
ನವದೆಹಲಿ (ಜೂ.17): ಹೊಟ್ಟೆ ನೋವಿನ ಕಾರಣ ಭಾನುವಾರ ದೆಹಲಿಯ ಸರ್ ಗಂಗಾರಾಂ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಸೋಮವಾರ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಹೇಳಿಕೆ ಬಿಡುಗಡೆ ಮಾಡಿರುವ ಆಸ್ಪತ್ರೆ ಮುಖ್ಯಸ್ಥ ಡಾ. ಅಜಯ್ ಸ್ವರೂಪ್, ‘ಸೋನಿಯಾ ಅವರು ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಲಾಜಿ ವಿಭಾಗದಲ್ಲಿ ದಾಖಲಾಗಿದ್ದಾರೆ. ಅವರ ಆರೋಗ್ಯ ಪ್ರಸ್ತುತ ಸ್ಥಿರವಾಗಿದೆ. ವೈದ್ಯರು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ’ ಎಂದಿದ್ದಾರೆ.
ಇದನ್ನೂ ಓದಿ: Sonia Gandhi: ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ ? ಚುನಾವಣೆಗೆ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧಾರ..?
ಜೂ.9ರಂದು ಕೂಡ ಸೋನಿಯಾ ಗಾಂಧಿ ಇದೇ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು. ಅದಕ್ಕೂ ಮುನ್ನ ಶಿಮ್ಲಾದಲ್ಲಿ ಅಧಿಕ ರಕ್ತದೊತ್ತಡದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಇದನ್ನೂ ಓದಿ: Sonia Gandhi : "ಲೋಕ" ದಾರಿ ಬಿಟ್ಟು ರಾಜ್ಯಸಭಾ ವ್ಯೂಹ ಹೆಣೆದದ್ದೇಕೆ 'ಕೈ' ರಾಜಮಾತೆ..?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ