇದೆ. ಮುಂದೊಂದು ದಿನ ಅವರ ಶ್ರಮಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ ಎಂದೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುರುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, ಈಗಲೂ ಹೇಳಿದ್ದಾರೆ. ಮುಂದೆಯೂ ಹೇಳುತ್ತಾರೆ. ಪಕ್ಷದ ಶಿಸ್ತನ್ನು ಪಾಲಿಸಿದ್ದಾರೆ. ನನಗೂ ಅವರು ಮುಖ್ಯಮಂತ್ರಿ ಆಗಬೇಕೆಂಬ ಆಸೆ, ಆಗುತ್ತಾರೆಂಬ ಭರವಸೆ ಇದೆ. ಯಾವಾಗ ಏನು ಎನ್ನುವುದನ್ನು ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದರು.

ಸಿಎಂ ಹೇಳಿಕೆಯಲ್ಲಿ ತಪ್ಪೇನಿದೆ?:

ಇನ್ನು ʻಐದು ವರ್ಷ ನಾನೇ ಸಿಎಂʼ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತ ಪ್ರಶ್ನೆಗೆ, ಮುಖ್ಯಮಂತ್ರಿ ಆಗಿರುವವರು ಮುಖ್ಯಮಂತ್ರಿ ಆಗಿ ಮುಂದುವರೆಯುತ್ತೇನೆ ಎಂದು ಹೇಳಿದರೆ ತಪ್ಪೇನಿದೆ? ಅವರು ಶಾಸಕಾಂಗ ಪಕ್ಷದ ನಾಯಕರು. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಚೆನ್ನಾಗಿದ್ದಾರೆ. ಇವತ್ತೂ ಚೆನ್ನಾಗಿದ್ದಾರೆ, ನಾಳೆಯೂ ಚೆನ್ನಾಗಿರ್ತಾರೆ. ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ನಾವು ಜನರ ಹಿತವನ್ನು ಕಾಪಾಡಬೇಕು ಎಂದು ಹೇಳಿದರು.

ಶಾಸಕರಾಗಬೇಕು, ಸಂಸದರಾಗಬೇಕು, ಮಂತ್ರಿ, ಮುಖ್ಯಮಂತ್ರಿ ಯಾವುದೇ ಆಗಬೇಕಾದರೂ ಹಣೆಯಲ್ಲಿ ಬರೆದಿರಬೇಕು. ಅದು ಭಗವಂತನ ಇಚ್ಛೆ. ಜನರ ಆಶೀರ್ವಾದ ಯಾರ ಹಣೆಯಲ್ಲಿ ಏನು ಬರೆದಿದೆಯೋ? ಹಿಂದೆ ಸದಾನಂದಗೌಡರು ಕೆಎಂಎಫ್‌ ಅಧ್ಯಕ್ಷಗಿರಿಗೆ ಅಂಗಲಾಚುತ್ತಿರುವಾಗ ಮೂರೇ ತಿಂಗಳಲ್ಲಿ ಮುಖ್ಯಮಂತ್ರಿಯೇ ಆದರು. ಬಸವರಾಜ ಬೊಮ್ಮಾಯಿ ಕೂಡ ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಆದರು.

ಯಾವುದೇ ನಿರೀಕ್ಷೆ, ಜಾತಿ ಬೆಂಬಲ ಇಲ್ಲದೆ ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿಗಳಾದರು. ಧರ್ಮಸಿಂಗ್‌ ಅವರು ಪಕ್ಷದ ಶಿಸ್ತಿನ ಸಿಪಾಯಿಯಾಗಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದರು. ಇಂತಹ ಅನೇಕ ಇತಿಹಾಸಗಳು ರಾಜ್ಯದಲ್ಲಿವೆ. ಯಾವ ಸಂದರ್ಭದಲ್ಲಿ ಏನು ಆಗಬೇಕೋ ಆಗುತ್ತದೆ. ನಾಳೆ, ನಾಡಿದ್ದೇ ಆಗಬೇಕೆಂದು ಆತುರ ಪಡಲು ಆಗುವುದಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..