EVM ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಸಮ್ಮತಿ

Kannadaprabha News   | Asianet News
Published : Jan 20, 2022, 01:25 AM IST
EVM ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಸಮ್ಮತಿ

ಸಾರಾಂಶ

ಪಂಚರಾಜ್ಯಗಳ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ, ಚುನಾವಣೆಗಳಲ್ಲಿ ಮತಪತ್ರಗಳ ಬದಲಾಗಿ ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌ (ಇವಿಎಂ) ಬಳಕೆಯ ಸಾಂವಿಧಾನಿಕ ಮಾನ್ಯತೆಯನ್ನೇ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.

ನವದೆಹಲಿ (ಜ.20): ಪಂಚರಾಜ್ಯಗಳ ಚುನಾವಣೆಗೆ (UP Elections) ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ, ಚುನಾವಣೆಗಳಲ್ಲಿ ಮತಪತ್ರಗಳ ಬದಲಾಗಿ ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌ (ಇವಿಎಂ) ಬಳಕೆಯ ಸಾಂವಿಧಾನಿಕ ಮಾನ್ಯತೆಯನ್ನೇ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ (Supreme Court) ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆಗೆ ಮುಖ್ಯ ನ್ಯಾಯಮೂರ್ತಿ ನ್ಯಾ ಎನ್‌.ವಿ.ರಮಣ (N V Ramana) ಅವರನ್ನೊಳಗೊಂಡ ನ್ಯಾಯಪೀಠ ಅಂಗೀಕರಿಸಿದೆ.

ಉತ್ತರಪ್ರದೇಶ ಸೇರಿದಂತೆ 5 ರಾಜ್ಯಗಳಲ್ಲಿ ಶೀಘ್ರವೇ ಚುನಾವಣೆ ನಡೆಯಲಿದೆ. ಹೀಗಾಗಿ ಈ ಅರ್ಜಿಯ ತುರ್ತು ವಿಚಾರಣೆ ಅಗತ್ಯವಿದೆ ಎಂಬ ಅರ್ಜಿದಾರ ಎಂ.ಎಲ್‌.ಶರ್ಮಾ (M.L.Sharma) ಮನವಿಯನ್ನು ಸ್ವೀಕರಿಸಿದ ಎನ್‌.ವಿ.ರಮಣ ಅವರನ್ನೊಳಗೊಂಡ ನ್ಯಾಯಪೀಠ, ಅರ್ಜಿಯನ್ನು ಬೇರೊಂದು ಪೀಠ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ ಎಂದು ಹೇಳಿದರು.

UP Elections: ಮೊದಲ ಹಂತದ ಚುನಾವಣೆಗೆ ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ!

ವಾದ ಏನು?: ಚುನಾವಣೆಗಳಲ್ಲಿ ಮತಪತ್ರಗಳ ಬದಲಾಗಿ ಇವಿಎಂ (EVM) ಬಳಕೆಯನ್ನು ಜನಪ್ರತಿನಿಧಿಗಳ ಕಾಯ್ದೆ 61ಎಗೆ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಆದರೆ ಈ ಕುರಿತ ತಿದ್ದುಪಡಿಗೆ ಸಂಸತ್ತಿನ ಅನುಮೋದನೆ ಪಡೆದುಕೊಂಡಿಲ್ಲ. ಹೀಗಾಗಿ ಅದನ್ನು ಜನರ ಮೇಲೆ ಹೇರುವಂತಿಲ್ಲ. ಹೀಗಾಗಿ ಇವಿಎಂ ಬಳಕೆಗೆ ಅವಕಾಶ ಕಲ್ಪಿಸಿರುವ ಕಾಯ್ದೆಯನ್ನು ರದ್ದುಗೊಳಿಸಬೇಕು, ಅದನ್ನು ಅಕ್ರಮ ಮತ್ತು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಅರ್ಜಿಯಲ್ಲಿ ಕೇಂದ್ರ ಕಾನೂನು ಸಚಿವಾಲಯವನ್ನು ಪ್ರತಿವಾದಿಯಾಗಿ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅರ್ಜಿದಾರ ಎಂ.ಎಲ್‌.ಶರ್ಮಾ, ಇವಿಎಂ ಬಳಕೆಯನ್ನು ಅಸಾಂವಿಧಾನಿಕ ಎಂದು ಘೋಷಿಸಲು ಕೋರಿ ಅರ್ಜಿ ಸಲ್ಲಿಸಿದ್ದೇನೆ. ಅದಕ್ಕೆ ಬೇಕಾದ ಅಗತ್ಯ ದಾಖಲೆಗಳನ್ನೂ ಸಲ್ಲಿಸಿದ್ದೇನೆ. ಈ ಬಗ್ಗೆ ನ್ಯಾಯಾಲಯ ಸೂಕ್ತ ನಿರ್ಧಾರ ಕೈಗೊಳ್ಳಲಿ, ಮುಂಬರುವ ಪಂಚ ರಾಜ್ಯ ಚುನಾವಣೆಗಳು ಮತಪತ್ರಗಳನ್ನು ಬಳಸಿ ನಡೆಸಲಿ ಎಂದು ಹೇಳಿದ್ದಾರೆ.

ಇವಿಎಂ ಯುಗ: 90ಕ್ಕೂ ಮುನ್ನ ದೇಶದಲ್ಲಿ ಚುನಾವಣೆಗೆ ಮತಪತ್ರ ಬಳಸಲಾಗುತ್ತಿತ್ತು. ಆದರೆ ಚುನಾವಣೆ ವೇಳೆ ಅಕ್ರಮ ಮತದಾನ, ಮತಗಟ್ಟೆವಶದಂಥ ಪ್ರಕರಣಗಳು ವ್ಯಾಪಕವಾಗಿ ನಡೆಯುತ್ತಿದ್ದ ಕಾರಣ, ಅವುಗಳಿಗೆ ಬ್ರೇಕ್‌ ಹಾಕಲು ಇವಿಎಂಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಯಿತು. ಕೇಂದ್ರ ಸರ್ಕಾರಿ ಸ್ವಾಮ್ಯದ ಎಲೆಕ್ಟ್ರಾನಿಕ್ಸ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ ಮತ್ತು ಭಾರತ್‌ ಎಲೆಕ್ಟ್ರಾನಿಕ್ಸ್‌ ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌ಗಳನ್ನು ಅಭಿವೃದ್ಧಿಪಡಿಸಿದವು. 

Uttarakhand Elections: ಬಿಪಿನ್ ರಾವತ್ ತಮ್ಮ ಬಿಜೆಪಿಗೆ, ಸಿಎಂ ಭೇಟಿ ಬೆನ್ನಲ್ಲೇ ಜೋರಾದ ಚರ್ಚೆ!

1982ರಲ್ಲಿ ಮೊದಲ ಬಾರಿಗೆ ಕೇರಳ ವಿಧಾನಸಭೆ ಉಪಚುನಾವಣೆಯಲ್ಲಿ ಇದನ್ನು ಬಳಸಲಾಯಿತು. ಆದರೆ ಆಗಿನ್ನು ಇವಿಎಂಗಳಿಗೆ ಕಾಯ್ದೆಯ ಬೆಂಬಲ ಇರಲಿಲ್ಲ. ಈ ಹಿನ್ನೆಲೆಯಲ್ಲಿ 1992ರಲ್ಲಿ ಕೇಂದ್ರ ಸರ್ಕಾರ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಅದಕ್ಕೆ ಕಾನೂನಿನ ಬಲ ತುಂಬಿತು. 1999ರಲ್ಲಿ ಗೋವಾ ಚುನಾವಣೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಮತ್ತು 2003ರ ಬಳಿಕ ಎಲ್ಲಾ ಚುನಾವಣೆಗಳಲ್ಲೂ ದೊಡ್ಡ ಪ್ರಮಾಣದಲ್ಲಿ ಇವಿಎಂಗಳ ಬಳಕೆ ಆರಂಭವಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!