ಕೊರೋನಾ ಸೇವೆಯಲ್ಲಿ ನಿಧನರಾದ ಸೈನಿಕರನ್ನು ಹುತಾತ್ಮರೆಂದು ಪರಿಗಣಿಸಿ!

Published : Jul 21, 2020, 03:35 PM ISTUpdated : Jul 21, 2020, 03:41 PM IST
ಕೊರೋನಾ ಸೇವೆಯಲ್ಲಿ ನಿಧನರಾದ ಸೈನಿಕರನ್ನು ಹುತಾತ್ಮರೆಂದು ಪರಿಗಣಿಸಿ!

ಸಾರಾಂಶ

ಕೊರೋನಾ ವೈರಸ್ ಹೆಮ್ಮಾರಿ ನಿಯಂತ್ರಣಕ್ಕೆ ಪೊಲೀಸರು ಮಾತ್ರವಲ್ಲ ಹಲವು ಭಾಗಗಳಲ್ಲಿ ಸೇನೆ ಕೂಡ ಕರ್ತವ್ಯ ನಿರ್ವಹಿಸುತ್ತಿದೆ. ಹೀಗೆ ಕೊರೋನಾ ವಾರಿಯರ್ಸ್‌ ಆಗಿ ಸೇವೆ ಸಲ್ಲಿಸುತ್ತಿರುವ ಸೈನಿಕರು ಮೃತರಾದರೆ ಅವರನ್ನು ಹುತಾತ್ಮರೆಂದು ಪರಿಗಣಿಸಲು ಭದ್ರತಾ ಪಡೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ನವದೆಹಲಿ(ಜು.21): ಕೊರೋನಾ ವೈರಸ್ ನಿಯಂತ್ರಣ ಒಂದೆಡೆ ವೈದ್ಯರು, ಆಸ್ಪತ್ರೆ ಸಿಬ್ಬಂದಿಗಳು ಹೋರಾಡುತ್ತಿದ್ದರೆ, ಮತ್ತೊಂದೆಡೆ ಪೊಲೀಸ್, ಭದ್ರತಾ ಪಡೆ ಅವಿರತ ಪ್ರಯತ್ನ ಮಾಡುತ್ತಿದೆ. ಹಲವು ಪ್ರದೇಶಗಳಲ್ಲಿ ಪೊಲೀಸರ ಜೊತೆ ಸೇನೆ ಕೂಡ ಕೊರೋನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದೆ. ಹೀಗೆ ಕೊರೋನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಸೈನಿಕರು ಮೃತರಾದರೆ ಅವರನ್ನು ಹುತಾತ್ಮರೆಂದು ಪರಿಗಣಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಲಡಾಖ್‌ನ ಲೆಹ್‌ನಲ್ಲಿ ಯೋಧರ ಜೊತೆ ರಕ್ಷಣಾ ಸಚಿವ..! ಇಲ್ಲಿವೆ ಫೋಟೋಸ್

ಕೊರೋನಾ ವಾರಿಯರ್ಸ್ ಆಗಿ  ಸೇವೆ ಸಲ್ಲಿಸುತ್ತಿರುವ ಸೈನಿಕರು ಮೃತರಾದರೆ ಅವರನ್ನು ಹುತಾತ್ಮರೆಂದು ಪರಿಗಣಿಸಿ ಅವರ ಕುಟುಂಬಕ್ಕೆ ಸಿಗಬೇಕಾದ ಸೌಲಭ್ಯ ನೀಡಬೇಕು. ಜೊತೆ 15 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ನೀಡಬೇಕು ಎಂದು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿದೆ.

2017ರಲ್ಲಿ ಕೇಂದ್ರ ಸರ್ಕಾರ ಭಾರತ್ ಕೆ ವೀರ್ ಕಾರ್ಪಸ್ ಯೋಜನೆಯಡಿ ಸೇವೆಯಲ್ಲಿ ನಿಧನರಾದ ಸೈನಿಕರಿಗೆ ಆರ್ಥಿಕ ನೆರವು ನೀಡವು ಯೋಜನೆ ಜಾರಿಗೆ ತಂದಿದೆ. ಇದೇ ಯೋಜನೆಯಡಿ ಕೊರೋನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಸೈನಿಕರು ಮೃತರಾದರೆ ಅವರಿಗೂ ನೀಡಬೇಕು ಎಂದು ಪ್ರಸ್ತಾವನೆಯಲ್ಲಿ ಹೇಳಿದೆ. ಕೇಂದ್ರ ರಕ್ಷಣಾ ಸಚಿವಾಲಯ ಈ ಪ್ರಸ್ತಾವನೆಗೆ ಅಂತಿಮ ಮುದ್ರೆ ಹಾಕಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಂದೇ.. ಚರ್ಚೆಯಿಂದ ಹೊಸ ಇತಿಹಾಸ ಸೃಷ್ಟಿಗೆ ಮೋದಿ ಯತ್ನ: ಕಾಂಗ್ರೆಸ್‌
ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ