Paola Maino: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ತಾಯಿ ನಿಧನ, ಪ್ರಧಾನಿ ಮೋದಿ ಸಂತಾಪ!

Published : Aug 31, 2022, 06:08 PM ISTUpdated : Aug 31, 2022, 09:22 PM IST
Paola Maino: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ತಾಯಿ ನಿಧನ, ಪ್ರಧಾನಿ ಮೋದಿ ಸಂತಾಪ!

ಸಾರಾಂಶ

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಇಟಲಿಯಲ್ಲಿರುವ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

ನವದೆಹಲಿ (ಆ. 31): ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೊ ಶನಿವಾರ ಇಟಲಿಯ ತಮ್ಮ ಮನೆಯಲ್ಲಿ ನಿಧನರಾದರು. ಅವರ ಅಂತಿಮ ಸಂಸ್ಕಾರವನ್ನು ಮಂಗಳವಾರ ನೆರವೇರಿಸಲಾಯಿತು ಎಂದು ಕಾಂಗ್ರೆಸ್ ಪಕ್ಷದ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. 'ಸೋನಿಯಾ ಗಾಂಧಿಯವರ ತಾಯಿ,  ಪಾವೊಲಾ ಮೈನೋ ಅವರು 27ನೇ ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿರುವ ಅವರ ಮನೆಯಲ್ಲಿ ನಿಧನರಾದರು. ಮಂಗಳವಾರ ಅವರ  ಅಂತ್ಯಕ್ರಿಯೆ ನಡೆಯಿತು," ಎಂದು ರಮೇಶ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಸೋನಿಯಾ ಗಾಂಧಿ ಅವರ ತಾಯಿ 90ರ ಹರೆಯದಲ್ಲಿದ್ದರು. ಕಾಂಗ್ರೆಸ್ ಮುಖ್ಯಸ್ಥರು ಆಗಸ್ಟ್ 23 ರಂದು ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ಭೇಟಿ ಮಾಡಲು ಇಟಲಿಗೆ ತೆರಳಿದ್ದರು. ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಇಟಲಿಯಲ್ಲಿದ್ದು, ಅವರ ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಸೋನಿಯಾ ಗಾಂಧಿಯವರ ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದ ಬೆನ್ನಲ್ಲಿಯೇ, ಕಾಂಗ್ರೆಸ್‌ ಪಕ್ಷದ ನಾಯಕರು ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಸೋನಿಯಾ ಗಾಂಧಿ ಅವರ ತಾಯಿ ನಿಧನಕ್ಕ ನನ್ನ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖದ ಸಮಯದಲ್ಲಿ ಸೋನಿಯಾ ಕುಟುಂಬದ ಜೊತೆ ನಿಲ್ಲುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.ಸೋನಿಯಾ ಗಾಂಧಿ ಅವರ ತಾಯಿ ನಿಧನಕ್ಕ ನನ್ನ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖದ ಸಮಯದಲ್ಲಿ ಸೋನಿಯಾ ಕುಟುಂಬದ ಜೊತೆ ನಿಲ್ಲುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ ರಾಹುಲ್ ಮತ್ತು ಪ್ರಿಯಾಂಕಾ ಹಲವಾರು ಬಾರಿ ತಮ್ಮ  ಅಜ್ಜಿಯನ್ನು ಭೇಟಿ ಮಾಡಿದ್ದರು. 2020 ರಲ್ಲಿ, ರಾಹುಲ್ ಗಾಂಧಿ ಅವರ ಆಗಾಗ್ಗೆ ವಿದೇಶಿ ಪ್ರವಾಸಗಳ ಬಗ್ಗೆ ಕೆಲವು ಟೀಕೆಗಳನ್ನು ಎದುರಿಸಿದಾಗ, ಅವರು ಅನಾರೋಗ್ಯದಿಂದ ಬಳಲುತ್ತಿರುವ ಸಂಬಂಧಿಯನ್ನು ಭೇಟಿ ಮಾಡಲು ಇಟಲಿಗೆ ಖಾಸಗಿ ಭೇಟಿಯಲ್ಲಿದ್ದರು ಎಂದು ಪಕ್ಷ ಹೇಳಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?