
ನವದಹೆಲಿ: ಪಹಲ್ಗಾಮ್ ದಾಳಿಯ ಶಂಕಿತ ಉಗ್ರರ ರೇಖಾಚಿತ್ರವನ್ನು ಎನ್ಐಎ (NIA-National Investigation Agency) ಬಿಡುಗಡೆಗೊಳಿಸಿದೆ. ಎನ್ಐಎ ಮತ್ತು ವಿಧಿವಿಜ್ಞಾನ ತಂತ್ರಜ್ಞರಿಂದ ಶಂಕಿತ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಲಾಗಿದೆ. ಒಟ್ಟು ಐವರು ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು.ಪ್ರವಾಸಿಗರು ಮತ್ತು ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಆಧಾರದ ಮೇಲೆ ರೇಖಾಚಿತ್ರ ಸಿದ್ಧಪಡಿಸಲಾಗಿದೆ. ಈ ದಾಳಿಯಲ್ಲಿ ಒಟ್ಟು 26 ಪುರುಷ ಪ್ರವಾಸಿಗರು ಮೃತರಾಗಿದ್ದಾರೆ. ಉಗ್ರರ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದ್ದಾರೆ. ಭಾರತಕ್ಕೆ ಬರುತ್ತಿದ್ದಂತೆ ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಪ್ರಧಾನಿ ಮೋದಿಯವರು ಸಚಿವರು ಮತ್ತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಘಟನೆಯ ಕುರಿತ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಇಂದು ಸಂಜೆ ಪ್ರಧಾನಿಗಳ ನಿವಾಸದಲ್ಲಿ ಸಂಪುಟ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಎಲ್ಲಾ ಪ್ರವಾಸಿಗರು ಬೇರೆ ಸ್ಥಳಕ್ಕೆ ರವಾನಿಸುವ ಕಾರ್ಯದಿಂದ ಭರದಿಂದ ಸಾಗುತ್ತಿದೆ. ಪ್ರವಾಸಿಗರ ಸ್ಥಳಾಂತರಕ್ಕಾಗಿ ವಿಶೇಷ ವಿಮಾನಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರದಲ್ಲಿಯೇ ಇದ್ದು, ಗುಂಡಿನ ದಾಳಿಯಲ್ಲಿ ಮೃತರಿಗೆ ಅಂತಿಮ ನಮನಗಳನ್ನು ಸಲ್ಲಿಸಿ, ಪಹಲ್ಗಾಮ್‌ಗೆ ತೆರಳಿದ್ದಾರೆ.
ಈ ದಾಳಿಯನ್ನು ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕದ, ಪುಲ್ವಾಮಾದಲ್ಲಿ ಯೋಧರ ಗುರಿಯಾಗಿಸಿ ನಡೆಸಿದ ಬಳಿಕ ಅತಿದೊಡ್ಡ ದಾಳಿಯಾಗಿದೆ. ಜೊತೆಗೆ ಕಾಶ್ಮಿರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಕಳೆದ 25 ವರ್ಷಗಳಲ್ಲೇ ನಡೆಸಿದ ಅತಿದೊಡ್ಡ ದಾಳಿಯಾಗಿದೆ
ಇದನ್ನೂ ಓದಿ: ಪಹಲ್ಗಾಮ್ ದುರಂತ: ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ
ಮೂವರು ಉಗ್ರರ ಹೆಸರು
ರಾಜ್ಯದಜನರು ರೂಮಲ್ಲೇ ಲಾಕ್, ಆತಂಕ
ಕಾಶ್ಮೀರ ಪ್ರವಾಸ ಕೈಗೊಂಡು ಶ್ರೀನಗರ ಸೇರಿದಂತೆ ವಿವಿಧ ನಗರಗಳಲ್ಲಿ ಉಳಿದುಕೊಂಡಿರುವ ಕನ್ನಡಿಗರು ಉಗ್ರರ ದಾಳಿ ಹಿನ್ನೆಲೆಯಲ್ಲಿ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ತಾವಿರುವ ಹೋಟೆಲ್‌ನ ಕೋಣೆಯಲ್ಲೇ ಬಂಧಿಯಾಗಿದ್ದಾರೆ.
ಪ್ರವಾಸ ರದ್ದು?
ಉಗ್ರರ ದಾಳಿ ಬೆನ್ನಲ್ಲೇ ರಾಜ್ಯದಿಂದ ಕಾಶ್ಮೀರ ಪ್ರವಾಸಕ್ಕೆ ತೆರಳಬೇಕಿದ್ದ ಸಹಸ್ರಾರು ಮಂದಿ ತಮ್ಮ ಬುಕಿಂಗ್ ರದ್ದುಗೊಳಿಸುತ್ತಿದ್ದಾರೆ. ಆರು ವಾರಗಳಲ್ಲಿ ರಾಜ್ಯದ 1 ಲಕ್ಷ ಮಂದಿ ಕಾಶ್ಮೀರಕ್ಕೆ ಭೇಟಿ ನೀಡುವ ನಿರೀಕ್ಷೆ ಇತ್ತು
ಇದನ್ನೂ ಓದಿ: ಹಿಂದೂ ಗಂಡಸರೇ ಟಾರ್ಗೆಟ್: TCS ಉದ್ಯೋಗಿ US ಟೆಕ್ಕಿ, IB ಅಧಿಕಾರಿಯೂ ಪಹಲ್ಗಾಮ್ ದಾಳಿಗೆ ಬಲಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ