
ನವದೆಹಲಿ(ಏ.21): ನಮ್ಮ ಹಲವು ಆಸ್ಪತ್ರೆಗಳು ವೈದ್ಯಕೀಯ ಆಮ್ಲಜನಕದ ಸಿಲಿಂಡರ್ ಕೊರತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರಕ್ಕೆ ಕೈಮುಗಿದು ಕೋರಿಕೊಳ್ಳುತ್ತೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಸಂಬಂಧ ಮಂಗಳವಾರ ಟ್ವೀಟ್ ಮಾಡಿದ ಕೇಜ್ರಿವಾಲ್, ‘ದೆಹಲಿಯಲ್ಲಿ ಆಮ್ಲಜನಕದ ಬಿಕ್ಕಟ್ಟು ವಿಪರೀತ ಹಂತ ತಲುಪಿದ್ದು, ಕೆಲವು ಆಸ್ಪತ್ರೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಆಮ್ಲಜನಕದ ಸಿಲಿಂಡರ್‌ಗಳು ಬರಿದಾಗಲಿವೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಆಮ್ಲಜನಕ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ನನ್ನ ಎರಡೂ ಕೈಗಳನ್ನು ಮುಗಿಯುತ್ತೇನೆ ಎಂದಿದ್ದಾರೆ.
ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಒಟ್ಟಾರೆ 485 ಕೋವಿಡ್ ಬೆಡ್‌ಗಳ ಪೈಕಿ 475 ಭರ್ತಿಯಾಗಿದ್ದು, ಇದರಲ್ಲಿ 120 ರೋಗಿಗಳು ಐಸಿಯುನಲ್ಲಿದ್ದಾರೆ. ಈ ಆಸ್ಪತ್ರೆಯಲ್ಲಿ ಕೇವಲ 8 ಗಂಟೆಗಳಿಗೆ ಸಾಕಾಗುವಷ್ಟುಮಾತ್ರವೇ ಆಮ್ಲಜನಕವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ