Sonam Wangchuk: 18ನೇ ದಿನಕ್ಕೆ ಕಾಲಿಟ್ಟ ಸೋನಮ್ ವಾಂಗ್ಚುಕ್ ಉಪವಾಸ - ಇಳಿಕೆಯಾಗ್ತಿದೆ ತೂಕ, ಜೀವಕ್ಕೆ ಅಪಾಯ?

Published : Jul 15, 2026, 12:07 PM IST
Sonam Wangchuk

ಸಾರಾಂಶ

ನೀಟ್‌ ಸ್ಕ್ಯಾಮ್‌ ಸೇರಿದಂತೆ ಅನೇಕ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಆರೋಗ್ಯ ಹದಗೆಡುತ್ತಿದೆ. ಅವರ ಜೀವದ ಬಗ್ಗೆ ಆತಂಕ ಎದುರಾಗಿದೆ. ದೆಹಲಿ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಲಡಾಖ್‌ ನ ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹ ಇದೀಗ 18ನೇ ದಿನಕ್ಕೆ ಕಾಲಿಟ್ಟಿದೆ. ದಿನ ದಿನಕ್ಕೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

17 ದಿನಗಳಿಂದ ಉಪವಾಸ ಸತ್ಯಾಗ್ರಹ 

ದೆಹಲಿ ಜಂತರ್ ಮಂತರ್ನಲ್ಲಿ ಸೋನಮ್‌ ವಾಂಗ್ಚುಕ್‌ ಉಪವಾಸ ಸತ್ಯಾಗ್ರಹ ಮಾಡ್ತಿದ್ದಾರೆ. ವಾಂಗ್ಚುಕ್ ಈಗಾಗಲೇ 8.5 ಕೆ.ಜಿ ತೂಕ ಕಳೆದುಕೊಂಡಿದ್ದಾರೆ. ಅವರ ರಕ್ತದೊತ್ತಡ 107/70 mmHg ಹಾಗೂ ರಕ್ತದಲ್ಲಿನ ಸಕ್ಕರೆ ಪ್ರಮಾಣ 67 mg/dLಕ್ಕೆ ಇಳಿದಿದೆ ಎಂದು ವೈದ್ಯಕೀಯ ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ.

Bengaluru ಬೀದಿ ಬದಿ ವ್ಯಾಪಾರಕ್ಕೆ ಸರ್ಕಾರದ ಮಾಸ್ಟರ್ ಪ್ಲಾನ್, ಕನ್ನಡಿಗರು ಓಕೆ! ಹಿಂದಿಗರು ಯಾಕೆ?

 ಈ ನಡುವೆ, ಕಾರ್ಯಕರ್ತ ಹಾಗೂ ವಕೀಲ ರಾಕೇಶ್ ಕುಮಾರ್ ಸೈನಿ ಅವರು ದೆಹಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ವಾಂಗ್ಚುಕ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ಹೇಳಿದ್ದಾರೆ. ಅಗತ್ಯವಿದ್ದರೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಹಾಗೂ ಆಹಾರ ಒದಗಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಪ್ರತಿಭಟನಾ ಸ್ಥಳದಲ್ಲಿರುವ ವೈದ್ಯರ ತಂಡ ವಾಂಗ್ಚುಕ್ ಅವರ ಆರೋಗ್ಯವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ನಿಲ್ಲಲು ಅಥವಾ ಕುಳಿತುಕೊಳ್ಳಲು ಪ್ರಯತ್ನಿಸಿದಾಗ ತಲೆತಿರುಗುವಿಕೆ ಉಂಟಾಗುತ್ತಿದೆ ಮತ್ತು ಸಾಮಾನ್ಯ ಚಟುವಟಿಕೆಗಳನ್ನೂ ನಡೆಸಲು ಕಷ್ಟವಾಗುತ್ತಿದೆ ಎಂದು ಪ್ರತಿಭಟನಾ ಸಂಘಟಕರು ತಿಳಿಸಿದ್ದಾರೆ.

14 ರಾಜ್ಯಕ್ಕೆ ಪ್ರವಾಹ ಸೃಷ್ಟಿಸುವ ಭಾರಿ ಮಳೆ ಅಲರ್ಟ್, ಬಿಸಿಲಿನ ಬೆನ್ನಲ್ಲೇ ಹವಾಮಾನ ಇಲಾಖೆ ಎಚ್ಚರಿಕೆ

ಪ್ರತಿಭಟನೆಗೆ ಕಾರಣ

 NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಜವಾಬ್ದಾರಿತನದ ಬೇಡಿಕೆಗಳ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಇದೀಗ ಈ ಪ್ರಕರಣದಲ್ಲಿ ನ್ಯಾಯಾಲಯ ಯಾವ ತೀರ್ಪು ನೀಡಲಿದೆ ಎಂಬುದರತ್ತ ಎಲ್ಲರ ಗಮನ ನೆಟ್ಟಿದೆ. ಜೊತೆಗೆ, ಜುಲೈ 20ರಂದು ಸಂಸತ್ಗೆ ಮೆರವಣಿಗೆ ನಡೆಸುವುದಾಗಿ ಪ್ರತಿಭಟನಾಕಾರರು ಘೋಷಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿದ್ಯಾರ್ಥಿನಿ ದೂರಿನಿಂದ ಬದಲಾಯ್ತು ಭಾರತೀಯ ರೈಲ್ವೆ IRCTC ವೆಬ್‌ಸೈಟ್, ಪ್ರತಿ ನಿಮಿಷಕ್ಕೆ 1.5 ಲಕ್ಷ ಬುಕಿಂಗ್!
ತಾಯಿಯ ಜೀವ ಉಳಿಸಲು ಮಗನ ಹರಸಾಹಸ; ಗರೀಬ್ ರಥ್‌ ಎಕ್ಸ್‌ಪ್ರೆಸ್ ನಲ್ಲಿ ಹೃದಯವಿದ್ರಾವಕ ಘಟನೆ