ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಬಿಜೆಪಿ ವಿರುದ್ದ ಹೊಸ ಸಮರ ಸಾರಿದ್ದಾರೆ. ಬಿಜೆಪಿ ಸರ್ಕಾರ ಕೊರೋನಾ ವೈರಸ್ ನಿಯಂತ್ರಣ ಹಾಗೂ ಚೀನಾ ಆಕ್ರಮಣ ತಡೆಯಲು ವಿಫಲವಾಗಿದೆ ಎಂಬ ಆರೋಪಗಳ ಬಳಿಕ ಇದೀಗ ಬಿಜೆಪಿ ವಿರುದ್ಧ ಆಂದೋಲನ ಆರಂಭಿಸಿದ್ದಾರೆ. ಪ್ರಜಾಪ್ರಭುತ್ವಕ್ಕಾಗಿ ಧ್ವನಿ ಎತ್ತಿ ಎಂದು ರಾಹುಲ್ ಕರೆ ನೀಡಿದ್ದಾರೆ
ನವದೆಹಲಿ(ಜು.26): ಬಿಜೆಪಿ ಪ್ರಜಾಪ್ರಭುತ್ವ ಕಗ್ಗೂಲೆ ಮಾಡುತ್ತಿದೆ. ಪ್ರಜಾಪ್ರಭುತ್ವದ ಬದಲು ಸರ್ವಾಧಿಕಾರ ಆಡಳಿತ ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇದಕ್ಕಾಗಿ ಭಾರತದ ಪ್ರಜೆಗಳು ಪ್ರಜಾಪ್ರಭುತ್ವಕ್ಕಾಗಿ ಧ್ವನಿ ಎತ್ತಬೇಕು ಎಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ #SpeakUpForDemocracy ಎಂಬ ಅಭಿಯಾನ ಆರಂಭಿಸಿದ್ದಾರೆ.
भारत का लोकतंत्र संविधान के आधार पर जनता की आवाज़ से चलेगा।
भाजपा के छल-कपट के षड्यंत्र को नकारकर देश की जनता लोकतंत्र और संविधान की रक्षा करेगी।
ಯುವ ಪಡೆ ಕೈಕೊಟ್ಟರೆ ನಷ್ಟವಿಲ್ಲ: ಸಿಂಧಿಯಾ, ಪೈಲಟ್‌ಗೆ ರಾಹುಲ್ ಟಾಂಗ್!.
ರಾಜಸ್ಥಾನದಲ್ಲಿ ಬಿಜೆಪಿ ಪ್ರಜಾಪ್ರಭುತ್ವವನ್ನೇ ಸಾಯಿಸಿದೆ. ಮಧ್ಯ ಪ್ರದೇಶದಲ್ಲಿ ಸರ್ವಾಧಿಕಾರದ ಹಾಗೂ ಅಡ್ಡ ದಾರಿ ಬಳಸಿದ ಬಿಜೆಪಿ ಇದೀಗ ರಾಜಸ್ಥಾನದಲ್ಲಿ ಇದೇ ದಾರಿ ಅನುಸರಿಸುತ್ತಿದೆ. 2018ರಲ್ಲಿ ರಾಜಸ್ಥಾನ ಜನತೆ ಕಾಂಗ್ರೆಸ್ ಆಯ್ಕೆ ಮಾಡಿದೆ. ಆದರೆ ಇದೀಗ ಬಿಜೆಪಿ ಹಿಂಬಾಗಿಲ ಮೂಲಕ ರಾಜಸ್ಥಾನದಲ್ಲಿ ಅಧಿಕಾರ ಹಿಡಿಯಲು ಮುಂದಾಗಿದೆ ಎಂದುು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮೋದಿಯನ್ನು ಚೀನಾ ಹೊಗಳೋದೇಕೆ?: ರಾಹುಲ್ ಪ್ರಶ್ನೆ!
ಬಿಜೆಪಿಯ ನಡೆಯನ್ನು ಜನರು ಪ್ರಶ್ನಿಸಬೇಕು. ಜನರಿಂದ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ನಿಲ್ಲಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರ. ಇದಕ್ಕಾಗಿ #SpeakUpForDemocracy ಆಂದೋಲನ ಆರಂಭಿಸಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.