ಗಾಜಿಯಾಬಾದ್: ಕಾಲೇಜು ಯುವಕರ ಗುಂಪೊಂದು ನಡುರಸ್ತೆಯಲ್ಲಿ ಹೊಡೆದಾಡುತ್ತಿದ್ದು. ಈ ವೇಳೆ ಕಾರೊಂದು ಇಬ್ಬರು ಯುವಕರಿಗೆ ಡಿಕ್ಕಿ ಹೊಡೆದು ಅವರು ಮಗುಚಿ ಕೆಳಗೆ ಬಿದ್ದಿದ್ದಾರೆ. ಆದರೂ ಹುಡುಗರು ಹೊಡೆದಾಟ ನಿಲ್ಲಿಸಿಲ್ಲ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ.
ನಡುರಸ್ತೆಯಲ್ಲಿ ವಿದ್ಯಾರ್ಥಿಗಳ (Student fighting) ಎರಡು ಗುಂಪಿನ ನಡುವೆ ಕಿತ್ತಾಟ ಶುರುವಾಗಿದೆ. ಮೂಲಗಳ ಪ್ರಕಾರ ಮಸೂರಿ (Masuri) ಪ್ರದೇಶದ ಒಂದೇ ಕಾಲೇಜಿನ ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳ ನಡುವೆ ಈ ಗಲಾಟೆ ನಡೆದಿದೆ. ವಿದ್ಯಾರ್ಥಿಗಳು ನಡುರಸ್ತೆಯಲ್ಲಿ ಪರಸ್ಪರ ಹೊಡೆದಾಡುತ್ತಿರುವಾಗ ವೇಗವಾಗಿ ಬಂದ ಕಾರೊಂದು ಇಬ್ಬರು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಕೆಳಗೆ ಬೀಳುತ್ತಾರೆ. ಆದರೂ ಹೊಡೆದಾಟ ಮಾತ್ರ ನಿಂತಿಲ್ಲ.
ಅಲ್ಲದೇ ಕಾರು ಡಿಕ್ಕಿ ಹೊಡೆದಿದ್ದರು ವಿದ್ಯಾರ್ಥಿಗಳಿಗೆ ಅಂತ ಹಾನಿಯೇನು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಕಾರು ಡಿಕ್ಕಿ ಹೊಡೆದಾಗ ಕೆಳಗೆ ಬಿದ್ದ ಯುವಕರು ಕೂಡಲೇ ಮೇಲೆದ್ದು ಮತ್ತೆ ಹೊಡೆದಾಟಕ್ಕೆ ನಿಂತಿದ್ದಾರೆ. ಈ ಘಟನೆಯ ವಿಡಿಯೋವನ್ನು ವಿದ್ಯಾರ್ಥಿಗಳೇ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಹೊಡೆದಾಟದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕೊಪ್ಪಳ: ಹುಲಿಹೈದರ್‌ನಲ್ಲಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ: ಇಬ್ಬರ ಕೊಲೆಯಲ್ಲಿ ಅಂತ್ಯ
ಅಲ್ಲದೇ ವಿದ್ಯಾರ್ಥಿಗಳ ಈ ಹೊಡೆದಾಟದಿಂದ ಸ್ಥಳದಲ್ಲಿ ಟ್ರಾಫಿಕ್ ಜಾಮ್ (Traffic jam) ಉಂಟಾಗಿತ್ತು. ಈ ಕಾರು ಚಾಲಕ ಕೂಡ ಈ ಟ್ರಾಫಿಕ್‌ನಲ್ಲಿ ಸಿಲುಕಿ ಹಾಕಿಕೊಂಡಿದ್ದ. ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಬಳಿಕ ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಈ ಘಟನೆ ಬಗ್ಗೆ ವಿಚಾರಣೆ ಮುಂದುವರೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗಾಜಿಯಾಬಾದ್ ಗ್ರಾಮಿಣ ಪೊಲೀಸ್ ಅಧಿಕಾರಿ ಇರಾಜ್ ರಾಜಾ (Iraj Raja) ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಘಟನೆಗೆ ಸಂಬಂಧಿಸಿದಂತೆ ಕೆಲ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ವಿಡಿಯೋದಲ್ಲಿ ಕಾಣಿಸುವಂತೆ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.
ಜಮೀನು ವಿವಾದ, ನಡುರಸ್ತೆಯಲ್ಲೇ ಬಡಿದಾಟ ಮಹಿಳೆಯರಿಗೇ ದೊಣ್ಣೆಯಿಂದ ಥಳಿತ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ