
ಅಡೂರು, ಕೇರಳ (ಫೆ.9): ತುಳು ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಿದ್ದ ಕಾಸರಗೋಡಿನ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಆತ್ಮ*ತ್ಯೆ ಮಾಡಿಕೊಡಿದ್ದಾರೆ. ಆಡೂರು ಮೂಲದ ಚಿನ್ನು ಪಾಪು ಆತ್ಮ*ತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರಗೆ 24 ವರ್ಷ ವಯಸ್ಸಾಗಿತ್ತು. ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಅವರನ್ನ ಆಸ್ಪತ್ರೆಗೆ ದಾಖಲು ಮಾಡುವ ವೇಳೆಗೆ ಅವರು ಸಾವು ಕಂಡಿರುವುದು ದೃಢವಾಗಿತ್ತು. ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತ ಮಹಿಳೆಯ ನಿಜವಾದ ಹೆಸರು ಕೆ.ರೇಷ್ಮಾ, ಆದರೆ, ಸೋಶಿಯಲ್ ಮೀಡಿಯಾದಲ್ಲಿ ಚಿನ್ನು ಪಾಪು ಎನ್ನುವ ಹೆಸರಿನಿಂದಲೇ ಅವರು ಫೇಮಸ್ ಆಗಿದ್ದರು. ಮೂಲತಃ ಅವರು ಕೇರಳದ ಆಡೂರಿನವರಾಗಿದ್ದರೂ, ಕರ್ನಾಟಕದ ಗಡಿ ಭಾಗಕ್ಕೆ ಹೊಂದಿರುವ ಕನ್ನಡಿಗರೇ ಹೆಚ್ಚಿರುವ ಕೇರಳದ ಕಾಸರಗೋಡಿನ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರ ಶವ ಕ್ವಾರ್ಟರ್ಸ್‌ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಚಿನ್ನು ಪಾಪು ಒಂದು ತಿಂಗಳ ಹಿಂದೆ ವಿಚ್ಛೇದನ ಪಡೆದಿದ್ದರು ಎನ್ನುವುದು ಗೊತ್ತಾಗಿದೆ. ಅವರಿಗೆ ನಾಲ್ಕು ವರ್ಷದ ಮಗನಿದ್ದಾನೆ. ಆತ್ಮ*ತ್ಯೆಗೆ ವಿಚ್ಛೇದನಕ್ಕೆ ಸಂಬಂಧಿಸಿದ ಯಾವುದೇ ಕಾರಣವಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ