ನವದೆಹಲಿ(ಮಾ.15): ಕರ್ನಾಟಕದಿಂದ ಆರಂಭಗೊಂಡ ದೇಶ ವಿದೇಶಗಳಲ್ಲಿ ಸದ್ದು ಮಾಡಿದ ಹಿಜಾಬ್ ವಿವಾದಕ್ಕೆ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಹಿಜಾಬ್ ನಿಷೇಧವನ್ನು ಎತ್ತಿಹಿಡಿದ ಹೈಕೋರ್ಟ್, ಹಿಜಾಬ್ ಇಸ್ಲಾಂನ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲಎಂದಿದೆ. ಈ ತೀರ್ಪು ಸಹಜವಾಗಿ ಹಿಜಾಬ್ ಪರ ಹೋರಾಟ ನಡೆಸಿದ್ದ ವಿದ್ಯಾರ್ಥಿನಿಯರು, ಸಂಘಟನೆಗಳು ಹಾಗೂ ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಇದೀಗ ಕರ್ನಾಟಕ ಹಿಜಾಬ್ ತೀರ್ಪು ಪ್ರಸ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿದೆ.
ಕರ್ನಾಟಕಾ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ, ಕರ್ನಾಟಕ ಸರಕಾರ ನೀಡಿದ ಆದೇಶವನ್ನು ಎತ್ತಿ ಹಿಡಿದಿದೆ. ಶಾಲೆಯಲ್ಲಿ ಸೂಚಿಸಿರುವ ಸಮವಸ್ತ್ರ ಧರಿಸುವುದು ಕಡ್ಡಾಯವಾಗಿದೆ ಎಂದು ಕೋರ್ಟ್ ಹೇಳಿದೆ. ಈ ತೀರ್ಪಿನ ವಿರುದ್ಧ ಕರ್ನಾಟಕ ವಿದ್ಯಾರ್ಥಿನಿ ನಿಬಾ ನಾಜಾ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
Karnataka Hijab Verdict: ಹಿಜಾಬ್, ಕೇಸರಿ ಯಾವುದೂ ಇಲ್ಲ, ತರಗತಿಗೆ ಸಮವಸ್ತ್ರ ಧರಿಸಿಯೇ ಎಂಟ್ರಿ!
ನಿಬಾ ನಾಜಾ ವಕೀಲ ಅನಾಸ್ ತನ್ವೀರ್ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲಾಗಿದೆ. ಹಿಜಾಬ್ ಧರಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯ. ಹೀಗಾಗಿ ಸಂವಿಧಾನದ 19(1)(ಎ)ಪರಿಚ್ಚೇದದ ಅಡಿಯಲ್ಲಿ ಈ ಹಕ್ಕನ್ನು ಸಂರಕ್ಷಿಸಲಾಗಿದೆ. ಆದರೆ ಕರ್ನಾಟಕ ಹೈಕೋರ್ಟ್ ಈ ಅಂಶವನ್ನು ಗಣನೆಗೆ ತೆಗೆದುಕೊಳ್ಳದೇ ತೀರ್ಪು ನೀಡಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿಲಾಗಿದೆ.
ಮುಸ್ಲಿಂ ಮಹಿಳೆಯರು, ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ಹಕ್ಕನ್ನು ಭಾರತ ಸಂವಿಧಾನದ ಆರ್ಟಿಕಲ್ 21ರಲ್ಲಿ ನೀಡಲಾಗಿದೆ. ಇದು ಖಾಸಗಿತನದ ಹಕ್ಕಿನ ವ್ಯಾಪ್ತಿಯಲ್ಲಿದೆ. ಆದರೆ ಇದ್ಯಾವುದನ್ನು ಗಮನಿಸದೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ ಎಂದು ನಿಬಾ ನಾಜಾ ತಮ್ಮ ಮೇಲ್ಮನವಿಯಲ್ಲಿ ಹೇಳಿದ್ದಾರೆ.
Karnataka Hijab Verdict ನಮಗೆ ಹಿಜಾಬ್ ಮುಖ್ಯ, ಪರೀಕ್ಷೆ ಅಲ್ಲ ಎಂದು ಎಕ್ಸಾಂ ಬಿಟ್ಟು ಹೊರನಡೆದ ಬಾಲಕಿಯರು!
ಉಡುಪಿಯಲ್ಲಿ ವಿವಾದದ ಮೂಲ:
ಇಡೀ ಹಿಜಾಬ್ ವಿವಾದದ ಮೂಲ ಉಡುಪಿಯ ಸರ್ಕಾರಿ ಮಹಿಳಾ ಪಿಯು ಕಾಲೇಜು. ಈ ಕಾಲೇಜಿನ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಯಲ್ಲಿ ಕೂರಲು ಅವಕಾಶ ಕೋರಿ ಈ ವರ್ಷದ ಜನವರಿಯಲ್ಲಿ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು. ಪ್ರಾಂಶುಪಾಲರು ಅವಕಾಶ ನಿರಾಕರಿಸಿದ ಬಳಿಕ 6 ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗೆ ಹಾಜರಾದರು. ಉಳಿದ 6 ವಿದ್ಯಾರ್ಥಿನಿಯರು ತರಗತಿಗೆ ಗೈರಾದರು. ಇವರ ಬೆಂಬಲಕ್ಕೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಿಂತಿತು.
ಮಧ್ಯಂತರ ಆದೇಶ:
ಫೆ.10ರಂದು ಮೊದಲ ಬಾರಿಗೆ ಅರ್ಜಿ ವಿಚಾರಣೆ ನಡೆಸಿದ್ದ ಪೂರ್ಣಪೀಠ ಸುದೀರ್ಘ ವಾದ ಆಲಿಸಿದ ತರುವಾಯ, ಹಿಜಾಬ್-ಕೇಸರಿ ವಸ್ತ್ರ ಸೇರಿದಂತೆ ಯಾವುದೇ ಧಾರ್ಮಿಕ ಉಡುಪು ಧರಿಸದೆ ಶಾಲಾ ಕಾಲೇಜಿಗೆ ತೆರಳಬೇಕು. ಈ ವಿಚಾರದಲ್ಲಿ ಯಾರೂ ಒತ್ತಾಯ ಮಾಡುವಂತಿಲ್ಲ. ಈ ಆದೇಶವು ಸಮವಸ್ತ್ರ ನಿಗದಿ ಪಡಿಸಿ ವಸ್ತ್ರ ಸಂಹಿತೆ ವಿಧಿಸಿರುವ ಶಾಲೆಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಮಧ್ಯಂತರ ಆದೇಶ ನೀಡಿತ್ತು. ನಂತರ 10 ದಿನಗಳ ಕಾಲ ಸತತವಾಗಿ ವಾದ-ಪ್ರತಿವಾದ ಆಲಿಸಿ ಅಂತಿಮವಾಗಿ ಫೆ.25ರಂದು ತೀರ್ಪು ಕಾಯ್ದಿರಿಸಿತ್ತು.