
ಗ್ಯಾಂಗ್ಟಕ್(ನ.05): ಕೊರೋನಾ ಹಿನ್ನೆಲೆಯಲ್ಲಿ ರಾಜಸ್ಥಾನ ಸರ್ಕಾರ ಪಟಾಕಿಗಳ ಮಾರಾಟಕ್ಕೆ ನಿಷೇಧ ಹೇರಿದ ಬೆನ್ನಲ್ಲೇ, ಈಶಾನ್ಯದ ಪುಟ್ಟರಾಜ್ಯ ಸಿಕ್ಕಿಂ ಸರ್ಕಾರವೂ ರಾಜ್ಯಾದ್ಯಂತ ಪಟಾಕಿಗಳ ಮೇಲೆಯೇ ನಿಷೇಧ ಹೇರಿದೆ.
ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ರಾಜ್ಯಾದ್ಯಂತ ಪಟಾಕಿಗಳ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಮುಂದಿನ ಆದೇಶ ಬರುವವರೆಗೂ ಯಾರೂ ಸಹ ಪಟಾಕಿ ಸಿಡಿಸಬಾರದೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಬುಧವಾರ ಹೊರಡಿಸಿದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಪಟಾಕಿ ನಿಷೇಧ ಕ್ರಮವನ್ನು ಸಮರ್ಥಿಸಿಕೊಂಡಿರುವ ಸರ್ಕಾರ, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಮುಖವಾಗುತ್ತಿದೆ. ಆದರೆ, ಪಟಾಕಿ ಸಿಡಿಸುವಿಕೆಯಿಂದ ಆಗುವ ಪರಿಸರ ಮಾಲಿನ್ಯವು ಈಗಷ್ಟೇ ಕೊರೋನಾದಿಂದ ಗುಣಮುಖರಾಗುತ್ತಿರುವವರ ಮೇಲೆ ಭಾರೀ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ.
ಹೀಗಾಗಿ, ಪಟಾಕಿ ನಿಷೇಧ ಕ್ರಮ ಕೈಗೊಳ್ಳಲಾಗಿದೆ. ಈ ಆದೇಶದ ಪಾಲನೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ