ಕೇರಳ ತೀರದಲ್ಲಿ ಸಿಂಗಾಪುರ ಹಡಗಿಗೆ ಬೆಂಕಿ, 18 ಸಿಬ್ಬಂದಿ ರಕ್ಷಿಸಿದ ಭಾರತೀಯ ನೌಕಾಪಡೆ

Published : Jun 09, 2025, 11:13 PM ISTUpdated : Jun 09, 2025, 11:25 PM IST
Ship

ಸಾರಾಂಶ

ಶ್ರೀಲಂಕಾದಿಂದ ಮುಂಬೈಗೆ ಆಗಮಿಸುತ್ತಿದ್ದ ಸಿಂಗಾಪುರ ಮೂಲದ ಸರಕು ಹಡಗು ಕೇರಳ ತೀರದಲ್ಲಿ ಅಗ್ನಿ ದುರಂತಕ್ಕೆ ಗುರಿಯಾಗಿದೆ. ಸ್ಥಳಕ್ಕೆ ಧಾವಿಸಿದ ಭಾರತೀಯ ನೌಕಾಪಡೆ 22 ಸಿಬ್ಬಂದಿ ಪೈಕಿ 18 ಮಂದಿ ರಕ್ಷಿಸಿದ್ದಾರೆ. ನಾಲ್ಪರು ನಾಪತ್ತೆಯಾಗಿದ್ದಾರೆ.

ಕೇರಳ(ಜೂ.09) ಶ್ರೀಲಂಕಾದ ಕೊಲೊಂಬೊದಿಂದ ಮುಂಬೈಗೆ ಸರಕು ಸಾಗಿಸುತ್ತಿದ್ದ ಬೃಹತ್ ಹಡುಗಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕೇರಳ ಕರಾವಳಿ ಪ್ರದೇಶದಲ್ಲಿ ವಿದೇಶಿ ಹಡಗು ಅಗ್ನಿ ದುರಂತಕ್ಕೆ ಗುರಿಯಾಗಿದೆ. ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಭಾರತೀಯ ನೌಕಾಪಡೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಡೆಸಿದೆ. ಹಡಗಿನಲ್ಲಿದ್ದ 22 ಸಿಬ್ಬಂದಿಗಳ ಪೈಕಿ 18 ಸಿಬ್ಬಂದಿಯನ್ನು ಭಾರತೀಯ ಸೇನಾ ಪಡೆ ರಕ್ಷಿಸಿದೆ. ಆದರೆ ನಾಲ್ವರು ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ.ಇತ್ತ ನೌಕಾಪಡೆ ನಾಪತ್ತೆಯಾಗಿರುವ ಸಿಬ್ಬಂದಿಗಳ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿಸಿದೆ.ಇತ್ತ ಗಾಯಗೊಂಡ ಸಿಬ್ಬಂದಿಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆ ತರಲಾಗಿದೆ.

ಸಿಂಗಾಪುರದ MV ವಾನ್ ಹೈ 503 ಹಡಗು ಶ್ರೀಲಂಕಾದ ಕೊಲೊಂಬೊದಿಂದ ಸರಕು ತುಂಬಿಸಿಕೊಂಡು ಮುಂಬೈಗೆ ಸಾಗಿತ್ತು. ಕೇರಳ ಕರಾವಳಿ ಪ್ರದೇಶದ ಮೂಲಕ ಮುಂಬೈಗೆ ಸಾಗುತ್ತಿದ್ದ ವೇಳೆ ಅಗ್ನಿ ದುರಂತ ಸಂಭವಿಸಿದೆ. ಕೇರಳದ ಬೇಪೋರ್ ಕಡಲ ತೀರದಿಂದ 78 ನಾಟಿಕಲ್ ಮೈಲ್ಸ್ ದೂರದ ಆಳ ಸಮುದ್ರದಲ್ಲಿ ಘಟನೆ ಸಂಭವಿಸಿದೆ. ಮಾಹಿತಿ ಸಿಕ್ಕ ಬೆನ್ನಲ್ಲೇ ಭಾರತ್ ನೇವಿ ಶಿಪ್ INS ಸೂರತ್ ನ ಯೋಧರು ರಕ್ಷಣೆಗೆ ಧಾವಿಸಿದ್ದಾರೆ. ಹಡಗಿನಲ್ಲಿದ್ದ ನಾಲ್ವರು ಸಿಬ್ಬಂದಿಗಳು ಕಣ್ಮರೆಯಾಗಿದ್ದಾರೆ. ಕಣ್ಮರೆಯಾದ ಸಿಬ್ಬಂದಿಗಾಗಿ ಇಂಡಿಯನ್ ಕೋಸ್ಟ್ ಗಾರ್ಡ್ ಶೋಧ ಕಾರ್ಯ ನೆಡೆಸುತ್ತಿದೆ.

ಇತ್ತ ಹಡಗಿನಲ್ಲಿ ಕಾಣಿಸಿಕೊಂಡಿರುವ ಬೆಂಕಿ ನಂದಿಸಲು ಕೋಸ್ಟ್ ಗಾರ್ಡ್ ಶಿಪ್ ICGS ಸಚೇತ್ ಮತ್ತು ICGS ಸಮುದ್ರ ಪ್ರೆಹರಿ ಶ್ರಮಿಸುತ್ತಿದೆ. ಹಡಗಿನಲ್ಲಿ ಚೀನಾದ 8, ತೈವಾನ್ 4 ,ಮ್ಯಾನ್ಮಾರ್ 4, ಇಂಡೋನೇಷಿಯಾದ 2 ಮಂದಿ ಸಿಬ್ಬಂದಿಗಳಿದ್ದರು.

ಕೇರಳ,ಕರ್ನಾಟಕಕ್ಕೆ ಎಚ್ಚರಿಕೆ

ಹಡಗಿನಿಂದ ಸೋರಿಕೆಯಾದ ತೈಲ ಕೇರಳ ಕರಾವಳಿಗೆ ಸಮಾನಾಂತರವಾಗಿ ಹರಿಯುವ ಸಾಧ್ಯತೆಯಿದೆ. ಕಂಟೇನರ್‌ಗಳು ದಕ್ಷಿಣ-ಆಗ್ನೇಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಹಡಗಿನಲ್ಲಿ ಬೆಂಕಿ ಹರಡುತ್ತಿದೆ. ಹಡಗು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ ಎಂದು ಕೋಸ್ಟ್ ಗಾರ್ಡ್ ತಿಳಿಸಿದೆ. ಕೋಸ್ಟ್ ಗಾರ್ಡ್ ಹಡಗುಗಳು ಬೆಂಕಿ ಹೊತ್ತಿಕೊಂಡ ಹಡಗನ್ನು ಸಮೀಪಿಸಲು ಸಾಧ್ಯವಾಗುತ್ತಿಲ್ಲ.ಬೆಂಕಿ ಹೊತ್ತಿಕೊಂಡ ಹಡಗನ್ನು ಟಗ್ ಬಳಸಿ ಹೊರ ಸಮುದ್ರಕ್ಕೆ ಎಳೆಯಲಾಗುವುದು. ಹಡಗು ತೀರಕ್ಕೆ ಬರುವುದನ್ನು ತಡೆಯಲು ಟಗ್ ಬಳಸಿ ನಿಯಂತ್ರಿಸಲಾಗುತ್ತಿದೆ. ರಾತ್ರಿಯೂ ರಕ್ಷಣಾ ಕಾರ್ಯ ಮುಂದುವರಿಯಲಿದೆ ಎಂದು ಕೋಸ್ಟ್ ಗಾರ್ಡ್ ತಿಳಿಸಿದೆ. ಬೆಂಕಿ ನಂದಿಸುವ ಪ್ರಯತ್ನ ಮುಂದುವರಿಯಲಿದೆ ಎಂದು ಕೋಸ್ಟ್ ಗಾರ್ಡ್ ಡಿಐಜಿ ಸ್ಪಷ್ಟಪಡಿಸಿದ್ದಾರೆ.

ಕಂಟೇನರ್‌ಗಳಲ್ಲಿ ಅಪಾಯಕಾರಿ ವಸ್ತುಗಳಿವೆ. ಆಮ್ಲಗಳು, ಗನ್‌ಪೌಡರ್, ಲಿಥಿಯಂ ಬ್ಯಾಟರಿಗಳು ಸೇರಿದಂತೆ ಸ್ವಯಂಪ್ರೇರಿತವಾಗಿ ಬೆಂಕಿ ಹೊತ್ತಿಕೊಳ್ಳುವ ರಾಸಾಯನಿಕಗಳಿವೆ. ಅಪಘಾತ ಸಂಭವಿಸಿದ ಹಡಗು ಮಾರ್ಗದ ಬಳಿಯಿರುವ ಇತರ ಹಡಗುಗಳಿಗೆ ಎಚ್ಚರಿಕೆ ನೀಡಲಾಗಿದೆ. ಸುರಕ್ಷಿತ ಅಂತರದಲ್ಲಿ ಹಾದುಹೋಗುವಂತೆ ಸೂಚಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ: ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ
19ರ ತರುಣನ ಜೊತೆ ಮಗಳ ಮದುವೆಗೆ ನಿರಾಕರಿಸಿದ ಪ್ರೇಯಸಿ ಮನೆಯವರು: ಕರೆಂಟ್ ಟವರ್ ಏರಿ ಪ್ರಿಯಕರನ ಹೈಡ್ರಾಮಾ