Breaking: ಚೆನ್ನೈ ಆಸ್ಪತ್ರೆಗೆ ದಾಖಲಾದ ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

By Santosh Naik  |  First Published Nov 26, 2024, 9:34 AM IST

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಆಸಿಡಿಟಿ ಸಮಸ್ಯೆಯಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಆತಂಕಕ್ಕೆ ಕಾರಣವಿಲ್ಲ ಮತ್ತು ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ಆರ್‌ಬಿಐ ತಿಳಿಸಿದೆ.


ನವದೆಹಲಿ (ನ.26): ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರು ಸಣ್ಣ ಆರೋಗ್ಯ ಸಮಸ್ಯೆಯಿಂದ ಮಂಗಳವಾರಮುಂಜಾನೆ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಅಸಿಡಿಟಿ ಸಮಸ್ಯೆ ಕಾಣಿಸಿಕೊಂಡಿದ್ದು, ತಮಿಳುನಾಡು ರಾಜಧಾನಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಅವರ ಆರೋಗ್ಯದ ಕುರಿತು ಅಪ್‌ಡೇಟ್‌ನೀಡಿರುವ ಕೇಂದ್ರ ಬ್ಯಾಂಕ್, ಆತಂಕಕ್ಕೆ ಯಾವುದೇ ಕಾರಣವಿಲ್ಲ ಮತ್ತು ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್ಚಾರ್ಜ್‌ ಮಾಡಲಾಗುತ್ತದೆ ಎಂದು ಹೇಳಿದೆ. “ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ತೀವ್ರವಾದ ಆಸಿಡಿಟಿ ಸಮಸ್ಯೆ ಅನುಭವಿಸಿದ್ದರು. ಅಬ್ಸರ್ವೇಷನ್‌ಗಾಗಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಈಗ ಆರೋಗ್ಯವಾಗಿದ್ದಾರೆ ಮತ್ತು ಮುಂದಿನ 2-3 ಗಂಟೆಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆರ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಆತಂಕಕ್ಕೆ ಯಾವುದೇ ಕಾರಣವಿಲ್ಲ ಎಂದು ಆರ್‌ಬಿಐ ವಕ್ತಾರರು ತಿಳಿಸಿದ್ದಾರೆ.

ಬಾಹ್ಯಾಕಾಶದಲ್ಲಿ ಸ್ಪೇಸ್‌ ಜಾನಿಟರ್‌ ಆದ ಸುನೀತಾ ವಿಲಿಯಮ್ಸ್‌, ISS ಬಾತ್‌ರೂಮ್‌ ಕ್ಲೀನ್‌ ಮಾಡಿದ ಗಗನಯಾತ್ರಿ!

Tap to resize

Latest Videos

undefined

ಬೆವರು, ಮೂತ್ರ ಸಂಸ್ಕರಿಸಿದ ನೀರಿನಿಂದ ಮಾಡಿದ ಸೂಪ್‌ ಕುಡಿದು ದಿನ ಕಳೆಯುತ್ತಿರುವ ಸುನೀತಾ ವಿಲಿಯಮ್ಸ್‌!

 

click me!