Stampede at Mata Vaishno Devi Bhawan: ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತ, 12 ಸಾವು, ಹಲವರಿಗೆ ಗಾಯ!

Published : Jan 01, 2022, 07:27 AM ISTUpdated : Jan 01, 2022, 10:28 AM IST
Stampede at Mata Vaishno Devi Bhawan: ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತ, 12  ಸಾವು, ಹಲವರಿಗೆ ಗಾಯ!

ಸಾರಾಂಶ

* ಹೊಸ ವರ್ಷಾಚರಣೆಯಂದು ವೈಷ್ಣೋದೇವಿ ಭವನದಲ್ಲಿ ದುರಂತ * ಕಾಲ್ತುಳಿತಕ್ಕೆ 12ಕ್ಕೂ ಅಧಿಕ ಸಾವು * ಮುಂದುವರೆದ ಭದ್ರತಾ ಕಾರ್ಯಾಚರಣೆ

ಶ್ರೀನಗರ(ಜ.01): ಕಣಿವೆ ನಾಡು ಜಮ್ಮುವಿನಲ್ಲಿರುವ ಮಾತಾ ವೈಷ್ಣೋದೇವಿ ಧಾಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಈವರೆಗೂ ಈ ಕಾಲ್ತುಳಿತದಲ್ಲಿ ಹಲವರು ಗಾಯಗೊಂಡಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಪೊಲೀಸರು ಸೇರಿದಂತೆ ಭದ್ರತಾ ಪಡೆಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮೃತರ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದಿನಿಂದ ಹೊಸ ವರ್ಷ ಪ್ರಾರಂಭ, ಪ್ರತಿ ವರ್ಷ ಲಕ್ಷಾಂತರ ಭಕ್ತರು ವರ್ಷದ ಮೊದಲ ದಿನದಂದು ತಾಯಿಯ ದರ್ಶನಕ್ಕಾಗಿ ಭವನ ತಲುಪುತ್ತಾರೆ. ಈ ವರ್ಷವೂ ಹೊಸ ವರ್ಷಾಚಣೆಗೆಂದು ಭಕ್ತರು ಭಾರೀ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಜಮಾವಣೆಗೊಂಡಿದ್ದರು. ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರದತ್ತ ನುಗ್ಗಿ ಬಂದಾಗ ಈ ಕಾಲ್ತುಳಿತ ಸಂಭವಿಸಿದೆ. ಜಮ್ಮು ಕಾಶ್ಮೀರದ ತ್ರಿಕೂಟ ಬೆಟ್ಟಗಳಲ್ಲಿ ಮಾತಾ ವೈಷ್ಣೋದೇವಿ ಮಂದಿರವಿದ್ದು ಅಲ್ಲಿ ಈ ಅವಘಡ ಸಂಭವಿಸಿದೆ.

"

ಸಮುದಾಯ ಆರೋಗ್ಯ ಕೇಂದ್ರದ ಬ್ಲಾಕ್ ಮೆಡಿಕಲ್ ಆಫೀಸರ್ ಡಾ ಗೋಪಾಲ್ ದತ್ ಪ್ರಕಾರ, ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ, ಆದರೂ ಈ ಸಂಖ್ಯೆ ಸಂಪೂರ್ಣವಾಗಿ ನಿಖರವಾಗಿಲ್ಲ. ಅವರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಗಾಯಾಳುಗಳನ್ನು ನಾರಾಯಣ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದು, ಒಟ್ಟು ಗಾಯಾಳುಗಳ ಸಂಖ್ಯೆyU ದೃಢಪಟ್ಟಿಲ್ಲ.

ಮೋದಿ ಸಂತಾಪ

ಘಟನೆಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತದಲ್ಲಿ ಜನರು ಸಾವನ್ನಪ್ಪಿದ್ದಕ್ಕಾಗಿ ನಾನು ತೀವ್ರ ದುಃಖಿತನಾಗಿದ್ದೇನೆ ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುವುದರೊಂದಿಗೆ, ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ