ನವದೆಹಲಿ(ಜು.01): ಪಶ್ಚಿಮ ಬಂಗಾಳ ಸರ್ಕಾರ, ರಾಜ್ಯಪಾಲರ ನಡುವಿನ ತಿಕ್ಕಾಟ ಒಂದೆಡೆಯಾದರೆ ಮತ್ತೊಂದಡೆ ಇದೀಗ ಸಿಎಂ ಮಮತಾ ಬ್ಯಾನರ್ಜಿ ಆತಂಕ ಹೆಚ್ಚಾಗಿದೆ. ಕಾರಣ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿದೆ. ಇದು ದೀದಿ ಟಿಎಂಸಿ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.
ಬಂಗಾಳ ರಾಜ್ಯಪಾಲರ ಮೇಲೆ ದೀದಿ ಭ್ರಷ್ಟಾಚಾರ ಆರೋಪ!
ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ ಬಳಿಕ ನಡೆದ ಹಿಂಸಾಚಾರ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಲು ಕೋರಲಾಗಿದೆ. ಈ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮಿತಿಸಿದೆ.
ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಹಾಗೂ ವಿನೀತ್ ಸರನ್ ನೇತೃತ್ವ ಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಮುಂದಾಗಿದೆ. ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ, ಪಶ್ಚಿಮ ಬಂಗಾಳ ಹಾಗೂ ಚುನಾವಣಾ ಆಯೋಗಕ್ಕೆ ನೊಟೀಸ್ ನೀಡಿದೆ.
ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ಜಸ್ಟೀಸ್!
ಹಿಂಸಾಚಾರ ಹಾಗೂ ರಾಷ್ಟ್ರಪತಿ ಆಳ್ವಿಕೆ ಕುರಿತು ಕೇಂದ್ರ ಸರ್ಕಾರ ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರು ಹಿಂದೂ ಮನಗಳಿಗೆ ಬೆಂಕಿ ಇಟ್ಟಿದ್ದಾರೆ. ಹಲವರ ಮೇಲೆ ಹಲ್ಲೆ ಮಾಡಿದ್ದಾರೆ. ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.