
ನವದೆಹಲಿ(ಜೂ.25): ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳಿಗೆ ಕಡಿವಾಣ ಹಾಕುವ ನಿಟ್ಟಿನಿಂದ ದಿಟ್ಟಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ, ಯಾವುದೇ ನಕಲಿ ಖಾತೆಗಳ ಕುರಿತು ದೂರು ದಾಖಲಾದ 24 ಗಂಟೆಗಳಲ್ಲಿ ಪರಿಚಿತ ವ್ಯಕ್ತಿಗಳು ಅಥವಾ ಯಾವುದೇ ಬಳಕೆದಾರರ ಹೆಸರಿನಲ್ಲಿ ತೆರೆಯಲಾದ ನಕಲಿ ಖಾತೆಗಳನ್ನು ಅಳಿಸಿಹಾಕುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ನೂತನ ಐಟಿ ನಿಯಮದ ಭಾಗವಾಗಿ ಈ ಆದೇಶ ಹೊರಡಿಸಲಾಗಿದೆ. ಅದರಂತೆ ಟ್ವಿಟರ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಂತಹ ಸಾಮಾಜಿಕ ಜಾಲತಾಣಗಳು ಪರಿಚಿತ ವ್ಯಕ್ತಿಗಳು, ಉದ್ಯಮಿಗಳು ಹಾಗೂ ಸಾಮಾನ್ಯ ಬಳಕೆದಾರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿರುವುದು ಗಮನಕ್ಕೆ ಬಂದರೆ ಅಥವಾ ದೂರುಗಳು ದಾಖಲಾದರೆ ಅವುಗಳನ್ನು 24 ಗಂಟೆಗಳ ಒಳಗಾಗಿ ಅಳಿಸಿಹಾಕಲು ಕ್ರಮ ಕೈಗೊಳ್ಳಬೇಕು.
ಉದಾಹರಣೆಗೆ ಇನ್ನೊಬ್ಬ ವ್ಯಕ್ತಿ ತಮ್ಮ ಫೋಟೋವನ್ನು ಬಳಸಿಕೊಂಡು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಚಿತ್ರನಟ/ನಟಿಯರು, ಕ್ರಿಕೆಟಿಗರು ಅಥವಾ ರಾಜಕಾರಣಿ ಅಥವಾ ಯಾವುದೇ ಬಳಕೆದಾರಿಂದ ದೂರುಗಳು ಬಂದರೆ ಸಂಬಂಧಿತ ಜಾಲತಾಣಗಳು ತಕ್ಷಣವೇ ಕ್ರಮ ಕೈಗೊಂಡು ನಕಲಿ ಖಾತೆಗಳನ್ನು ಡಿಲೀಟ್ ಮಾಡಬೇಕು.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುತ್ತಿರುವುದು, ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿರುವ ಪ್ರಕರಣಗಳು ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ