ಭಗವಾನ್ ಶ್ರೀರಾಮನ ಶೋಭಯಾತ್ರೆ ಮೇಲೆ ಕಲ್ಲು ತೂರಾಟ, ಹಲವರಿಗೆ ಗಾಯ!

By Suvarna News  |  First Published Jan 21, 2024, 9:49 PM IST

ಆಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠೆಗೆ ತಯಾರಿ ಭರ್ಜರಿಯಾಗಿ ನಡೆದಿದೆ. ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ನಡೆಯುತ್ತಿದ್ದ ಭಗವಾನ್ ಶ್ರೀರಾಮನ ಶೋಭಯಾತ್ರೆ ಮೇಲೆ ಕಲ್ಲುತೂರಿದ ಘಟನೆ ನಡೆದಿದೆ.


ಅಹಮ್ಮದಾಬಾದ್(ಜ.21) ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಕೆಲವೇ ಗಂಟೆಗಳು ಮಾತ್ರ ಬಾಕಿ. ಪ್ರಧಾನಿ ನರೇಂದ್ರ ಮೋದಿ ಭಗವಾನ್ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಿಸಲಿದ್ದಾರೆ. ಪ್ರಾಣಪ್ರತಿಷ್ಠಿ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಗಲ್ಲಿ ಗಲ್ಲಿಯಲ್ಲಿ ರಾಮ ಭಜನೆ, ಕಾರ್ಯಕ್ರಮಗಳು ನಡೆಯುತ್ತಿದೆ. ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಗುಜರಾತ್‌ನ ಮೆಹ್ಸಾನ ಜಿಲ್ಲೆಯಲ್ಲಿ ನಡೆಯುತ್ತಿದ್ದ ಶ್ರೀರಾಮನ ಶೋಭಯಾತ್ರೆ ಮೇಲೆ ಕಲ್ಲು ತೂರಿದ ಘಟನೆ ನಡೆದಿದೆ. ಶಾಂತಿಯುತವಾಗಿ ಸಾಗುತ್ತಿದ್ದ ಶೋಭಯಾತ್ರೆ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಎರಡು ಅಶ್ರುವಾಯು ಸಿಡಿಸಿದ್ದಾರೆ.

ಕೇರಾಲು ಪಟ್ಟಣದಲ್ಲಿ ಶ್ರೀರಾಮನ ಶೋಭಯಾತ್ರೆ ಸಾಗುತ್ತಿತ್ತು. ಅನ್ಯ ಸಮುದಾಯದ ಮನೆ ಹಾಗೂ ಪ್ರಾರ್ಥನಾ ಕೇಂದ್ರಗಳು ಇದ್ದ ಸ್ಥಳದ ಸಮೀಪ ಬರುತ್ತಿದ್ದಂತೆ ಕಲ್ಲು ತೂರಾಟ ನಡೆದಿದೆ. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಶೋಭಯಾತ್ರೆಗೆ ಪೊಲೀಸರ ಭದ್ರತೆ ನೀಡಿದ್ದರು. ಆದರೆ ಏಕಾಏಕಿ ಕಲ್ಲು ತೂರಾಟದಿಂದ ಪರಿಸ್ಥಿತಿ ಗಂಭೀರವಾಗಿದೆ. ಇತ್ತ ಶೋಭಯಾತ್ರೆಯ ರಾಮ ಭಕ್ತರು ಕೆರಳಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮೊದಲು ಪೊಲೀಸರು ಅಶ್ರುವಾಯು ಸಿಡಿಸಿ ಉದ್ರಿಕ್ತರನ್ನು ಚದುರಿಸಿದ್ದಾರೆ.

Tap to resize

Latest Videos

ಪ್ರಾಣಪ್ರತಿಷ್ಠೆಗೆ ಹೂವುಗಳಿಂದ ಕಂಗೊಳಿಸುತ್ತಿದೆ ಆಯೋಧ್ಯೆ ರಾಮ ಮಂದಿರ, ಇಲ್ಲಿದೆ ಫೋಟೋ!

ಕಲ್ಲು ತೂರಾಟದಿಂದ ಕೆಲ ರಾಮ ಭಕ್ತರಿಗೆ ಗಾಯಗಳಾಗಿವೆ. ಸದ್ಯ ಸಂಪೂರ್ಣ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ. ಇತ್ತ ಶೋಭಯಾತ್ರೆ ಅರ್ಧಕ್ಕೆ ಮೊಟಕುಗೊಂಡಿದೆ. ಘಟನೆಯನ್ನು ಹಲವರು ಖಂಡಿಸಿದ್ದಾರೆ. ಆಯೋಧ್ಯೆಯಲ್ಲಿ ಶ್ರೀರಾಮನ ಆಗಮನವಾಗುತ್ತಿದೆ. ನಮ್ಮ ಮನೆ ಮನೆಗೆ ಶ್ರೀರಾಮ ಆಗಮಿಸುತ್ತಿದ್ದಾರೆ. ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಈ ಸಂತಸದಲ್ಲಿ ಶಾಂತಿಯುತ ಶೋಭಯಾತ್ರೆ ಮೇಲೆ ಕಲ್ಲು ತೂರಾಟ ನಡೆಸಿರುವುದು ಸರಿಯಲ್ಲ ಎಂದು ಶೋಭಯಾತ್ರೆಯಲ್ಲಿ ಪಾಲ್ಗೊಂಡ ರಾಮ ಭಕ್ತರು ಆಕ್ರೋಶ ಹೊರಹಾಕಿದ್ದಾರೆ.

ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ರಾಮಜನ್ಮಭೂಮಿ ಶ್ರೀರಾಮನಿಗೆ ಸೇರಿದ್ದು. ಇಲ್ಲಿದ್ದ ಮಂದಿರ ಕಡೆವಿ ಮಸೀದಿ ನಿರ್ಮಾಣ ಮಾಡಲಾಗಿದೆ ಅನ್ನೋದನ್ನು ಸುಪ್ರೀಂ ಕೋರ್ಟ್ ಹೇಳಿದೆ. ಇಷ್ಟಾದರೂ ಮತ್ತೆ ಸಂಘರ್ಷ ಯಾಕೆ ಎಂದು ರಾಮ ಭಕ್ತರು ಪ್ರಶ್ನಿಸಿದ್ದಾರೆ.

ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಕರೆ, ಮೂರೇ ದಿನದಲ್ಲಿ ಆರೋಪಿ ಇಂತೇಖಾಬ್ ಅಲಂ ಅರೆಸ್ಟ್!
 

click me!