ಬರ ಪರಿಹಾರ ಶಿಫಾರಸು ವರದಿ ಸಲ್ಲಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ

By Kannadaprabha News  |  First Published Apr 30, 2024, 12:42 PM IST

ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ 3400 ಕೋಟಿ ರು. ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿತು. ನಾವು 18000 ಕೋಟಿ ರು. ಪರಿಹಾರ ಕೇಳಿದ್ದೆವು, ಆದರೆ ಕೇಂದ್ರ ಕಡಿಮೆ ಪರಿಹಾರ ನೀಡಿದೆ ಎಂದು ದೂರಿತು.


ನವದೆಹಲಿ (ಏ.30): ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ 3400 ಕೋಟಿ ರು. ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿತು. ನಾವು 18000 ಕೋಟಿ ರು. ಪರಿಹಾರ ಕೇಳಿದ್ದೆವು, ಆದರೆ ಕೇಂದ್ರ ಕಡಿಮೆ ಪರಿಹಾರ ನೀಡಿದೆ ಎಂದು ದೂರಿತು. ಕೇಂದ್ರದ ವಿರುದ್ಧ ಕರ್ನಾಟಕ ಸರ್ಕಾರ ಬರ ಪರಿಹಾರಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಅರ್ಜಿ ಸೋಮವಾರ ಸುಪ್ರೀಂ ಕೋರ್ಟಲ್ಲಿ ಮತ್ತೊಮ್ಮೆ ವಿಚಾರಣೆಗೆ ಬಂದಾಗ, ನ್ಯಾ.ಬಿ.ಆರ್‌.ಗವಾಯಿ ಮತ್ತು ಸಂದೀಪ್‌ ಮೆಹ್ತಾ ಅವರಿದ್ದ ಪೀಠದ ಮುಂದೆ ಈ ವಿಚಾರ ಪ್ರಸ್ತಾಪಿಸಿದ ರಾಜ್ಯದ ಪರ ವಕೀಲ ಕಪಿಲ್‌ ಸಿಬಲ್‌ ಆಕ್ಷೇಪ ವ್ಯಕ್ತಪಡಿಸಿದರು.

ಆಗ ಕೇಂದ್ರ ಸರ್ಕಾರದ ಪರ ವಕೀಲರಾದ ಆರ್‌.ವೆಂಕಟರಮಣಿ , ಬರ ಪರಿಶೀಲನೆ ನಡೆಸಿದ ಅಂತರ್‌ ಸಚಿವಾಲಯ ಸಮಿತಿಯು ಶಿಫಾರಸು ಮಾಡಿದ ಪರಿಹಾರವನ್ನು ರಾಜ್ಯಕ್ಕೆ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಆಗ ಪೀಠವು ಆ ಶಿಫಾರಸು ವರದಿ ನೀಡುವಂತೆ ಕೇಳಿತು. ಸದ್ಯಕ್ಕೆ ತಮ್ಮ ಬಳಿ ಇಲ್ಲ ಎಂದು ವಕೀಲರು ಹೇಳಿದಾಗ, ಮುಂದಿನ ವಿಚಾರಣೆ ವೇಳೆ ಆ ವರದಿ ಸಲ್ಲಿಸುವಂತೆ ಸೂಚಿಸಿ ಪ್ರಕರಣದ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿತು. ಇದಕ್ಕೂ ಮುನ್ನ ಕರ್ನಾಟಕದ ಪರ ವಕೀಲರು ಬರ ಪರಿಹಾರ ಬಿಡುಗಡೆಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.

Tap to resize

Latest Videos

ಬಂಗಾಳ ಅಧಿಕಾರಿಗಳ ವಿರುದ್ಧ ತನಿಖೆಗೆ ತಡೆ: ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಪಶ್ಚಿಮ ಬಂಗಾಳದ ಅಧಿಕಾರಿಗಳ ಪಾತ್ರದ ಕುರಿತು ಸಿಬಿಐ ತನಿಖೆ ನಡೆಸಲು ಕಲ್ಕತ್ತಾ ಹೈಕೋರ್ಟ್‌ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್‌ ಸೋಮವಾರ ತಡೆಯಾಜ್ಞೆ ನೀಡಿದೆ. 25753 ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿ ಕಲ್ಕತಾ ಹೈಕೋರ್ಟ್‌ ಕಳೆದ ವಾರ ತೀರ್ಪು ಪ್ರಕಟಿಸಿತ್ತು. ಅದರ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ಈ ತಡೆ ನೀಡಿದೆ. ಮೇ 6ರಂದು ಮತ್ತೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಬಿಜೆಪಿ ನಿಲುವೇನು: ಡಿ.ಕೆ.ಶಿವಕುಮಾರ್‌

ಶಿಕ್ಕರ ನೇಮಕಾತಿ ಹಗರಣದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಸಿಬಿಐ ತನ್ನ ತನಿಖೆಯನ್ನು ನಡೆಸಬೇಕು. ಅಗತ್ಯ ಬಿದ್ದರೆ ಅಂತಹ ಅಧಿಕಾರಿಗಳನ್ನು ಕಸ್ಟಡಿಗೆ ತೆಗೆದುಕೊಳ್ಳಲೂಬಹುದು ಎಂದು ಹೈಕೋರ್ಟ್‌ ಸೂಚನೆ ನೀಡಿತ್ತು. ಹೈಕೋರ್ಟ್‌ ಶಿಕ್ಷಕರ ನೇಮಕಾತಿ ಪ್ರಕರಣ ಸಂಬಂಧ ಸ್ವೇಚ್ಛಾಚಾರದ ಆದೇಶ ಹೊರಡಿಸಿದೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಬಂಗಾಳ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

click me!