
ನವದೆಹಲಿ(ಜು.15): ಕೇಂದ್ರ ಸಂಪುಟ ಪುನಾರಚನೆಯಲ್ಲಿ ಮೋದಿ ಕ್ಯಾಬಿನೆಟ್ ಸೇರಿಕೊಂಡ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದಾರೆ. ಕೃಷಿ ಮತ್ತು ರೈತರ ಅಭಿವೃದ್ಧಿ ಖಾತೆ ರಾಜ್ಯ ಸಚಿವೆಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಶೋಭಾ, ರೈತರ ಕಲ್ಯಾಣಕ್ಕಾಗಿ ಶ್ರಮವಹಿಸುವುದಾಗಿ ಅಮಿತ್ ಶಾ ಜೊತೆಗಿನ ಮಾತುಕತೆಯಲ್ಲಿ ಹೇಳಿದ್ದಾರೆ.
ರಾಜ್ಯದ ನಾಲ್ವರು ನೂತನ ಕೇಂದ್ರ ಸಚಿವರಿಂದ ಅಧಿಕಾರ ಸ್ವೀಕಾರ
ತನ್ನ ಮೇಲೆ ನಂಬಿಕೆ ಇಟ್ಟು ಸಂಪುಟಕ್ಕೆ ಸೇರಿಸಿಕೊಂಡಿರುವ ಪ್ರಧಾನಿ ಮೋದಿ ಹಾಗೂ ಅಮಿತ್ ಶಾಗೆ ಶೋಭಾ ಕೃತಜ್ಞತೆ ಸಲ್ಲಿಸಿದ್ದಾರೆ. ಅಮಿತ್ ಶಾ ಭೇಟಿ ಮಾಹಿತಿಯನ್ನು ಶೋಭಾ ಕರಂದ್ಲಾಜೆ ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿರುವುದು ಸಂತಸ ತಂದಿದೆ. ನನ್ನ ಮೇಲೆ ನಂಬಿಕೆ ಇಟ್ಟು ದೊಡ್ಡ ಜವಾಬ್ದಾರಿಯನ್ನು ನೀಡಿರುವುದುಕ್ಕೆ ಕೃತಜ್ಞತೆಗಳು. ಕೃಷಿ ಸಮುದಾಯದ ಆಕಾಂಕ್ಷೆ ಈಡೇರಿಸಲು ಬದ್ಧವಾಗಿದ್ದೇನೆ. ಇದಕ್ಕೆ ಅಮಿತ್ ಶಾ ಸೇರಿದಂತೆ ಹಿರಿಯರ ಮಾರ್ಗದರ್ಶನ ಕೋರಿದ್ದೇನೆ ಎಂದು ಶೋಭಾ ಟ್ವೀಟ್ ಮಾಡಿದ್ದಾರೆ.
ಅಮಿತ್ ಶಾ ನಿವಾಸಕ್ಕೆ ತೆರಳಿ ಮಹತ್ವದ ಮಾತುಕತೆ ನಡೆಸಿದ ಶೋಭಾ ಕರಂದ್ಲಾಜೆ, ರೈತರ ಅಭಿವೃದ್ಧಿ ಹಾಗೂ ಸಮಸ್ಯೆಗೆ ದ್ವನಿಯಾಗುವುದಾಗಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ