
ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ನಂತರ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್(Sonam wangchuk) ತಮ್ಮ ಉಪವಾಸವನ್ನು ಅಂತ್ಯಗೊಳಿಸಿದರು.
ಉಪವಾಸ ಅಂತ್ಯಗೊಳಿಸುವಂತೆ ಪ್ರಧಾನಿ ಮೋದಿ ಅವರ ಕರೆಗೆ ಸೋನಮ್ ಸ್ಪಂದಿಸಿದ್ದಾರೆ. 'ಸೋನಮ್ ಜಿ ಅವರು ವೈದ್ಯರ ಸಲಹೆಯಂತೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಮತ್ತು ಸಾಧ್ಯವಾದಷ್ಟು ಬೇಗ ತಮ್ಮ ಹಿಂದಿನ ತೂಕವನ್ನು ಮರಳಿ ಪಡೆಯಬೇಕು ಎಂದು ನಾನು ಒತ್ತಾಯಿಸುತ್ತೇನೆ. ಸೋನಮ್ ಜಿ ಆರೋಗ್ಯವಾಗಿರಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ಮೋದಿ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಕೇಂದ್ರ ಸಚಿವ ಜೆಪಿ ನಡ್ಡಾ(JP Nadda), ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್(Jithendra singh) ಅವರನ್ನು ಭೇಟಿಯಾದ ನಂತರ ಸಾಮಾಜಿಕ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಲು ನಿರ್ಧರಿಸಿದರು. ನೀಟ್ ಪತ್ರಿಕೆ ಸೋರಿಕೆ(NEET Paper leak) ವಿರುದ್ಧ ಜಂತರ್ ಮಂತರ್ ನಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಜೂನ್ 28 ರಂದು ಅವರು ಉಪವಾಸ ಆರಂಭಿಸಿದ್ದರು. 18 ದಿನಗಳ ಉಪವಾಸದಿಂದಾಗಿ ಸೋನಮ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಶೌಚಾಕ್ಕೂ ಹೋಗಲಾಗದಷ್ಟು ಅಸ್ವಸ್ಥಗೊಂಡಿದ್ದರು. ಅವರ ತೂಕ ಎಂಟರಿಂದ ಒಂಭತ್ತು ಕೆಜಿ ಇಳಿದಿತ್ತು. ಉಪವಾಸ ಮುಂದುವರಿದರೆ ಇನ್ನೆರಡು ದಿನವಷ್ಟೇ ಬದುಕುತ್ತಾರೆ, ಬಲವಂತವಾಗಿ ಆಹಾರ ನೀಡುವಂತೆ ಹೇಳಲಾಯಿತು. ಇದರ ಪರಿಣಾಮ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೋನಮ್ ಜೀವ ರಕ್ಷಿಸುವಂತೆ ಆದೇಶಿಸಿದ ಬೆನ್ನಲ್ಲೇ ಅವರನ್ನ ಜಂತರ್ ಮಂತರ್‌ನಿಂದ ಸ್ಥಳಾಂತರಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಅವರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿರುವುದರಿಂದ ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದಾರೆ.
ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಡಾ ಜಿತೇಂದ್ರ ಸಿಂಗ್ ಮತ್ತು ಲೇಹ್-ಲಡಾಖ್ ಸುಪ್ರೀಂ ಕಮಿಟಿಯ ಹಿರಿಯ ನಾಯಕರ ಸಮ್ಮುಖದಲ್ಲಿ 26 ದಿನಗಳ ನಂತರ ನಾನು ನನ್ನ ಉಪವಾಸವನ್ನು ಕೊನೆಗೊಳಿಸಿದೆ. ಇದಕ್ಕೂ ಮೊದಲು ವಿವಿಧ ರಾಜಕೀಯ ಪಕ್ಷಗಳ 65 ಸಂಸದರು ನನ್ನನ್ನು ಭೇಟಿಯಾಗಿ ಅಥವಾ ನನಗೆ ಪತ್ರ ಬರೆದು ನನ್ನ ಉಪವಾಸವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದರು. ದೇಶದಲ್ಲಿ ಸಂಭವನೀಯ ಹಿಂಸಾಚಾರದ ಹಿನ್ನೆಲೆಯಲ್ಲಿ ಮತ್ತು ವಿವಿಧ ಪರಿಸ್ಥಿತಿಗಳ ಕುರಿತು ಸುದೀರ್ಘ ಚರ್ಚೆಗಳ ನಂತರ ಇದನ್ನು ಮಾಡಲಾಗಿದೆ. ನಾನು ಶೀಘ್ರದಲ್ಲೇ ಈ ಪರಿಸ್ಥಿತಿಗಳನ್ನು ಪ್ರತ್ಯೇಕ ವೀಡಿಯೊದಲ್ಲಿ ವಿವರಿಸುತ್ತೇನೆ. ಈ ಮಧ್ಯೆ ಹೋರಾಟದ ವೇಳೆ ಯಾವುದೇ ಹಿಂಸಾಚಾರವನ್ನು ತಡೆಗಟ್ಟಲು ನೀವೆಲ್ಲರೂ ಜಾಗರೂಕರಾಗಿರಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಸೋನಮ್ ವಾಂಗ್‌ಚುಕ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಬರೆದಿದ್ದಾರೆ.
ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ವಿಡಿಯೋ ಸಂದೇಶ
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಮೂಲಕ ದೇಶದ ಯುವಕರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ತೆಗೆದುಕೊಳ್ಳುತ್ತಿರುವ ಪ್ರಮುಖ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಇಂದು(ಶುಕ್ರವಾರ) ನಡೆಯಲಿರುವ ಸಂಪುಟ ಸಭೆಯಲ್ಲಿ ಇದಕ್ಕೆ ಸಂಬಂಧಿಸಿದ ಕರಡನ್ನು ಮಂಡಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಸಣ್ಣ ವಿಷಯವಲ್ಲ
ಪ್ರಶ್ನೆ ಪತ್ರಿಕೆ ಸೋರಿಕೆ ಸಣ್ಣ ವಿಷಯವಲ್ಲ ಎಂದು ನನಗೆ ತಿಳಿದಿದೆ. ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಇದು ತುಂಬಾ ನೋವಿನ ಸಂಗತಿ, ಆದ್ದರಿಂದ, ಕಳೆದ ಎರಡೂವರೆ ತಿಂಗಳಲ್ಲಿ, ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆಯನ್ನು ನಿಭಾಯಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಪರಾಧಿಗಳನ್ನು ಬಂಧಿಸಲಾಗಿದೆ, ಜೈಲಿನಲ್ಲಿದ್ದಾರೆ. ವಿದ್ಯಾರ್ಥಿಗಳ ಜೀವನದ ಒಂದು ವರ್ಷ ವ್ಯರ್ಥವಾಗದಂತೆ ನೋಡಿಕೊಳ್ಳುವುದು ನಮ್ಮ ಪ್ರಮುಖ ಜವಾಬ್ದಾರಿಯಾಗಿತ್ತು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ