
ನವದೆಹಲಿ: ತಮಿಳುನಾಡಿನಲ್ಲಿ ತ್ರಿಭಾಷಾ ನೀತಿ ಜಾರಿ ವಿರುದ್ಧ ಆಕ್ರೋಶ ಭುಗಿಲೆದ್ದಿರುವ ನಡುವೆಯೇ, ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅದರ ತ್ರಿಭಾಷಾ ಪಠ್ಯಕ್ರಮದೊಂದಿಗೆ ಜಾರಿಗೆ ತರಲು ಆದೇಶ ನೀಡುವಂತೆ ಕೋರಿ ತಮಿಳುನಾಡಿನ ವಕೀಲ, ರಾಜ್ಯ ಬಿಜೆಪಿ ಕಾನೂನು ಕೋಶದ ಮುಖ್ಯಸ್ಥ ಜಿ.ಎಸ್. ಮಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತು ಅರ್ಜಿ ಸಲ್ಲಿಸಿರುವ ಅವರು, ‘ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಿಗೆ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಗುರಿ ಹೊಂದಿದೆ. ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಹಿಂದಿ ಹೇರಿಕೆಯ ಸುಳ್ಳು ಆರೋಪ ಮಾಡಿ, ರಾಜಕೀಯ ಕಾರಣಗಳಿಗಾಗಿ ಈ ಯೋಜನೆಯನ್ನು ವಿರೋಧಿಸುತ್ತಿವೆ’ ಎಂದು ವಾದಿಸಿದ್ದಾರೆ. ಕಳೆದ ವಾರವಷ್ಟೆ ತಮಿಳುನಾಡಿನಾದ್ಯಂತ ಹಿಂದಿ ಹೇರಿಕೆ ವಿರೋಧಿಸಿ ಪ್ರತಿಭಟನೆಗಳು ನಡೆದಿದ್ದವು. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ ವಿರುದ್ಧ ಆಕ್ರೋಶ ಹೊರಹಾಕಿ, ತ್ರಿಭಾಷಾ ಸೂತ್ರಕ್ಕೆ ಒತ್ತಾಯವು ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಹೇರುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದರು.
ಕರ್ನಾಟಕದಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ನಡೀತಿದೆಯಂತೆ; ಎಂಇಎಸ್ ಮುಖಂಡರಿಂದ ಪತ್ರ!
ಕರ್ನಾಟಕದ 2 ಕೋಟಿಯ ಅಂಬಾರಿ ಬಸ್‌ಗೆ ಮಸಿ ಬಳಿದ ಮಹಾರಾಷ್ಟ್ರ ನವನಿರ್ಮಾಣ ಸೇನೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ