ಕೇರಳದಲ್ಲಿ ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ತೂರಾಟ

Published : May 02, 2023, 11:50 AM IST
ಕೇರಳದಲ್ಲಿ ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ತೂರಾಟ

ಸಾರಾಂಶ

ಕೇರಳದಲ್ಲಿ ಇತ್ತೀಚೆಗೆ ಪ್ರಾರಂಭಿಸಲಾದ ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮಲಪ್ಪುರಂನಲ್ಲಿ ಕಲ್ಲು ತೂರಾಟ ನಡೆಸಲಾಗಿದೆ.

ಮಲಪ್ಪುರಂ: ಕೇರಳದಲ್ಲಿ ಇತ್ತೀಚೆಗೆ ಪ್ರಾರಂಭಿಸಲಾದ ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮಲಪ್ಪುರಂನಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಜಿಲ್ಲೆಯ ತಿರುನಾವಯ ಮತ್ತು ತಿರೂರ್‌ ಮಧ್ಯೆ ಚಲಿಸುತ್ತಿದ್ದಾಗ ಸೋಮವಾರ ಸಂಜೆ 5 ಗಂಟೆಗೆ ಕೃತ್ಯ ಎಸಗಲಾಗಿದೆ. ರೈಲಿನ ಕೆಲ ಕಿಟಕಿಗಳಿಗೆ ಹಾನಿಯಾಗಿದ್ದು ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ರೈಲು ಕಾಸರಗೋಡಿನಿಂದ ತಿರುವನಂತಪುರಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಬಳಿಕ ರೈಲು ತಿರುವನಂತಪುರಂಗೆ ತನ್ನ ಮುಂದಿನ ಪ್ರಯಾಣ ಬೆಳೆಸಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು ದಾಳಿಕೋರರ ಪತ್ತೆಗೆ ಬೀಸಿದ್ದಾರೆ.

ಏಪ್ರಿಲ್ 25 ರಂದು ಪ್ರಧಾನಿ ಮೋದಿ ಈ ರೈಲಿಗೆ ಚಾಲನೆ ನೀಡಿದ್ದರು. ಇದು ರಾಜ್ಯದ ಮೊದಲ ವಂದೇ ಭಾರತ್ ರೈಲಾಗಿದೆ. ತಿರುವನಂತಪುರಂ, ಕೊಲ್ಲಂ (Kollam), ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ (Palakkad), ಪತ್ತನತಿಂಟ್ಟ(Pathanathintta), ಮಲ್ಲಪುರಂ (Mallapuram), ಕೋಯಿಕ್ಕೋಡ್, ಕಣ್ಣೂರು, ಕಾಸರಗೋಡು,  ಸೇರಿದಂತೆ ಒಟ್ಟು 11 ಜಿಲ್ಲೆಗಳಲ್ಲಿ ಈ ರೈಲು ಪ್ರಯಾಣ ಬೆಳೆಸಲಿದೆ. ಮೊದಲ ಹಂತದಲ್ಲಿ ಕಾಸರಗೋಡಿನಿಂದ (Kasaragod) ತಿರುವನಂತಪುರದವರೆಗೆ (Thiruvananthapuram) ಸಂಪೂರ್ಣ ಹಳಿಯನ್ನು 110 ಕಿ.ಮೀ ವರೆಗೆ ಪರಿವರ್ತಿಸಲು 381 ಕೋಟಿ ವೆಚ್ಚ ಮಾಡಲಾಗುತ್ತಿದೆ.

From the India Gate: ಕೇರಳದಲ್ಲಿ 'ದೋಸೆ' ರಾಜಕೀಯ; ಬಿಜೆಪಿ ಸಂಸದರಿಗೆ ಡಬಲ್‌ ಡ್ಯೂಟಿಯದ್ದೇ ದೊಡ್ಡ ಚಿಂತೆ!

ಕೇರಳದ ಮೊದಲ ವಂದೇ ಭಾರತ್‌ ರೈಲಿಗೆ ಕಾಂಗ್ರೆಸ್‌ ಸಂಸದನ ಪೋಸ್ಟರ್‌: ನೆಟ್ಟಿಗರ ಕಿಡಿ

ಕೇರಳದ ಮೊದಲ ವಂದೇ ಭಾರತ್‌ ರೈಲಿಗೆ (Vande Bharat train) ಪ್ರಧಾನಿ ಮೋದಿ ಚಾಲನೆ ನೀಡುತ್ತಿದ್ದಂತೆ ಶೋರ್ನೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ರೈಲಿಗೆ ಸ್ಥಳೀಯ ಪಾಲಕ್ಕಾಡ್‌ ಸಂಸದ ಶ್ರೀಕಂಠನ್‌ ಅವರ ಭಾವಚಿತ್ರಗಳ ಪೋಸ್ಟರ್‌ಗಳನ್ನು ಅಂಟಿಸಿ ಆಕ್ರೋಶ ಹೊರಹಾಕಿದ್ದಾರೆ. ಶೋರನೂರಿನಲ್ಲಿ ವಂದೇ ಭಾರತ್‌ಗೆ ನಿಲುಗಡೆಯ ಅವಕಾಶ ನೀಡಬೇಕು. ಇಲ್ಲದಿದ್ದರೆ ರೈಲಿಗೆ ಕೆಂಪು ಬಾವುಟ ತೋರಿ ತೀವ್ರ ಪ್ರತಿಭಟನೆ ನಡೆಸಿ ರೈಲನ್ನು ನಿಲ್ಲಿಸಲಾಗುವುದು ಎಂದು ಶ್ರೀಕಂಠನ್‌ (MP Srikanthan) ಹೇಳಿದ್ದರು. ಇದರ ಬೆನ್ನಲ್ಲೇ ಕಾರ್ಯಕರ್ತರು ಪೋಸ್ಟರ್‌ ಅಂಟಿಸಿದ್ದಾರೆ. ಈ ಕೃತ್ಯ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಸೆಮಿ ಹೈಸ್ಪೀಡ್ ರೈಲು ಶೋರನೂರ್ ಜಂಕ್ಷನ್‌ಗೆ ಆಗಮಿಸಿದಾಗ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಕಾಂಗ್ರೆಸ್ ಸಂಸದ ವಿ.ಕೆ ಶ್ರೀಕಂದನ್ ಅವರನ್ನು ಹೊಗಳಿದ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರಾಜ್ಯದ ರಾಜಧಾನಿ ತಿರುವನಂತಪುರವನ್ನು ಉತ್ತರದ ತುದಿಯಲ್ಲಿರುವ ಕಾಸರಗೋಡಿನೊಂದಿಗೆ ಸಂಪರ್ಕಿಸುತ್ತದೆ. ಇದು ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ ಟೌನ್, ತ್ರಿಶೂರ್, ಶೋರನೂರ್ ಜಂಕ್ಷನ್, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ನಿಲುಗಡೆಗಳನ್ನು ಹೊಂದಿರುತ್ತದೆ.

From the India Gate: ವಂದೇ ಭಾರತ್‌ ರೈಲು ಸ್ವಾಗತಿಸಲು ಸಂದಿಗ್ಧತೆ; ಪಂಕ್ಚರ್‌ ಆದ ತೆಲಂಗಾಣ ಸಿಎಂ ಹಾಗೂ ಪುತ್ರ!

ಶೋರನೂರ್ ಜಂಕ್ಷನ್‌ನಲ್ಲಿ ನಿಲುಗಡೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಅವರ ಪಾತ್ರವನ್ನು ಶ್ಲಾಘಿಸಿ ಕೆಲವರು ರೈಲಿನಲ್ಲಿ ಪಾಲಕ್ಕಾಡ್ ಸಂಸದರ ಪೋಸ್ಟರ್‌ಗಳನ್ನು ಅಂಟಿಸಿದ್ದು, ಇವುಗಳನ್ನು ಆರ್‌ಪಿಎಫ್ ಸಿಬ್ಬಂದಿ (RPF personnel) ತೆಗೆದುಹಾಕುವುದನ್ನು ಟಿವಿ ಚಾನೆಲ್‌ಗಳು ತೋರಿಸಿವೆ. ರೈಲು ಶೋರನೂರು ನಿಲ್ದಾಣಕ್ಕೆ ಬಂದಾಗ ಈ ಘಟನೆ ನಡೆದಿದೆ. ರೈಲಿನ ಆಗಮನವನ್ನು ಸ್ವಾಗತಿಸಲು ಶ್ರೀಕಂದನ್ ಮತ್ತು ಅವರ ಬೆಂಬಲಿಗರು ರೈಲು ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?