
ವಡೋದರ(ಮಾ.30): ರಾಮ ನವಮಿ ಆಚರಣೆ ವಿಜೃಂಭಣೆಯಿಂದ ನಡೆಯುತ್ತಿದೆ. ಆಯೋಧ್ಯೆಯಿಂದ ಹಿಡಿದು ದೇಶದ ಎಲ್ಲಾ ಭಾಗದಲ್ಲಿ ರಾಮ ನವಮಿ ಆಚರಿಸಲಾಗುತ್ತಿದೆ. ಆದರೆ ಗುಜರಾತ್‌ನ ವಡೋದರಲ್ಲಿನ ರಾಮ ನವಮಿ ಶೋಭ ಯಾತ್ರೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ವಡೋದರದ ಶ್ರೀರಾಮ ದೇವಸ್ಥಾನ ಕಮಿಟಿ ಹಾಗೂ ಕೆಲ ಹಿಂದೂ ಸಂಘಟನೆಗಳು ರಾಮ ನವಮಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಬಳಿಕ ರಾಮ ನವಮಿ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ಶೋಭ ಯಾತ್ರೆ ವೇಳೆ ಕಾದು ಕುಳಿತು ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟದಿಂದ ಪರಿಸ್ಥಿತಿ ಕೈಮೀರಿತ್ತು. ಆದರೆ ತಕ್ಷಣವೇ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತೆಗದುಕೊಂಡಿದ್ದಾರೆ. ಆದರೆ ವಡೋದರ ಹೊರವಲಯದ ಕೆಲ ಪ್ರದೇಶಗಳು ಬೂದಿ ಮುಚ್ಚಿದ ಕೆಂಡದಂತಿದೆ.
ರಾಮ ನವಮಿ ಶೋಭ ಯಾತ್ರೆ ಅನ್ಯ ಸಮುದಾಯದ ಹೆಚ್ಚಿರುವ ವಲಯ ತಲುಪುತ್ತಿದ್ದಂತೆ ಕಲ್ಲು ತೂರಾಟ ಆರಂಭಗೊಂಡಿದೆ. ಇದರಿಂದ ಹಿಂದೂ ಸಂಘಟನೆಗಳು ಕೆರಳಿದೆ. ಕಲ್ಲು ತೂರಾಟ ನಡೆಸಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿದೆ. ರಾಮ ನವಮಿ ಶೋಭ ಯಾತ್ರೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ನಿಯೋಜಿಸಲಾಗಿತ್ತು. ಆದರೆ ಕಲ್ಲು ತೂರಾಟದ ಸ್ಥಳದಲ್ಲಿ ನಿಯೋಜನೆಗೊಂಡ ಕೆಲವೇ ಕೆಲವು ಪೊಲೀಸರಿಗೆ ಪರಿಸ್ಥಿತಿ ನಿಯಂತ್ರಣ ಪಡೆಯಲು ಸಾಧ್ಯವಾಗಲಿಲ್ಲ. ಮಾಹಿತಿ ಪಡೆದ ವಡೋದರ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ಆಗಮಿಸುತ್ತಿದ್ದಂತೆ ಕಲ್ಲು ತೂರಾಟ ನಡೆಸಿದವರು ಪರಾರಿಯಾಗಿದ್ದಾರೆ.
ತಡೆಗೋಡೆ ಕುಸಿದು ಬಾವಿಗೆ ಬಿದ್ದ 25ಕ್ಕೂ ಹೆಚ್ಚು ಜನ: ರಾಮನವಮಿ ಆಚರಣೆ ವೇಳೆ ಘಟನೆ
ರಾಮ ನವಮಿ ಆಚರಣೆ ವೇಳೆ ಹಲವು ಅವಘಡಗಳು ಸಂಭವಿಸಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ರಾಮ ನವಮಿ ಆಚರಣೆ ವೇಳೆ ತಡೆ ಗೋಡೆ ಕುಸಿತ ಗೊಂಡ ಪರಿಣಾಮ 25ಕ್ಕೂ ಹೆಚ್ಚು ಮಂದಿ ಬಾವಿಗೆ ಬಿದ್ದ ಘಟನೆ ನಡೆದಿತ್ತು. ಬೀಲೇಶ್ವರ ಮಹಾದೇವ ಮಂದಿರದಲ್ಲಿ ಸೇರಿದ್ದ ಭಕ್ತರು ರಾಮ ನವಮಿ ಆಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಇದೇ ವೇಳೆ ತಡೆ ಗೋಡೆ ಕುಸಿತಗೊಂಡ ಕಾರಣ 25ಕ್ಕೂ ಹೆಚ್ಚು ಮಂದಿ ಬಾವಿಗೆ ಬಿದ್ದಿದ್ದಾರೆ. ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಆಂಧ್ರ ಪ್ರದೇಶದ ವೇಣುಗೋಪಾಲ ಸ್ವಾಮಿ ಮಂದಿರದಲ್ಲಿ ರಾಮ ನವಮಿ ಆಚರಣೆ ವೇಳೆ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮಂದಿರದೊಳಗೆ ಬೆಂಕಿ ಕಾಣಿಸಿಕೊಂಡ ಪರಿಣಾಣ ನೂಕು ನುಗ್ಗಲು ಸಂಭವಿಸಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದೆ.
Ram Navami 2023: ರಾಮನಿಂದ ವಿದ್ಯಾರ್ಥಿಗಳು ಕಲಿಯಬೇಕಾದ 7 ಜೀವನ ಪಾಠಗಳು
ಇನ್ನು ಮಹಾರಾಷ್ಟ್ರದ ಔರಂಗಬಾದನಲ್ಲಿ ಕಳೆದ ರಾತ್ರಿ ರಾಮ ನವಮಿ ಆಚರಣೆ ವೇಳೆಯೂ ಗಲಾಟೆ ನಡೆದಿದೆ. ರಾಮ ನವಮಿ ಆಚರಣೆಗೆ ಹಾಕಿದ್ದ ಪೆಂಡಾಲ್ ಹಾಗೂ ಸೇರಿದ್ದ ಜನರ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ ನಡೆದಿದೆ. ಇತ್ತ ಹಾಕಿದ್ದ ಪೆಂಡಾಲ್ ಧ್ವಂಸಗೊಳಿಸಲಾಗಿದೆ. ಏಕಾಏಕಿ ಕಲ್ಲು ತೂರಾಟ ನಡೆಸಿದ ಕಾರಣ ಕೆಲ ಪೊಲೀಸ್ ಅಧಿಕಾರಿಗಳಿಗೂ ಗಾಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ