ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದೆಹಲಿಯ ಏಮ್ಸ್‌ನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿರುವ ಅವರಿಗೆ ಆಮ್ಲಜನಕ ನೀಡಲಾಗುತ್ತಿದೆ.
ನವದೆಹಲಿ (ಸೆ.10): ಕಳೆದ ತಿಂಗಳು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಗೆ ದಾಖಲಾಗಿದ್ದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಪರಿಸ್ಥಿತಿ ಗಂಭೀರವಾಗಿದೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಅವರಿಗೆ ಆಕ್ಸಿಜನ್ ಸಪೋರ್ಟ್ ನೀಡಲಾಗಿದೆ ಎಂದು ಸಿಪಿಐ-ಎಂ ಪಕ್ಷ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಯೆಚೂರಿ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದ್ದು, ತೀವ್ರ ಉಸಿರಾಟದ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ. "ಅವರು ಆಕ್ಸಿಜನ್ ಸಪೋರ್ಟ್‌ನಲ್ಲಿದ್ದಾರೆ. ವೈದ್ಯರ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಇದು ಈ ಸಮಯದಲ್ಲಿ ಗಂಭೀರವಾಗಿದೆ" ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಯೆಚೂರಿ ಅವರನ್ನು ಆಗಸ್ಟ್ 19 ರಂದು ಏಮ್ಸ್‌ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ನ್ಯುಮೋನಿಯಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾದ ಸಮಸ್ಯೆ ಅಲ್ಲ ಎಂದು ತಿಳಿಸಲಾಗಿತ್ತು. ಸಿಪಿಐ(ಎಂ) ನಾಯಕ ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
72 ವರ್ಷದ ಸೀತಾರಾಂ ಯೆಚೂರಿ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) (ಸಿಪಿಐ-ಎಂ) ಪ್ರಧಾನ ಕಾರ್ಯದರ್ಶಿ. ಅವರು 1992 ರಿಂದ ಸಿಪಿಐ (ಎಂ) ನ ಪಾಲಿಟ್‌ಬ್ಯೂರೋ ಸದಸ್ಯರೂ ಆಗಿದ್ದಾರೆ. ಇದಕ್ಕೂ ಮೊದಲು ಅವರು 2005 ರಿಂದ 2017 ರವರೆಗೆ ಪಶ್ಚಿಮ ಬಂಗಾಳದಿಂದ ರಾಜ್ಯಸಭಾ ಸಂಸದರಾಗಿದ್ದರು. ಯೆಚೂರಿ ಅವರು 1974 ರಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಗೆ ಸೇರಿದರು ಮತ್ತು ಒಂದು ವರ್ಷದ ನಂತರ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸೇರಿದರು.
ರಾಹುಲ್ ಗಾಂಧಿ ಅವಮಾನ ಮಾಡಿದ್ದಕ್ಕೆ ‘I.N.D.I.A’ ಮೈತ್ರಿಕೂಟಕ್ಕೆ ಸೆಡ್ಡು ಹೊಡೆದ ನಿತೀಶ್! ಮೋದಿ ಜತೆ ಸೇರೋದು ಪಕ್ಕಾನಾ?
ಸೀತಾರಾಮ್ ಯೆಚೂರಿ ಅವರು 1952 ಆಗಸ್ಟ್ 12 ರಂದು ಚೆನ್ನೈನಲ್ಲಿ ತಮಿಳು ಕುಟುಂಬದಲ್ಲಿ ಜನಿಸಿದರು. ಅವರ ತಂದೆ ಸರ್ವೇಶ್ವರ ಸೋಮಯಾಜುಲ ಯೆಚೂರಿ ಮತ್ತು ತಾಯಿ ಕಲ್ಪಕಂ ಯೆಚೂರಿ ಆಂಧ್ರಪ್ರದೇಶದ ಕಾಕಿನಾಡ ಮೂಲದವರು. ಅವರ ತಂದೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಎಂಜಿನಿಯರ್ ಆಗಿದ್ದರು. ಅವರ ತಾಯಿ ಸರ್ಕಾರಿ ಅಧಿಕಾರಿಯಾಗಿದ್ದರು.
Breaking: I.N.D.I.A ಒಕ್ಕೂಟಕ್ಕೆ ಶಾಕ್: ಸಿಪಿಐ-ಎಂ ನಾಯಕ ಸೀತಾರಾಮ್ ಯೆಚೂರಿ ನಿವಾಸದ ಮೇಲೆ ಪೊಲೀಸರ ರೇಡ್!
ಹೈದರಾಬಾದ್‌ನಲ್ಲಿಯೇ ಬೆಳೆದ ಅವರು, ಹತ್ತನೇ ತರಗತಿಯವರೆಗೆ ಹೈದರಾಬಾದ್‌ನ ಆಲ್ ಸೇಂಟ್ಸ್ ಹೈಸ್ಕೂಲ್‌ನಲ್ಲಿ ಅಧ್ಯಯನ ಮಾಡಿದರು. 1969 ರ ತೆಲಂಗಾಣ ಆಂದೋಲನವು ಅವರನ್ನು ದೆಹಲಿಗೆ ಕರೆತಂದಿತು. ಅವರು ಪ್ರೆಸಿಡೆಂಟ್ಸ್ ಎಸ್ಟೇಟ್ ಸ್ಕೂಲ್, ನವದೆಹಲಿಯಲ್ಲಿ ವ್ಯಾಸಂಗ ಮಾಡಿದರು ಮತ್ತು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದರು. ಆ ಬಳಿಕ ಅವರು ಬಿ.ಎ. (ಆನರ್ಸ್) ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ (JNU) ಅರ್ಥಶಾಸ್ತ್ರದಲ್ಲಿ M.A. ಎರಡರಲ್ಲೂ ಮೊದಲ ಸ್ಥಾನ ಪಡೆದುಕೊಂಡು. ಅರ್ಥಶಾಸ್ತ್ರದಲ್ಲಿ ಪಿಎಚ್‌ಡಿ ಮಾಡಲು ಜೆಎನ್‌ಯುಗೆ ಸೇರಿದ್ದರು, ಆದರೆ, ತುರ್ತು ಪರಿಸ್ಥಿತಿಯ ಸಮಯದಲ್ಲಿ ಅವರ ಬಂಧನದಿಂದ ಅದನ್ನು ರದ್ದುಗೊಳಿಸಲಾಯಿತು.
Comrade Sitaram Yechury’s health condition pic.twitter.com/NDPl8HE8K0
— CPI (M) (@cpimspeak)