
ನವದೆಹಲಿ: ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್)ಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರು ಕರಡಿ (ವಾಯೇಜರ್ ಟಾರ್ಡಿಗ್ರೇಡ್) ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇಸ್ರೋ, ‘ಶುಭಾಂಶು ಶುಕ್ಲಾ ಐಎಸ್‌ಎಸ್‌ನಲ್ಲಿ ನೀರು ಕರಡಿಗಳನ್ನು ಒಳಗೊಂಡ ಸೂಕ್ಷ್ಮ ಗುರುತ್ವಾಕರ್ಷಣೆಯ ಪ್ರಯೋಗವನ್ನು ಪೂರ್ಣಗೊಳಿಸಿದ್ದಾರೆ. ಅಧ್ಯಯನವು ಬಾಹ್ಯಾಕಾಶದಲ್ಲಿ ಅವುಗಳ ಬದುಕುಳಿಯುವಿಕೆ, ಪುನರುಜ್ಜೀವನ ಮತ್ತು ಸಂತಾನೋತ್ಪತ್ತಿ ಮೇಲೆ ಕೇಂದ್ರೀಕರಿಸಿದೆ. ಈ ಅಧ್ಯಯನವು ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಸರದಲ್ಲಿ ನೀರುಕರಡಿಗಳ ಜೈವಿಕ ಕಾರ್ಯವಿಧಾನಗಳ ಬಗ್ಗೆ ಅಮೂಲ್ಯ ಒಳನೋಟಗಳನ್ನು ಒದಗಿಸುತ್ತದೆ’ ಎಂದು ತಿಳಿಸಿದೆ.
14 ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಇರಲಿರುವ ಶುಕ್ಲಾ ಒಟ್ಟು 7 ಪ್ರಯೋಗಗಳನ್ನು ಕೈಗೊಳ್ಳಲಿದ್ದಾರೆ. ಈ ಪೈಕಿ 4 ಪ್ರಯೋಗಗಳನ್ನು ಕರ್ನಾಟಕದ ವಿಜ್ಞಾನಿಗಳು ಸಿದ್ಧಪಡಿಸಿದ್ದಾರೆ.
ಐಐಎಸ್‌ಸಿಯಿಂದ 5 ವರ್ಷ ಅಧ್ಯಯನ:
ವಿಜ್ಞಾನಿ ಸಂದೀಪ್ ಈಶ್ವರಪ್ಪ ಮತ್ತು ಐಐಎಸ್‌ಸಿಯ ತಂಡವು, 5 ವರ್ಷಗಳ ಕಾಲ ನೀರುಕರಡಿಗಳ ಕುರಿತು ಅಧ್ಯಯನ ನಡೆಸಿದೆ. ಸೂಕ್ಷ್ಮ ಜೀವಿಗಳಾದ ಇವು ಮಾರಕ ಅಲ್ಟ್ರಾವೈಲಟ್ ವಿಕಿರಣಗಳಿಗೆ ಒಡ್ಡಿಕೊಂಡಾಗ, ಹಾನಿಕಾರಕ ವಿಕಿರಣಗಳನ್ನು ಹೀರಿಕೊಂಡು ನಿರಪಾಯಕಾರಿ ನೀಲಿ ವಿಕರಣಗಳನ್ನು ಹೊರಸೂಸುತ್ತವೆ. ಇವುಗಳನ್ನು ಶುಕ್ಲಾ ಜತೆ ಐಎಸ್‌ಎಸ್‌ಗೆ ಕಳಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ