
ನವದೆಹಲಿ: ಇಟಲಿ ಮೂಲದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ತಮ್ಮನ್ನು ತಾವು ಕ್ರೈಸ್ತರಲ್ಲ ಎಂದು ಭಾವಿಸುತ್ತಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಣಿಶಂಕರ ಅಯ್ಯರ್ ಹೇಳಿದ್ದಾರೆ. 'ಪಿಟಿಐ ವಿಡಿಯೋಸ್' ಸುದ್ದಿಸಂಸ್ಥೆಗೆ ಸಂದರ್ಶನ ನೀಡಿದ ಅವರು, 'ಒಮ್ಮೆ ನಾನು ಸೋನಿಯಾ ಅವರಿಗೆ ಕ್ರಿಸ್‌ಮಸ್ ಸಂದರ್ಭದಲ್ಲಿ 'ಮೇಡಮ್, ಮೆರ್ರಿ ಕ್ರಿಸ್ಮಸ್' ಎಂದು ಹೇಳಿದೆ. ಆದರೆ ಅದನ್ನು ಅವರು ಸ್ವೀಕರಿಸದೆ 'ನಾನು ಕ್ರೈಸ್ತಳಲ್ಲ' ಎಂದರು. ನನಗೆ ಆಗ ಶಾಕ್ ಆಯಿತು. ಸೋನಿಯಾ ತಮ್ಮನ್ನು ತಾವು ಕ್ರೈಸ್ತರಲ್ಲ ಎಂದು ಭಾವಿಸುತ್ತಾರೆ ಎಂದು ಗೊತ್ತಾಯಿತು' ಎಂದರು. 'ನಾನು ನಾಸ್ತಿಕ. ಆದರೆ ಇತರ ಧರ್ಮ ಗೌರವಿಸುವೆ' ಎಂದು ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
ನನ್ನನ್ನು ರಾಜಕೀಯದಲ್ಲಿ ಏರಿಸಿದ್ದೂ ಗಾಂಧಿಗಳು, ಬೀಳಿಸಿದ್ದೂ ಗಾಂಧಿಗಳು'
ನವದೆಹಲಿ: 'ನನ್ನನ್ನು ರಾಜಕೀಯದಲ್ಲಿ ಏರಿಸಿದ್ದೂ ಗಾಂಧಿಗಳು, ಬೀಳಿಸಿದು ಗಾಂಧಿಗಳು' ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಹೇಳಿದ್ದಾರೆ. 'ಪಿಟಿಐ ವಿಡಿಯೋಸ್'ಗೆ ಸಂದರ್ಶನ ನೀಡಿದ ಅವರು, 10 ವರ್ಷಗಳಿಂದ ಸೋನಿಯಾ ಗಾಂಧಿ ತಮ್ಮ ಭೇಟಿಗೆ ನನಗೆ ಅವಕಾಶ ನೀಡಲಿಲ್ಲ. ರಾಹುಲ್ ಗಾಂಧಿ ಕೂಡ 10 ವರ್ಷದಲ್ಲಿ ಒಮ್ಮೆ ಬಿಟ್ಟರೆ ಮಿಕ್ಕ ವೇಳೆ ನನ್ನ ಭೇಟಿಗೆ ಅವಕಾಶ ನೀಡಿಲ್ಲ. ಪ್ರಿಯಾಂಕಾ ಗಾಂಧಿ ಅವರನ್ನು ಕೂಡ ನಾನು ಭೇಟಿ ಮಾಡಿದ್ದು ಒಂದೆರಡು ಸಲ ಮಾತ್ರ. ಒಮ್ಮೆ ರಾಹುಲ್‌ಗೆ ಶುಭಾಶಯ ತಿಳಿಸಲು ಪ್ರಿಯಾಂಕಾಗೆ ಫೋನ್ ಮಾಡಬೇಕಾಯಿತು' ಎಂದರು.
ಪ್ರಣಬ್‌ರನ್ನು ಪ್ರಧಾನಿ ಮಾಡದಿದ್ದುದೇ ಕೈ ಸೋಲಿಗೆ ಕಾರಣ: ಅಯ್ಯರ್
ನವದೆಹಲಿ : 2012ರಲ್ಲಿ ರಾಷ್ಟ್ರಪತಿ ಆಯ್ಕೆ ನಡೆದಾಗ ಅಂದಿನ ಪ್ರಧಾನಿಯಾಗಿದ್ದ ಡಾ। ಮನಮೋಹನ ಸಿಂಗ್ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಬೇಕಿತ್ತು ಹಾಗೂ ಸಚಿವರಾಗಿದ್ದ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ಹುದ್ದೆಗೆ ಏರಿಸಬೇಕಿತ್ತು. ಹೀಗೆ ಮಾಡಿದ್ದರೆ 2014ರಲ್ಲಿ ಯುಪಿಎ-3 ಸರ್ಕಾರ ಖಂಡಿತ ಅಸ್ತಿತ್ವಕ್ಕೆ ಬರುತ್ತಿತ್ತು ಎಂದು ಹಿರಿಯ ಕಾಂಗ್ರೆಸ್ಸಿಗ ಮಣಿಶಂಕರ ಅಯ್ಯರ್ ಹೇಳಿದ್ದಾರೆ. ಅಯ್ಯರ್ ಅವರು ‘ಎ ಮೇವರಿಕ್ ಇನ್ ಪಾಲಿಟಿಕ್ಸ್’ ಎಂಬ ಪುಸ್ತಕ ಬರೆದಿದ್ದು, ಅದರಲ್ಲಿ ಈ ಅಂಶಗಳಿವೆ, ‘ಒಮ್ಮೆ ಸೋನಿಯಾ ಗಾಂಧಿ ಅವರು ಪ್ರಣಬ್‌ರನ್ನು ಕರೆದು 2012ರಲ್ಲಿ ‘ನೀವು ಪ್ರಧಾನಿ ಆಗಬಹುದು’ ಎಂದು ಸುಳಿವು ನೀಡಿದ್ದರು. ಈ ಬಗ್ಗೆ ನನ್ನ ಎದುರು ಪ್ರಣಬ್ ಹೇಳಿಕೊಂಡು, ‘ಸೋನಿಯಾ ಆಫರ್ ನನ್ನನ್ನು ಅಚ್ಚರಿಗೊಳಿಸಿದೆ’ ಎಂದಿದ್ದರು. ಆದರೆ ಅಂದುಕೊಂಡಿದ್ದು ಉಲ್ಟಾ ಆಯಿತು. ಪ್ರಣಬ್ ರಾಷ್ಟ್ರಪತಿಯಾಗಿ ಆಯ್ಕೆಯಾದರು. ಸಿಂಗ್ ಪ್ರಧಾನಿಯಾಗಿ ಮುಂದುವರಿದರು. ಇದು ನೀತಿ ಸ್ಥಾಗಿತ್ಯಕ್ಕೆ ಕಾರಣವಾಯಿತು. ಯುಪಿಎ-3 ಸರ್ಕಾರ ರಚನೆಯ ನಿರೀಕ್ಷೆಯನ್ನು ನಾಶಗೊಳಿಸಿತು’ ಎಂದಿದ್ದಾರೆ.‘ಪ್ರಣಬ್ ಉತ್ಸಾಹಿ ಕೆಲಸಗಾರನಾಗಿದ್ದರು. ಅವರಿಗೆ ಪ್ರಧಾನಿ ಪಟ್ಟ ಕೊಡಬೇಕಿತ್ತು. ಆಡಳಿತದಲ್ಲಿ ಸಾಕಷ್ಟು ಅನುಭವಿ ಆಗಿದ್ದ ಡಾ। ಸಿಂಗ್‌ಗೆ ರಾಷ್ಟ್ರಪತಿ ಹುದ್ದೆ ನೀಡಬೇಕಿತ್ತು’ ಎಂದು ಅಯ್ಯರ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಣಬ್‌ರನ್ನು ಪ್ರಧಾನಿ ಮಾಡದಿದ್ದುದೇ ಯುಪಿಎ ಸೋಲಿಗೆ ಕಾರಣ : ಮಣಿಶಂಕರ ಅಯ್ಯರ್
ಪ್ರಧಾನಿ ಮೋದಿ ಕೇವಲ 3 ತಾಸು ನಿದ್ದೆ ಮಾಡ್ತಾರೆ: ನಟ ಸೈಫ್ ಅಲಿ ಖಾನ್ ಪ್ರಶಂಸೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ