
ನವದೆಹಲಿ(ಫೆ.03): ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಬೇಕೆಂಬ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಭಾರತ ವಿಭಜಿಸುವ ಹೇಳಿಕೆ ಸಹಿಸಲ್ಲ’ ಎಂದು ಹೇಳಿದ್ದಾರೆ. ಆದರೆ ತಮ್ಮ ಹೇಳಿಕೆಯನ್ನು ತಿರುಚಿ ವರದಿ ಮಾಡಲಾಗಿದೆ ಎಂದು ಖುದ್ದು ಡಿಕೆಸು ಅವರೇ ಸ್ಪಷ್ಟಪಡಿಸಿದ್ದಾರೆ ಎಂದೂ ಖರ್ಗೆ ನುಡಿದಿದ್ದಾರೆ.
ಡಿಕೆಸು ಹೇಳಿಕೆ ಬಗ್ಗೆ ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಖರ್ಗೆ, ‘ಕಾಂಗ್ರೆಸ್ ಪಕ್ಷದಲ್ಲಿ ದೇಶಕ್ಕಾಗಿ ಹಲವರು ತಮ್ಮ ಪ್ರಾಣತ್ಯಾಗ ಮಾಡಿದ್ದಾರೆ. ಅಂತಹ ಪಕ್ಷದಲ್ಲಿ ದೇಶ ಒಡೆಯುವ ಆಲೋಚನೆ ಬರಲು ಸಾಧ್ಯವೇ ಇಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಭಾರತ ಒಂದಾಗಿರಬೇಕೆಂದು ಕಾಂಗ್ರೆಸ್ ಬಯಸುತ್ತದೆ. ದೇಶ ವಿಭಜಿಸುವ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಒಂದು ವೇಳೆ ಡಿ.ಕೆ. ಸುರೇಶ್ ಅಂತಹ ಹೇಳಿಕೆಯನ್ನು ನೀಡಿದ್ದೇ ಆದಲ್ಲಿ, ಆ ಕುರಿತು ಹಕ್ಕುಬಾಧ್ಯತಾ ಸಮಿತಿಯಿಂದ ವಿಚಾರಣೆ ನಡೆಸಲಿ’ ಎಂದು ಸವಾಲು ಹಾಕಿದರು.
ಸಂಸದ ಸ್ಥಾನದಲ್ಲಿ ಮುಂದುವರೆಯುವ ಹಕ್ಕು ಡಿಕೆ ಸುರೇಶ್‌ಗೆ ಇಲ್ಲ: ಲೋಕಸಭೆ ಸ್ಪೀಕರ್ ಗೆ ದೂರು
ಅಲ್ಲದೆ, ಡಿಕೆಸು ತಮ್ಮ ಹೇಳಿಕೆ ತಿರುಚಲಾಗಿದೆ ಎಂದಿದ್ದಾರೆ. ನೀಡದ ಹೇಳಿಕೆ ಬಗ್ಗೆ ಇಲ್ಲಿ ಚರ್ಚೆ ಬೇಡ. ಅಲ್ಲದೆ, ಲೋಕಸಭೆ ಸದಸ್ಯರು ಆಡಿದ ಮಾತಿನ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚೆ ಬೇಡ ಎಂದೂ ಖರ್ಗೆ ನುಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ