ಉತ್ತರ ಪ್ರದೇಶದ ಮದರಸಾಗಳಿಗೆ ಶುಕ್ರವಾರದ ಬದಲು ಭಾನುವಾರ ರಜೆ ?

Published : Dec 22, 2022, 11:02 AM IST
ಉತ್ತರ ಪ್ರದೇಶದ ಮದರಸಾಗಳಿಗೆ ಶುಕ್ರವಾರದ ಬದಲು ಭಾನುವಾರ ರಜೆ ?

ಸಾರಾಂಶ

ಉತ್ತರಪ್ರದೇಶದಲ್ಲಿ ಮದರಸಾಗಳಲ್ಲಿ ವಾರದ ರಜೆಯನ್ನು ಶುಕ್ರವಾರದ ಬದಲು ಭಾನುವಾರ ನಿಗದಿ ಮಾಡುವ ಪ್ರಸ್ತಾವನೆಯನ್ನು ಮುಂದಿನ ತಿಂಗಳು ಚರ್ಚಿಸಲಾಗುತ್ತದೆ ಎಂದು ಮದರಸಾ ಶಿಕ್ಷಣ ಮಂಡಳಿ ಅಧ್ಯಕ್ಷ ಇಫ್ತಿಕಾರ್‌ ಅಹಮ್ಮದ್‌ ಜಾವೇದ್‌ ಬುಧವಾರ ಹೇಳಿದ್ದಾರೆ.

ಲಕ್ನೋ: ಉತ್ತರಪ್ರದೇಶದಲ್ಲಿ ಮದರಸಾಗಳಲ್ಲಿ ವಾರದ ರಜೆಯನ್ನು ಶುಕ್ರವಾರದ ಬದಲು ಭಾನುವಾರ ನಿಗದಿ ಮಾಡುವ ಪ್ರಸ್ತಾವನೆಯನ್ನು ಮುಂದಿನ ತಿಂಗಳು ಚರ್ಚಿಸಲಾಗುತ್ತದೆ ಎಂದು ಮದರಸಾ ಶಿಕ್ಷಣ ಮಂಡಳಿ ಅಧ್ಯಕ್ಷ ಇಫ್ತಿಕಾರ್‌ ಅಹಮ್ಮದ್‌ ಜಾವೇದ್‌ ಬುಧವಾರ ಹೇಳಿದ್ದಾರೆ. ಶುಕ್ರವಾರ ಮುಸ್ಲಿಮರಿಗೆ ಪ್ರಾರ್ಥನೆ ದಿನವಾಗಿರುವ ಕಾರಣ ಆ ದಿನ ಮದರಸಾಗಳಿಗೆ ರಜೆ ಇರುತ್ತದೆ. ಆದರೆ ಮದರಸಾಗೆ ಏಕೆ ವಿಶೇಷ ಪ್ರಾಧಾನ್ಯ? ಇತರ ಶಿಕ್ಷಣ ಸಂಸ್ಥೆಗಳಂತೆ ಅವಕ್ಕೂ ಭಾನುವಾರ ರಜೆ ಇರಬೇಕು ಎಂಬುದು ಕೆಲವರ ಬೇಡಿಕೆ. ಹೀಗಾಗಿ ಈ ಬೇಡಿಕೆಯನ್ನು ಉತ್ತರ ಪ್ರದೇಶ ಸರ್ಕಾರ ಪರಿಶೀಲಿಸುತ್ತಿದೆ. ಈ ಕುರಿತು ಇತ್ತೀಚೆಗೆ ನಡೆದ ಮದರಸಾಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಇದರಲ್ಲಿ ಪರ-ವಿರೋಧ ವ್ಯಕ್ತವಾಯಿತು. ಜನವರಿಯಲ್ಲಿ ನಡೆಯಲಿರುವ ಸಭೆಯಲ್ಲಿ ರಜೆಯ ಕುರಿತ ಪ್ರಸ್ತಾವನೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಜಾವೇದ್‌ ಹೇಳಿದ್ದಾರೆ.

ಮದರಸಾಗಳಲ್ಲಿ ಮುಸ್ಲಿಮೇತರ ವಿದ್ಯಾರ್ಥಿಗಳು: ತನಿಖೆಗೆ ಆದೇಶ

Uttar Pradesh: ಮದರಸಾ ವಿದ್ಯಾರ್ಥಿಗಳಿಗಿಲ್ಲ ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸೌಟು, ಕುಕ್ಕರ್ ಹಿಡಿದು ನಿಲ್ಲಿ, SIR ವಿರುದ್ಧ ಹೋರಾಟಕ್ಕೆ ಮಹಿಳೆಯರಿಗೆ ಸಿಎಂ ಮಮತಾ ಬ್ಯಾನರ್ಜಿ ಕರೆ
ಮಧುಮೇಹ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: AIIMS ವೈದ್ಯರಿಂದ ಅದ್ಭುತ ಸಾಧನೆ, ಈಗ ಕೇವಲ 2 ಗಂಟೆಯಲ್ಲಿ ಗುಣಪಡಿಸಬಹುದು!