ಗಾಜೀಪುರ: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎಂಬ ವಿವಾದದ ಬೆನ್ನಲ್ಲೇ ಇಂತಹುದೇ ಘಟನೆ ಉತ್ತರ ಪ್ರದೇಶ ಗಾಜೀಪುರದಲ್ಲೂ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಏನಿದು ಪ್ರಕರಣ?:
ಗಾಜೀಪುರ ಸರ್ಕಾರಿ ಹೋಮಿಯೋಪಥಿ (College of Homeopathy) ಕಾಲೇಜಿನ ವಿದ್ಯಾರ್ಥಿನಿ ಮಂತಾಶಾ ಕಝ್ಮಿ (Mantasha Kazmi) ಎಂಬಾಕೆ ಹಾಸ್ಟೆಲ್‌ನಲ್ಲಿ ತನ್ನ ಸಹಪಾಠಿಗಳ (classmate) ಖಾಸಗಿ ಫೋಟೋ, ವಿಡಿಯೋ ಸೆರೆಹಿಡಿದು ಅದನ್ನು ತನ್ನ ಸೀನಿಯರ್ ಅಮೀರ್ ಎಂಬಾತನಿಗೆ ಕಳುಹಿಸಿಕೊಡುತ್ತಿದ್ದಳು. ಅಮೀರ್ ಈ ಫೋಟೋ ಮತ್ತು ವಿಡಿಯೋ ಬಳಸಿ ಸಂತ್ರಸ್ತೆಯನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ.
ಉಡುಪಿ ಕಾಲೇಜು ಶೌಚಗೃಹದಲ್ಲಿ ಹಿಂದೂ ಹುಡ್ಗೀರ ವಿಡಿಯೋ: 3 ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್
ಈ ಬೆಳವಣಿಗೆ ಹಿಂದೆ ಕಝ್ಮಿ ಕೈವಾಡದ ಶಂಕೆ ಹಿನ್ನೆಲೆಯಲ್ಲಿ ರೂಂಮೇಟ್‌ಗಳು ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಕಝ್ಮಿ ಮೊಬೈಲ್ ತಪಾಸಣೆ ಮಾಡಿದ ವೇಳೆ ಆಕೆ ಫೋಟೋ ಮತ್ತು ವಿಡಿಯೋ ಸೆರೆಹಿಡಿದು ಅದನ್ನು ಅಮೀರ್‌ಗೆ ರವಾನಿಸಿದ್ದು ಖಚಿತಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು 6 ತಿಂಗಳ ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಅದರ ಬೆನ್ನಲ್ಲೇ ಸಂತ್ರಸ್ತ ವಿದ್ಯಾರ್ಥಿನಿಯರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ದೂರು ಆಧರಿಸಿ ಅಮೀರ್ (Amir) ಮತ್ತು ಕಝ್ಮಿಯನ್ನು(Kazmi) ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಉಡುಪಿ ಕಾಲೇಜು ಶೌಚಗೃಹದಲ್ಲಿ ಹಿಂದೂ ಹುಡ್ಗೀರ ಚಿತ್ರೀಕರಣ: ಮುಸ್ಲಿಂ ಯುವತಿಯರ ಕೃತ್ಯ ಒಪ್ಪಿಕೊಂಡ ಕಾಲೇಜು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ