ಸೋನಿಯಾ ಗಾಂಧಿ ಆಸ್ಪತ್ರೆ ದಾಖಲು, ಈ ತಿಂಗಳಲ್ಲಿ 2ನೇ ಬಾರಿ ಆರೋಗ್ಯ ಏರುಪೇರು

Published : Jun 15, 2025, 11:40 PM IST
Sonia Gandhi Undergoes Tests At Shimla Hospital

ಸಾರಾಂಶ

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದೆ. ಇದೀಗ ದಿಢೀರ್ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ನೀಡಲಾಗುತ್ತಿದೆ.

ನವದೆಹಲಿ(ಜೂ.15) ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಹೊಟ್ಟೆ ನೋವಿನಿಂದ ಬಳಲಿದ ಸೋನಿಯಾ ಗಾಂಧಿಯನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.78 ವರ್ಷದ ಸೋನಿಯಾ ಗಾಂಧಿ ಈ ತಿಂಗಳ ಆರಂಭದಲ್ಲಿ ಆರೋಗ್ಯ ಕ್ಷೀಣಿಸಿದ ಕಾರಣ ಆಸ್ಪತ್ರೆ ದಾಖಲಾಗಿದ್ದರು. ಬಳಿಕ ಸುಧಾರಿಸಿಕೊಂಡು ಬಿಡುಗಡೆಯಾಗಿದ್ದ ಸೋನಿಯಾ ಗಾಂಧಿ ಇದೀಗ ಒಂದೇ ವಾರದಲ್ಲಿ ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ.

ಹೊಟ್ಟೆ ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಈ ಬಾರಿ ಸೋನಿಯಾ ಗಾಂಧಿ ಆಸ್ಪತ್ರೆ ದಾಖಲಾಗಿದ್ದಾರೆ. ಗಂಗಾ ರಾಮ್ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ವಿಭಾದ ನುರಿತ ವೈದ್ಯರ ತಂಡ ಸೋನಿಯಾ ಗಾಂಧಿಗೆ ಚಿಕಿತ್ಸೆ ನೀಡುತ್ತಿದೆ. ಸದ್ಯ ಸೋನಿಯಾ ಗಾಂಧಿ ವೈದ್ಯರ ನಿಗಾದಲ್ಲಿದ್ದಾರೆ. ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಫೆಬ್ರವರಿ ತಿಂಗಳಲ್ಲೂ ಸೋನಿಯಾ ಗಾಂಧಿ ಹೊಟ್ಟೆ ನೋವು ಕಾರಣದಿಂದ ಆಸ್ಪತ್ರೆ ದಾಖಲಾಗಿದ್ದರು. ಇನ್ನು ಜೂನ್ 7 ರಂದು ಇಂದಿರಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಜೊತೆ ಶಿಮ್ಲಾದಲ್ಲಿದ್ದ ವೇಳೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಈ ವೇಳೆ ಶಿಮ್ಲಾದಾ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಸೋನಿಯಾ ಗಾಂಧಿ ದೆಹಲಿಗೆ ಮರಳಿದ್ದರು. ಇದೀಗ ಒಂದೇ ವಾರದಲ್ಲಿ ಮತ್ತೆ ಹೊಟ್ಟೆ ನೋವಿನಿಂದ ಆಸ್ಪತ್ರೆ ದಾಖಲಾಗಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್