Sonia Gandhi: ಸೋನಿಯಾ ಗಾಂಧಿಗೆ ಹೈ ಬೀಪಿ: ಆಸ್ಪತ್ರೆಗೆ ದಾಖಲು!

Kannadaprabha News   | Kannada Prabha
Published : Jun 08, 2025, 04:42 AM IST
Sonia Gandhi Undergoes Tests At Shimla Hospital

ಸಾರಾಂಶ

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಶಿಮ್ಲಾದಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕ ರಕ್ತದೊತ್ತಡದಿಂದಾಗಿ ಚಿಕಿತ್ಸೆ ಪಡೆದ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ಪ್ರಿಯಾಂಕಾ ಗಾಂಧಿ ಜೊತೆ ಶಿಮ್ಲಾಕ್ಕೆ ಭೇಟಿ ನೀಡಿದ್ದ ವೇಳೆ ಈ ಘಟನೆ ನಡೆದಿದೆ.

ಶಿಮ್ಲಾ (ಜೂ.8): ಪುತ್ರಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಶಿಮ್ಲಾದಲ್ಲಿರುವ ಮನೆಗೆ ಬಂದಿದ್ದ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಶನಿವಾರ ಹೈ ಬೀಪಿ ಕಾರಣ ದಿಢೀರ್ ಅಸ್ವಸ್ಥರಾಗಿದ್ದು, ಅವರನ್ನು ಕೂಡಲೇ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರಗೆ (ಜಿಎಂಸಿ) ದಾಖಲಿಸಲಾಗಿದೆ.

ಅವರನ್ನು ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಕ್ಸರೆ ಮಾದರಿಯ) ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ‘ಅಧಿಕ ರಕ್ತದೊತ್ತಡದ ಕಾರಣ ಅವರನ್ನು ದಾಖಲಿಸಲಾಗಿತ್ತು. ನಿಯಮಿತ ತಪಾಸಣೆಯನ್ನು ನಡೆಸಲಾಯಿತು. ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ನರೇಶ್ ಚೌಹಾಣ್ ಹೇಳಿದ್ದಾರೆ.

ಸೋಮವಾರ ತಮ್ಮ ಮಗಳು ಪ್ರಿಯಾಂಕಾ ಅವರೊಂದಿಗೆ ಶಿಮ್ಲಾಕ್ಕೆ ವೈಯಕ್ತಿಕ ಪ್ರವಾಸಕ್ಕೆ ಬಂದಿದ್ದರು. ಅವರು ಶಿಮ್ಲಾದ ಹೊರವಲಯದಲ್ಲಿರುವ ಛರಾಬ್ರಾದಲ್ಲಿರುವ ಪ್ರಿಯಾಂಕಾ ಅವರ ಮನೆಯಲ್ಲಿ ತಂಗಿದ್ದಾರೆ.

ಇದೇ ವರ್ಷದ ಫೆಬ್ರವರಿಯಲ್ಲಿಯೂ ಸೋನಿಯಾ ಅವರನ್ನು ದೆಹಲಿಯ ಗಂಗಾರಾಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯಾವುದೇ ದೊಡ್ಡ ಸಮಸ್ಯೆಯಿಲ್ಲ ಎಂದು ವೈದ್ಯರು ತಿಳಿಸಿದ್ದರು.

ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್‌ ಸಿಂಗ್‌ ಸುಖು ಆಸ್ಪತ್ರೆಗೆ ಆಗಮಿಸಿ ಸೋನಿಯಾ ಅವರ ಆರೋಗ್ಯ ವಿಚಾರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು
ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ