ಕೋಚಿಂಗ್ ಸೆಂಟರ್‌ನಲ್ಲಿ ಅಗ್ನಿ ಅವಘಡದಲ್ಲಿ 13 ಸಾವು, ಪ್ರಾಣ ಉಳಿಸಲು ಕಟ್ಟಡದಿಂದ ಜಿಗಿದ ವಿದ್ಯಾರ್ಥಿಗಳು

Published : Jun 22, 2026, 05:53 PM IST
lucknow purnia area fire news students trapped in coaching center shop fire rescue operation

ಸಾರಾಂಶ

ಕೋಚಿಂಗ್ ಸೆಂಟರ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣದಲ್ಲಿ ಹೊತ್ತಿ ಉರಿದಿದೆ. ಪರಿಣಾಮ 13 ಮಂದಿ ಮೃತಪಟ್ಟರೆ, ಪ್ರಾಣ ಉಳಿಸಿಕೊಳ್ಳಲು ಕೆಲ ವಿದ್ಯಾರ್ಥಿಗಳು ಮೊದಲ ಮಹಡಿಯಿಂದ ಜಿಗಿದ ಘಟನೆ ನಡೆದಿದೆ.

ಲಖನೌ (ಜೂ.22) ವಾಣಿಜ್ಯ ಕಟ್ಟಡದಲ್ಲಿ ನಡೆಯುತ್ತಿದ್ದ ಕೋಚಿಂಗ್ ಸೆಂಟರ್ ಅಗ್ನಿ ಅವಘಡ ಸಂಭವಿಸಿದೆ. ಕ್ಷಣಾರ್ಧದಲ್ಲಿ ಬೆಂಕಿ ಜ್ವಾಲೆ ಅವರಿಸಿ ಎಲ್ಲವೂ ಭಸ್ಮವಾಗಿದೆ. ಬೆಂಕಿ ಅವಘಡದಲ್ಲಿ 13 ಮಂದಿ ಮೃತಪಟ್ಟಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಹಲವು ವಿದ್ಯಾರ್ಥಿಗಳು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದ ಘಟನೆ ಉತ್ತರ ಪದೇಶದ ಲಖನೌದಲ್ಲಿ ನಡೆದಿದೆ. ಇತ್ತ ಸುಟ್ಟ ಗಾಯ, ಜಿಗಿತದಿಂದ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆ ದಾಖಲಿಸಲಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಇದೇ ವೇಳೆ 13 ಮೃತೇದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ.

ಪ್ರಾಣ ಉಳಿಸಿಕೊಳ್ಳಲು ವಿದ್ಯಾರ್ಥಿಗಳ ಪರದಾಟ

ವಾಣಿಜ್ಯ ಕಟ್ಟಡದ ಮೊದಲ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ಕಾರ್ಯನಿರ್ವಹಿಸುತ್ತಿತ್ತು. ಇದೇ ಕಟ್ಟದಲ್ಲಿ ಇತರ ಸ್ಟೋರ್, ಶಾಪ್‌ಗಳು ಕಾರ್ಯನಿರ್ವಹಿಸುತ್ತಿತ್ತು. ಒಂದೇ ಸಮನೆ ಬೆಂಕಿ ಜ್ವಾಲೆ ಇಡೀ ಮೊದಲ ಮಹಡಿಗೆ ಹರಡಿದೆ. ಹೀಗಾಗಿ ವಿದ್ಯಾರ್ಥಿಗಳು ತಕ್ಷಣಕ್ಕೆ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಲವರು ಕಿಟಕಿಯಿಂದ ಪ್ರಾಣ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ವಿಡಿಯೋಗಳು ಲಭ್ಯವಾಗಿದೆ. ಪ್ರಾಣ ಉಳಿಸಿಕೊಳ್ಳಲು ಪ್ರಯತ್ನದ ನಡುವೆ ಬೆಂಕಿಯ ಕೆನ್ನಾಲಗೆಯಿಂದ ಹಲವರು ಕಟ್ಟಡದಿಂದ ಕೆಳಕ್ಕೆ ಬಿದ್ದಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ, ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಇದೇ ವೇಳೆ ರಕ್ಷಣಾ ಕಾರ್ಯಾಚರಣೆಗಳು ನಡೆದಿದೆ. ಗಾಯಗೊಂಡ ಹಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 13 ಮಂದಿ ಸ್ಥಳದಲ್ಲೆ ಸುಟ್ಟು ಕರಕಲಾಗಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಉಪಮುಖ್ಯಮಂತ್ರಿ ಸ್ಥಳಕ್ಕೆ ಭೇಟಿ

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸ್ಥಳಕ್ಕೆ ಧಾವಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಇದೇ ವೇಳೆ ಗಾಯಾಳುಗಳ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದೇ ವೇಳೆ ಪೊಲೀಸರ ಜೊತೆ ಚರ್ಚಿಸುವ ಬ್ರಿಜೇಶ್ ಪಾಠಕ್, ತನಿಖೆಗೆ ತೀವ್ರಗತಿಯಲ್ಲಿ ನಡೆಸುವಂತೆ ಸೂಚಿಸಿದ್ದಾರೆ. ಘಟನೆ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿರುವ ಬ್ರಿಜೇಶ್ ಪಾಠಕ್, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಇದೇ ವೇಳೆ ಮೃತರ ಕುಟುಂಬದ ಜೊತೆ ಉತ್ತರ ಪ್ರದೇಶ ಸರ್ಕಾರ ನಿಲ್ಲಲಿದೆ ಎಂದಿದ್ದಾರೆ.

ಮೂರು ಮಹಡಿಗಳ ಕಟ್ಟಡ ಇದಾಗಿದೆ. ಟಾಪ್ ಫ್ಲೋರ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಎಲ್ಲೆಡೆ ಹರಡಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ತಕ್ಷಣ ಪ್ರಾಣ ಉಳಿಸಿಕೊಳ್ಳಳು ಸಾಧ್ಯವಾಗಲಿಲ್ಲ. ಇತ್ತ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆ ಮಾಹಿತಿ ತರಿಸಿಕೊಂಡಿದ್ದಾರೆ. ಸಂತ್ರಸ್ತ ಕುಟುಂಬದ ಜೊತೆ ಮಾತನಾಡಿ ಎಲ್ಲಾ ಸಹಕಾರ ನೀಡಲು ಸೂಚಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಿಶುಗಳಿಗೆ ಟ್ಯಾಗ್​ ಹಾಕಿ ಮಾರಾಟ: ಬೆಚ್ಚಿ ಬೀಳಿಸೋ 'ಬೇಬಿ ಬಜಾರ್'​ ಮಾರುಕಟ್ಟೆ ಬಯಲಿಗೆ- ಗಂಡಿಗೆ 8, ಹೆಣ್ಣಿಗೆ 4 ಲಕ್ಷ
Shocking - Allu Arjun: : ಅಲ್ಲು ಅರ್ಜುನ್‌ಗೆ ಬಿಗ್ ಶಾಕ್ ನೀಡಿದ ಕೋರ್ಟ್! ಕಾನೂನು ಸಂಕಷ್ಟದ ಸರಪಳಿಯಲ್ಲಿ 'ಪುಷ್ಪ'ರಾಜ್!