ಮಧ್ಯಪ್ರದೇಶದಲ್ಲಿ ಲವ್‌ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್‌ಐಟಿ

Published : May 06, 2025, 04:50 AM IST
ಮಧ್ಯಪ್ರದೇಶದಲ್ಲಿ ಲವ್‌ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್‌ಐಟಿ

ಸಾರಾಂಶ

ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಕೂಗು ಕೇಳಿಬರುತ್ತಿರುವ ನಡುವೆಯೇ, ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಬಲವಂತದ ಮತಾಂತರದ ಆರೋಪಗಳನ್ನು ತನಿಖೆ ಮಾಡುವ ಉದ್ದೇಶದಿಂದ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವ ಘೋಷಣೆ ಮಾಡಿದೆ. 

ಭೋಪಾಲ್ (ಮೇ.06): ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಕೂಗು ಕೇಳಿಬರುತ್ತಿರುವ ನಡುವೆಯೇ, ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಬಲವಂತದ ಮತಾಂತರದ ಆರೋಪಗಳನ್ನು ತನಿಖೆ ಮಾಡುವ ಉದ್ದೇಶದಿಂದ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವ ಘೋಷಣೆ ಮಾಡಿದೆ. ಇತ್ತೀಚೆಗೆ ಪುರುಷರ ಗುಂಪೊಂದು ತನ್ನ ಧಾರ್ಮಿಕ ಗುರುತನ್ನು ಮರೆಮಾಚಿ ಮಹಿಳೆಗೆ ಬ್ಲ್ಯಾಕ್‌ಮೇಲ್ ಮಾಡಿ, ಅತ್ಯಾಚಾರವೆಸಗಿದ ಘಟನೆ ಭೋಪಾಲ್‌ನಲ್ಲಿ ನಡೆದಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮಧ್ಯಪ್ರದೇಶ ಪೊಲೀಸ್‌ ಮುಖ್ಯಾಲಯ ಎಸ್‌ಐಟಿ ರಚನೆಯ ಆದೇಶ ಹೊರಡಿಸಿದೆ. 

‘ಮದುವೆಯ ಉದ್ದೇಶದ ಬಲವಂತದ ಮತಾಂತರ ಅಪರಾಧ. ಬೆದರಿಕೆ, ಬ್ಲ್ಯಾಕ್‌ಮೇಲ್‌ ಮೂಲಕ ಮತಾಂತರ ಮಾಡಿ ಮದುವೆ ಆಗುವುದು ಹಾಗೂ ಧಾರ್ಮಿಕ ಗುರುತು ಮರೆಮಾಚಿ ಮದುವೆ ಆಗುವುದೂ ಅಪರಾಧ. ಇಂಥ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಎಸ್‌ಐಟಿ ಹೊಂದಿದೆ’ ಎಂದು ಅದು ಹೇಳಿದೆ. ಈಗಾಗಲೇ ಉತ್ತರ ಪ್ರದೇಶ ಹಾಗೂ ಗುಜರಾತ್‌ನಲ್ಲಿ ‘ಲವ್‌ ಜಿಹಾದ್‌’ ವಿರುದ್ಧ ಕಾನೂನಿದೆ. ಮಧ್ಯಪ್ರದೇಶದಲ್ಲಿ ಬಲವಂತದ ಮತಾಂತರ ತಡೆ ಕಾನೂನು ಇದೆ. ಮಹಾರಾಷ್ಟ್ರದಲ್ಲೂ ಲವ್‌ ಜಿಹಾದ್‌ ವಿರುದ್ಧ ಕಾಯ್ದೆಗೆ ಕೂಗು ಕೇಳಿಬಂದಿತ್ತು. ಹೀಗಾಗಿ ಅಧ್ಯಯನಕ್ಕೆ ಸರ್ಕಾರ ಸಮಿತಿ ರಚಿಸಿದೆ.

ಸ್ತ್ರೀಯರ ಬಲವಂತದ ಮತಾಂತರಕ್ಕೆ ಗಲ್ಲು: ‘ಮಹಿಳೆಯರ ಬಲವಂತದ ಧಾರ್ಮಿಕ ಮತಾಂತರಕ್ಕೆ ಮರಣದಂಡನೆ ವಿಧಿಸಲು ನಮ್ಮ ಸರ್ಕಾರ ಕಾನೂನನ್ನು ತಿದ್ದುಪಡಿ ಮಾಡಲಿದೆ’ ಎಂದುಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.  ಸಮಾರಂಭದಲ್ಲಿ ಮಾತನಾಡಿದ ಅವರು, ‘ಈಗಾಗಲೇ ನಮ್ಮ ಮುಗ್ಧ ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ಮರಣದಂಡನೆ ವಿಧಿಸುವ ಕಾನೂನು ಜಾರಿಗೆ ತಂದಿದ್ದೇವೆ. ಇನ್ನು ಮಧ್ಯಪ್ರದೇಶದಲ್ಲಿ ಹುಡುಗಿಯರನ್ನು ಮತಾಂತರಿಸುವವರಿಗೆ ಮರಣದಂಡನೆ ವಿಧಿಸುವ ನಿಬಂಧನೆಯನ್ನು ಜಾರಿಗೆ ತರಲಾಗುವುದು. 

ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ: ರಾಜಕೀಯ ಪ್ರಾತಿನಿಧ್ಯದ ವಿವರವೂ ಸಂಗ್ರಹ

ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯಲ್ಲಿ ಈ ನಿಬಂಧನೆಯನ್ನು ಜಾರಿ ಮಾಡಲಾಗುವುದು. ಯಾವುದೇ ಕಾರಣಕ್ಕೂ ಅಪರಾಧಿಯನ್ನು ಬಿಡುವುದಿಲ್ಲ. ಅಕ್ರಮ ಮತಾಂತರಕ್ಕೆ ಅವಕಾಶ ನೀಡಲ್ಲ’ ಎಂದು ಹೇಳಿದರು. ಬಳಿಕ ಈ ಬಗ್ಗೆ ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿ, ‘ದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ ಜಾರಿಯಲ್ಲಿದೆ. ಬಲವಂತವಾಗಿ ಅಥವಾ ಮದುವೆಯಾಗಲು ಆಮಿಷವೊಡ್ಡುವ ಮೂಲಕ ಅವರ ಮತಾಂತರ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಸ್ಪಷ್ಟಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..