
ನವದೆಹಲಿ(ಮೇ.26): ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)ದ ನೂತನ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಕೇಂದ್ರ ಸಿಬ್ಬಂದಿ ಸಚಿವಾಲಯ ಮಂಗಳವಾರ ಪ್ರಕಟಣೆ ಹೊರಡಿಸಿದೆ. ಸಿಬಿಐ ನಿರ್ದೇಶಕರ ಹುದ್ದೆಯಲ್ಲಿ ಅವರು 2 ವರ್ಷ ಇರಲಿದ್ದಾರೆ.
ಮಹಾರಾಷ್ಟ್ರ ಕೇಡರ್‌ನ 1985ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಜೈಸ್ವಾಲ್ ಪ್ರಸಕ್ತ, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ನ ಪ್ರಧಾನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಒಟ್ಟು 109 ಅಧಿಕಾರಿಗಳ ಹೆಸರನ್ನು ಸಿಬಿಐ ನಿರ್ದೇಶಕರ ಹುದ್ದೆಗೆ ಪರಿಗಣಿಸಲಾಗಿತ್ತು. ಅಂತಿಮವಾಗಿ ಅದರಲ್ಲಿ 6 ಜನರ ಹೆಸರನ್ನು ಪ್ರಧಾನಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯಲ್ಲಿ ವಿಪಕ್ಷ ನಾಯಕರನ್ನು ಒಳಗೊಂಡ ಮೂವರ ಸಮಿತಿ ಮುಂದೆ ಇಡಲಾಗಿತ್ತು. ಸೋಮವಾರ ನಡೆದ ಸಭೆಯಲ್ಲಿ ಈ ಸಮಿತಿಯು ಸುಬೋಧ್ ಕುಮಾರ್, ಕುಮಾರ್ ರಾಜೇಶ್ ಚಂದ್ರ ಮತ್ತು ವಿ.ಎಸ್.ಕೆ.ಕೌಮುದಿ ಅವರ ಹೆಸರನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಿತ್ತು. ಈ ಪೈಕಿ ಸುಬೋಧ್ ಅವರನ್ನು ಅಂತಿಮವಾಗಿ ಹುದ್ದೆಗೆ ಆಯ್ಕೆ ಮಾಡಲಾಗಿದೆ.
2021ರ ಫೆ.2ರಂದು ಆರ್.ಕೆ.ಶುಕ್ಲಾ ನಿವೃತ್ತಿಯಾದ ಬಳಿಕ ಸಿಬಿಐ ನಿರ್ದೇಶಕರ ಹುದ್ದೆ ತೆರವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ